ಲಾಕ್ಡೌನ್ ನಿಯಮ ಸಡಿಲಗೊಳಿಸುವಂತೆ ಬರ್ಲಿನಲ್ಲೂ ಪ್ರತಿಭಟನೆ
Team Udayavani, Apr 28, 2020, 4:39 PM IST
ಬರ್ಲಿನ್: ಲಾಕ್ಡೌನ್ ನಿಯಮಗಳನ್ನು ಸಡಿಲಗೊಳಿಸುವಂತೆ ಈ ಹಿಂದೆ ಅಮೆರಿಕದ ಪ್ರಜೆಗಳು ಪ್ರತಿಭಟನೆ ನಡೆಸಿದ್ದರು. ಈಗ ಜರ್ಮನ್ನರ ಸರದಿ.
ಕಳೆದ 2 ತಿಂಗಳಿನಿಂದ ದೇಶವ್ಯಾಪಿ ಜಾರಿ ಮಾಡಲಾದ ಲಾಕ್ಡೌನ್ ನಿಯಮಗಳನ್ನು ತೆರವುಗೊಳಿಸುವಂತೆ ಕೆಲ ಗುಂಪುಗಳು ಬರ್ಲಿನ್ನಲ್ಲಿ ಪ್ರತಿಭಟನೆ ಮಾಡುತ್ತಿವೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸಾವಿರಕ್ಕೂ ಹೆಚ್ಚು ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಶನಿವಾರ ಪೊಲೀಸರು ಲಾಕ್ಡೌನ್ ನಿಯಮ ಉಲ್ಲಂ ಸಿದ್ದಕ್ಕೆ ಸುಮಾರು 1 ಸಾವಿರಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.
ಜರ್ಮನ್ ರಾಜಧಾನಿ ಸೇರಿದಂತೆ ಹಲವೆಡೆ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿವೆ. ಜತೆಗೆ ಹೋರಾಟ ನಡೆಸುವುದು ಹವ್ಯಾಸದಂತಾಗಿದೆ ಎಂಬ ಆರೋಪವೂ ವ್ಯಕ್ತವಾಗಿದೆ.
ಚಾನ್ಸೆಲರ್ಏಂಜೆಲಾ ಮರ್ಕೆಲ್ ಅವರ ವಿರುದ್ಧ ಕೆಲವು ಪ್ರತಿಭಟನಾಕಾರರು ಜನರ ದೈನಂದಿನ ಬದುಕನ್ನು ಅಸ್ತವ್ಯಸ್ತಗೊಳಿಸಿದ್ದಾರೆ ಎಂಬ ಸಂದೇಶ ಹೊತ್ತ ಟಿಶರ್ಟ್ಗಳನ್ನು ಧರಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು “ಸ್ವಾತಂತ್ಯ ನೀಡಿ ಎಂದು ಆಗ್ರಹಿಸಿದರೆ, ಮತ್ತೂ ಹಲವರು ದೇಶದಲ್ಲಿ ನಡೆಯುತ್ತಿರುವ “ಔಷಧೀಯ ಲಾಬಿಯನ್ನು ತಡೆಗಟ್ಟಿ ಎಂಬ ಘೋಷಣೆಗಳನ್ನು ಹೊಂದಿರುವ ಫಲಕಗಳನ್ನು ಪ್ರದರ್ಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.