ಪ್ರಾಂಶುಪಾಲರಲ್ಲಿ ಸಿಟ್ಟು: ವಿದ್ಯಾರ್ಥಿನಿ ಆತ್ಮಹತ್ಯೆ
Team Udayavani, Feb 18, 2022, 9:15 PM IST
ಬೆಂಗಳೂರು: ನಗರದ ಖಾಸಗಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪ್ರಾಂಶುಪಾಲರು ಸಹಿತ ಕೆಲವರ ವಿರುದ್ಧ ಡೆತ್‌ನೋಟ್ ಬರೆದಿಟ್ಟು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಟಿ. ದಾಸರಹಳ್ಳಿ ನಿವಾಸಿ ಕೆ.ಎಸ್.ರಮ್ಯಾ ಮೂರ್ತಿ (15) ಆತ್ಮಹತ್ಯೆ ಮಾಡಿಕೊಂಡವಳು. ಆಕೆಯ ತಂದೆ ಪೇಜ್ ಡಿಸೈನರ್ ಆಗಿದ್ದು, ತಾಯಿ ಶಿಕ್ಷಕಿಯಾಗಿದ್ದಾರೆ. ಐದಾರು ತಿಂಗಳ ಹಿಂದೆ ರಮ್ಯಾ ಶಾಲೆಗೆ ಸ್ನ್ಯಾಕ್ಸ್ ತೆಗೆದುಕೊಂಡು ಹೋಗಿದ್ದು, ಅದಕ್ಕೆ ಆಡಳಿತ ಮಂಡಳಿ ಆಕ್ಷೇಪಿಸಿ ಪೋಷಕರನ್ನು ಕರೆಸಿ ಎಚ್ಚರಿಕೆ ನೀಡಿದ್ದರು. ಅದರಿಂದ ಬೇಸರಗೊಂಡ ಆಕೆಯ ತಾಯಿಯು ಶಾಲೆ ವಿರುದ್ಧ ಮಾನವ ಹಕ್ಕುಗಳಿಗೆ ದೂರು ನೀಡಿದ್ದರು. ಅದೇ ವಿಚಾರದಲ್ಲಿ ಪ್ರಾಂಶುಪಾಲರು ಸಹಿತ ಕೆಲವರು ಆಕೆಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಡೆತ್‌ನೋಟ್‌ನಲ್ಲಿ ಆರೋಪ
ವಿದ್ಯಾರ್ಥಿನಿ ಆತ್ಮಹತ್ಯೆಗೂ ಮೊದಲು ಡೆತ್‌ನೋಟ್ ಬರೆದಿದ್ದು, ಅದರಲ್ಲಿ “I hate you principal’ ಹಾಗೂ ಕೆಲವು ವಿದ್ಯಾರ್ಥಿಗಳ ಹೆಸರನ್ನು ಉಲ್ಲೇಖಿಸಿ, “ಎಲ್ಲರನ್ನು ವಿರೋಧಿಸುತ್ತೇನೆ’ ಎಂದು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ರೈಲ್ವೆ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.