ಪ್ರತ್ಯೇಕ ಪಾಲ್ತಾಡಿ ಗ್ರಾ.ಪಂ.ಗೆ ಹೆಚ್ಚಿದ ಕೂಗು
ಗ್ರಾಮದಲ್ಲಿ ಒಟ್ಟು 610 ಕುಟುಂಬ, 3,363 ಜನಸಂಖ್ಯೆ
Team Udayavani, Mar 5, 2023, 2:21 PM IST
ಸವಣೂರು: ಕಡಬ ತಾಲೂಕಿನ ಸವಣೂರು ಗ್ರಾ.ಪಂ. ವ್ಯಾಪ್ತಿಗೊಳಪಟ್ಟಿರುವ ಪಾಲ್ತಾಡಿ ಗ್ರಾಮವನ್ನು ಪ್ರತ್ಯೇಕ ಗ್ರಾ.ಪಂ. ಮಾಡಬೇಕು ಎಂಬ ಕೂಗು ಮತ್ತೆ ಮುನ್ನಲೆಗೆ ಬಂದಿದೆ. 2014ರಲ್ಲಿ ಗ್ರಾಮ ಪಂಚಾಯತ್ ಪುನರ್‌ವಿಂಗಡಣೆ ಸಮಯದಲ್ಲಿಯೇ ಗ್ರಾಮಸ್ಥರಿಂದ ಪ್ರತ್ಯೇಕ ಗ್ರಾ.ಪಂ.ನ ಬೇಡಿಕೆ ವ್ಯಕ್ತವಾಗಿತ್ತು. ಬಳಿಕ ಗ್ರಾಮಸ್ಥರು ಕಂದಾಯ ಇಲಾಖೆಯ ಸಚಿವರಿಗೆ, ಗ್ರಾ.ಪಂ. ಪುನರ್ ವಿಂಗಡಣೆ ಸಮಿತಿಗೆ, ಇಲಾಖೆಯ ನಿರ್ದೇಶಕರಿಗೂ ಮನವಿ ಸಲ್ಲಿಸಲಾಗಿತ್ತು. ಆದರೆ ಸರಕಾರ 2015ರಲ್ಲಿ ಘೋಷಣೆ ಮಾಡಿದ ನೂತನ ಗ್ರಾ.ಪಂ.ಗಳ ಪಟ್ಟಿಯಲ್ಲಿ ಪಾಲ್ತಾಡಿ ಹೆಸರು ಇಲ್ಲವಾಗಿತ್ತು. ಈ ಭಾಗದ ಜನತೆಯ ಪ್ರತ್ಯೇಕ ಗ್ರಾ.ಪಂ. ಕನಸು ಕನಸಾಗಿಯೇ ಉಳಿದಿದೆ. ಮುಂದಿನ ಬಾರಿಯಾದರೂ ನೂತನ ಗ್ರಾ.ಪಂ. ಆಗುವುದೇ ಎಂಬ ಆಶಾಭಾವನೆ ಇಲ್ಲಿನ ಗ್ರಾಮಸ್ಥರದ್ದು.
610 ಕುಟುಂಬಗಳಿವೆ
ಪಾಲ್ತಾಡಿ ಗ್ರಾಮದ ಒಟ್ಟು ವಿಸ್ತೀರ್ಣ 2668.10 ಎಕರೆ ಆಗಿದ್ದು, ಅರಣ್ಯ ಜಮೀನಿನ ವಿಸ್ತೀರ್ಣ 338.73 ಆಗಿದೆ. ಈ ಗ್ರಾಮದಲ್ಲಿ ಒಟ್ಟು 610 ಕುಟುಂಬಗಳು ವಾಸ್ತವ್ಯವಿದೆ. 2011ರ ಜನಗಣತಿಯ ಪ್ರಕಾರ 2,838 ಜನಸಂಖ್ಯೆ ಇದ್ದು, ಪ್ರಸ್ತುತ 3,363 ಜನಸಂಖ್ಯೆ ಇದೆ. ಇದರಲ್ಲಿ 801 ಪರಿಶಿಷ್ಟ ಜಾತಿ, 294 ಪರಿಶಿಷ್ಟ ಪಂಗಡ, 2,268 ಮಂದಿ ಇತರರು ಇದ್ದಾರೆ. ಗ್ರಾಮವು 2 ವಾರ್ಡ್‌ಗಳನ್ನು ಹೊಂದಿದ್ದು, 8 ಗ್ರಾ.ಪಂ. ಸದಸ್ಯರಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದ ಬೂತ್ ಸಂಖ್ಯೆ 70 (ಪಾಲ್ತಾಡಿ ವಾರ್ಡ್ 1)ರಲ್ಲಿ 1,255 ಮತದಾರರು ಇದ್ದು, 651 ಪುರುಷರು, 604 ಮಹಿಳಾ ಮತದಾರರು. ಬೂತ್ ಸಂಖ್ಯೆ 71ರಲ್ಲಿ (ಪಾಲ್ತಾಡಿ ವಾರ್ಡ್ 2) ರಲ್ಲಿ 986 ಮತದಾರರು ಇದ್ದು, 494 ಪುರುಷರು, 492 ಮಹಿಳಾ ಮತದಾರರು
ಇದ್ದಾರೆ. ಒಟ್ಟು ಗ್ರಾಮದಲ್ಲಿ 2,241 ಮಂದಿ ಮತದಾರರು ಪಾಲ್ತಾಡಿ ಗ್ರಾಮದಲ್ಲಿದ್ದಾರೆ. ದ.ಕ. ಸಂಸದ ನಳಿನ್ ಕುಮಾರ್
ಕಟೀಲು ಅವರ ಹುಟ್ಟೂರು ಪಾಲ್ತಾಡಿ ಗ್ರಾಮದ ಕುಂಜಾಡಿಯಾಗಿದೆ.
ವಿವಿಧ ಸೌಕರ್ಯಗಳಿವೆ
ಪಾಲ್ತಾಡಿ, ಅಂಕತ್ತಡ್ಕ, ಮಂಜುನಾಥ ನಗರದಲ್ಲಿ ಸ.ಹಿ.ಪ್ರಾ. ಶಾಲೆ, ಚೆನ್ನಾವರದಲ್ಲಿ ಕಿ.ಪ್ರಾ. ಶಾಲೆ ಇದೆ. ಮಂಜುನಾಥ ನಗರದಲ್ಲಿ ಸರಕಾರಿ ಪ್ರೌಢಶಾಲೆ ಹಾಗೂ
ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಅಂಕತ್ತಡ್ಕ, ಮಂಜುನಾಥ ನಗರ, ಚೆನ್ನಾವರ, ಪಾಲ್ತಾಡಿ, ಉಪ್ಪಳಿಗೆಯಲ್ಲಿ ಅಂಗನವಾಡಿ ಕೇಂದ್ರಗಳಿವೆ. ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶಾಖೆಯೂ ಪಾಲ್ತಾಡಿಯ ಅಂಕತ್ತಡ್ಕದಲ್ಲಿ ಇದೆ. ಅಂಕತ್ತಡ್ಕದಲ್ಲಿ ಕೊಳ್ತಿಗೆ ಸಹಕಾರಿ ಸಂಘದ ಹಾಗೂ ಮಂಜುನಾಥನಗರದಲ್ಲಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನ್ಯಾಯಬೆಲೆ ಅಂಗಡಿ ಇದೆ. ಚೆನ್ನಾವರ, ಅಂಕತ್ತಡ್ಕದಲ್ಲಿ ಮಸೀದಿ, ಮದ್ರಸ ಇವೆ. ಮಂಜುನಾಥ ನಗರ, ಪಾದೆಬಂಬಿಲ, ಅಲ್ಯಾಡಿಯ ಭಜನ ಮಂದಿರಗಳಿವೆ. ಮಂಜುನಾಥ ನಗರದಲ್ಲಿ ಸುವರ್ಣ ಗ್ರಾಮ ಯೋಜನೆಯಲ್ಲಿ ನಿರ್ಮಾಣಗೊಂಡ ಸಮುದಾಯ ಭವನವೂ ಇದೆ. ದೇವಸ್ಥಾನ, ದೈವಸ್ಥಾನಗಳಿದೆ. ಬಂಬಿಲ ಮತ್ತು ಉಪ್ಪಳಿಗೆಯಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘವಿದೆ. ಯುವಕ ಮಂಡಲ, ಯುವತಿ ಮಂಡಲ ಸಹಿತ ವಿವಿಧ ಸಾಮಾಜಿಕ, ಧಾರ್ಮಿಕ ಸಂಘ ಸಂಸ್ಥೆಗಳೂ ಇವೆ. ಗ್ರಾ.ಪಂ.ಗೆ ಸೂಕ್ತವಾದ ನಿವೇಶನವೂ ಪಾಲ್ತಾಡಿ ಗ್ರಾಮದಲ್ಲಿದೆ. ಒಟ್ಟಿನಲ್ಲಿ ಪಾಲ್ತಾಡಿಯನ್ನು ಪ್ರತ್ಯೇಕ ಗ್ರಾ.ಪಂ. ಆಗಿ ಮಾಡಬೇಕೆನ್ನುವ ಬೇಡಿಕೆ ಪ್ರಬಲವಾಗಿದೆ.
ಗ್ರಾಮವಾಸ್ತವ್ಯದಲ್ಲಿ ಪ್ರಸ್ತಾವ
ಕಡಬ ತಾಲೂಕಿನ ದೋಳ್ಪಾಡಿಯಲ್ಲಿ ನಡೆದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯದಲ್ಲಿ ಪಾಲ್ತಾಡಿ ಗ್ರಾಮವನ್ನು ಪ್ರತ್ಯೇಕ ಗ್ರಾ.ಪಂ. ಮಾಡಬೇಕೇಂಬ ಬೇಡಿಕೆಯನ್ನು ಗ್ರಾಮಸ್ಥರು ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದ್ದರು. ಪಾಲ್ತಾಡಿ ಗ್ರಾಮವನ್ನು ಪ್ರತ್ಯೇಕ ಗ್ರಾ.ಪಂ. ಆಗಿ ಮಾಡಬೇಕೆನ್ನುವ ನಿಟ್ಟಿನಲ್ಲಿ ಹಲವು ವರ್ಷಗಳಿಂದ ಸಾಕಷ್ಟು ಪ್ರಯತ್ನನಡೆಸಲಾಗುತ್ತಿದೆ. ಮುಂದಿನ ಬಾರಿಯಾದರೂ ಪಾಲ್ತಾಡಿಯನ್ನು ಪ್ರತ್ಯೇಕ ಗ್ರಾ.ಪಂ. ಆಗಿ ಮಾಡಬೇಕು ಎಂದು ಸವಣೂರು ಗ್ರಾ.ಪಂ.ನ ಮಾಜಿ ಉಪಾಧ್ಯಕ್ಷ ಪಿ.ಎನ್. ಕಿಟ್ಟಣ್ಣ ರೈ ನಡುಕೂಟೇಲು ಹೇಳಿದ್ದಾರೆ.
7 ವರ್ಷಗಳಿಂದ ಪ್ರಸ್ತಾವ
ಪಾಲ್ತಾಡಿಯನ್ನು ಪ್ರತ್ಯೇಕ ಗ್ರಾ.ಪಂ. ಆಗಬೇಕೆಂಬ ನಿಟ್ಟಿನಲ್ಲಿ ಗ್ರಾ.ಪಂ. ಸಾಮಾನ್ಯ ಸಭೆ, ಗ್ರಾಮಸಭೆಗಳಲ್ಲಿ ಕಳೆದ 7 ವರ್ಷಗಳಿಂದ ಪ್ರಸ್ತಾವಿಸಿ, ಸರಕಾರಕ್ಕೂ ಮನವಿ ಸಲ್ಲಿಸಲಾಗಿದೆ.
-ಸತೀಶ್ ಅಂಗಡಿಮೂಲೆ, ಸದಸ್ಯರು ಸವಣೂರು ಗ್ರಾ.ಪಂ.
ಪ್ರಸಾವನೆ ಸಲ್ಲಿಸಲಾಗುವುದು
ಪಾಲ್ತಾಡಿ ಗ್ರಾಮವನ್ನು ಗ್ರಾ.ಪಂ. ಮಾಡುವ ನಿಟ್ಟಿನಲ್ಲಿ ವರದಿ ತಯಾರಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.
-ಎಂ.ಆರ್. ರವಿ ಕುಮಾರ್, ಜಿಲ್ಲಾಧಿಕಾರಿ, ದ.ಕ.
~ಪ್ರವೀಣ್ ಚೆನ್ನಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.