ಮಾದಕ ದ್ರವ್ಯದ ವಿರುದ್ಧ ಕಾರ್ಯಾಚರಣೆ: 40 ಮಂದಿ ವಶಕ್ಕೆ
ಮಲ್ಪೆ, ಶಿರ್ವ ಸಹಿತ ಜಿಲ್ಲಾದ್ಯಂತ ಪೊಲೀಸ್ ದಾಳಿ
Team Udayavani, Aug 24, 2022, 5:55 AM IST
ಉಡುಪಿ: ಮಾದಕ ದ್ರವ್ಯದ ವಿರುದ್ಧ ಉಡುಪಿ ಜಿಲ್ಲಾ ಪೊಲೀಸರು ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದು, ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿ ಒಟ್ಟು 40 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆ. 20ರಂದು ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಪು ಬಳಿ ವಿನಯ ನಗರದ ಮುಸ್ತಾಫ್(30), ಅಶ್ರಫ್(35), ಉಡುಪಿ ನಗರ ಠಾಣಾ ವ್ಯಾಪ್ತಿಯ ಕುತ್ಪಾಡಿ ಗ್ರಾಮದ ಅನಂತಕೃಷ್ಣ ನಗರದ ಬಳಿ ಸ್ಥಳೀಯ ನಿವಾಸಿ ಇರ್ಷಾದ್ ಖಾನ್(32), ನಗರದ ಬೋರ್ಡ್ ಹೈಸ್ಕೂಲ್ ಬಳಿ ಶಿರಿಬೀಡುವಿನ ಶರ್ವೀನ್ (20), ಕುಂಜಿಬೆಟ್ಟು ಎಂಜಿಎಂ ಕಾಲೇಜು ಎದುರು ಮಾರ್ಪಳ್ಳಿಯ ಸಮೀದ್ (20), ಆ.21ರಂದು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಜಂಕ್ಷನ್ ಬಳಿ ರೋಬನ್ ಡಿ’ಅಲ್ಮೇಡಾ(21), ಉಡುಪಿ ಸೆನ್ ಪೊಲೀಸರು ಕಾರ್ಕಳ ರಾಮಸಮುದ್ರ ಕೆರೆಯ ಬಳಿ ಮಟಾ³ಡಿ ಗ್ರಾಮದ ಯೋಗೀಶ್ ಗಾಣಿಗ(25), ಶಿವಮೊಗ್ಗ ಜಿಲ್ಲೆಯ ಹೊಸನಗರದ ಶ್ರೇಯಸ್(20), ಕೊಪ್ಪ ತಾಲೂಕಿನ ನಂದೀಶ್(22) ಅವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ.
ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾರಾಂತ್ಯದಲ್ಲಿ ಮಾದಕ ದ್ರವ್ಯದ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಈ ಸಂಬಂಧ ಒಟ್ಟು 40 ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರವಾಸಿ ತಾಣಗಳು, ಶಿಕ್ಷಣ ಸಂಸ್ಥೆಗಳ ಪರಿಸರ ಸೇರಿದಂತೆ ವಿವಿಧ ಸ್ಥಳಗಳಲ್ಲಿ ವಿಶೇಷ ನಿಗಾ ವಹಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬಿಗಿಯಾಗಿ ಕಾರ್ಯಾಚರಣೆಯನ್ನು ಮುಂದುವರಿಸಲಾಗುವುದು.
-ಹಾಕೆ ಅಕ್ಷಯ್ ಮಚ್ಚಿಂದ್ರ,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.