Channapatana: ಮೈತ್ರಿ ಮುರಿಯಲು ರೆಡಿಯಾದ ಸಿ.ಪಿ.ಯೋಗೇಶ್ವರ್!
ಬಿಜೆಪಿ ಕಾರ್ಯಕರ್ತರು, ಬೆಂಬಲಿಗರ ಜತೆ ಇಂದು ಸಭೆ
Team Udayavani, Oct 16, 2024, 7:25 AM IST
ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿ ರಾಜಕೀಯ ಚಟುವಟಿಕೆ ಚುರುಕಾಗಿದೆ. ಟಿಕೆಟ್‌ಗಾಗಿ ಜೆಡಿಎಸ್-ಬಿಜೆಪಿ ಹಗ್ಗಜಗ್ಗಾಟದ ನಡುವೆಯೂ ಮೈತ್ರಿ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿದ್ದ, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಬುಧವಾರ ಖಾಸಗಿ ರೆಸಾರ್ಟ್‌ನಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರ ಸಭೆ ಕರೆದಿದ್ದಾರೆ.
ಮೊದಲಿನಿಂದಲೂ ತಾವಿರುವ ಪಕ್ಷಗಳಿಗೇ ಟಾಂಗ್ ಕೊಡುವಲ್ಲಿ ಪರಿಣತರಾಗಿರುವ ಯೋಗೇಶ್ವರ್, ಬಿಜೆಪಿ ಕೇಂದ್ರ ವರಿಷ್ಠರ ಕಿವಿ ಮಾತಿನ ನಡುವೆಯೂ ತಮ್ಮ ಬೆಂಬಲಿಗರ ಸಭೆ ಕರೆಯುವ ಮೂಲಕ ಬಂಡಾಯದ ಕಹಳೆ ಊದುತ್ತಿದ್ದಾರೆ. ಮೈತ್ರಿ ಟಿಕೆಟ್ ತಮಗೇ ಎಂದು ಭರವಸೆ ವ್ಯಕ್ತಪಡಿಸುತ್ತಿದ್ದ ಅವರು ಇತ್ತೀಚಿನ ರಾಜಕೀಯ ಬೆಳವಣಿಗೆಯಿಂದಾಗಿ ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಡಾಯದ ಅಸ್ತ್ರ ಪ್ರಯೋಗಿಸುತ್ತಾರೆಯೇ ಎಂಬ ಕುತೂಹಲ ಮೂಡಿದೆ.
ಬಿಜೆಪಿ ರಾಜ್ಯ ನಾಯಕರು ಉಪಚುನಾವಣೆಯಲ್ಲಿ ಯೋಗೇಶ್ವರ್‌ಗೆ ಟಿಕೆಟ್ ಬೇಕು ಎಂದು ಶಿಫಾರಸು ಮಾಡಿದ್ದರೂ, ಕುಮಾರಸ್ವಾಮಿ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಾರಿ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಟಿಕೆಟ್ ಬಿಟ್ಟುಕೊಟ್ಟರೆ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆ ಕಷ್ಟ ಎಂದು ಜಿಲ್ಲಾ ಬಿಜೆಪಿ ಘಟಕ ಆತಂಕ ವ್ಯಕ್ತಪಡಿಸಿದೆ. ಈ ಎಲ್ಲಾ ಬೆಳ ವಣಿಗೆಗಳ ನಡುವೆ ಯೋಗೇಶ್ವರ್ ಸಭೆ ಸಾಕಷ್ಟು ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.