ಚಿನ್ನದ ವ್ಯಾಪಾರಿಗಳಿಗೆ ವಂಚಿಸಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿಯ ಸೆರೆ
Team Udayavani, Dec 30, 2021, 2:00 PM IST
ಬೆಂಗಳೂರು : ಜ್ಯುವೆಲ್ಲರಿ ಮಾಲೀಕರಿಗೆ ಚಿನ್ನಾಭರಣ ಮಾಡಿಕೊಡುವುದಾಗಿ ನಂಬಿಸಿ ಚಿನ್ನದ ಗಟ್ಟಿ ಮತ್ತು ಆಭರಣ ಪಡೆದುಕೊಂಡು ವಂಚಿಸಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿಯನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಸುನೀಲ್ ಕುಮಾರ್ ಬೌಲ್ (63) ಬಂಧಿತ. ಆರೋಪಿಯಿಂದ 55 ಲಕ್ಷ ರೂ. ಮೌಲ್ಯದ 947 ಗ್ರಾಂ ತೂಕದ ವಿವಿಧ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಆರೋಪಿ ಯಿಂದ ಜಯನಗರ ಠಾಣೆಯಲ್ಲಿ ದಾಖಲಾಗಿದ್ದ ಎರಡು, ಕಬ್ಬನ್ ಪಾರ್ಕ್ ಠಾಣೆಯ 1 ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.
ಆರೋಪಿ ಜಯನಗರ 5ನೇ ಬ್ಲಾಕ್ ನಲ್ಲಿರುವ ಜ್ವಾಲಮಾಲ ಎಂಬ ಜ್ಯುವೆಲ್ಲರ್ಸ್ ಮಾಲೀಕರಾದ ರಾಕೇಶ್ ಬೆಳ್ಳೂರು ಅವ ರಿಗೆ 271 ಗ್ರಾಂ ಚಿನ್ನದ ಆಭರಣಗಳು ಹಾಗೂ ಚಿನ್ನದ ಗಟ್ಟಿ ಪಡೆದುಕೊಂಡಿದ್ದ. ಅಲಂಕೃತಿ ಜ್ಯುವೆಲ್ಲರಿ ಅಂಗಡಿಯ ರಾಕೇಶ್ ಅವರಿಂದ116 ಗ್ರಾಂ ಚಿನ್ನಾಭರಣ, ಗಟ್ಟಿ ಪಡೆದು ತಲೆಮರೆಸಿಕೊಂಡಿದ್ದನು. ಈ ಬಗ್ಗೆ ಜಯನಗರ ಠಾಣೆಯಲ್ಲಿ
ದೂರು ದಾಖಲಾಗಿತ್ತು. ಅಲ್ಲದೆ, ಕಬ್ಬನ್ ಪಾರ್ಕ್ ಠಾಣೆ ವ್ಯಾಪ್ತಿಯ ನವರತನ್ ಜ್ಯುವೆಲ್ಲರ್ಸ್ ಅವರಿಂದ 717 ಗ್ರಾಂ ಚಿನ್ನಾಭರಣ ಪಡೆದುಕೊಂಡು ವಂಚಿಸಿದ್ದ ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.
ಆರೋಪಿಯ ವಿಚಾರಣೆಯಲ್ಲಿ ಅವೆನ್ಯೂ ರಸ್ತೆಯಲ್ಲಿರುವ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಅಡಮಾನ ಇಟ್ಟಿದ್ದ. ಈ ಎಲ್ಲ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ : ವಿಜಯಪುರ: ಕಾಂಗ್ರೆಸ್ ಮೇಲುಗೈ, ಖಾತೆ ತೆರೆದ ಓವೈಸಿಯ ಎಂಐಎಂ
ಕೋರ್ಟ್‌ಗೆ ಶರಣಾಗಿದ್ದ ಆರೋಪಿ!
ಆರೋಪಿ 3 ವರ್ಷಗಳ ಹಿಂದೆ ಕೃತ್ಯ ಎಸಗಿ ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ. ಇತ್ತೀಚೆಗೆ ಜಯನಗರ ಪೊಲೀಸರು ಆರೋಪಿಯ ಬಂಧನಕ್ಕೆ ತೆರಳಿದಾಗ, ಆತನ ಈ ಮಾಹಿತಿ ತಿಳಿದುಕೊಂಡು ನೇರವಾಗಿ ಬೆಂಗಳೂರಿನ ಕೋರ್ಟ್‌ಗೆ ಶರಣಾಗಿದ್ದ. ಬಳಿಕ ಆತನನ್ನು ವಶಕ್ಕೆ ಪಡೆದುಕೊಂಡು, ಅಡಮಾನ ಇಟ್ಟಿದ್ದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.