IT-BT ಸಹಭಾಗಿತ್ವದಲ್ಲಿ ಸೈಬರ್ ಕೇಂದ್ರ: ಪರಮೇಶ್ವರ್
ಬೆಂಗಳೂರು ಸೈಬರ್ ಸ್ಪೇರ್ ಸೆಂಟರ್ ಫಾರ್ ಎಕ್ಸಲೆನ್ಸ್ ಕೇಂದ್ರ ಸ್ಥಾಪನೆ
Team Udayavani, Sep 28, 2023, 12:12 AM IST
ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣಗಳ ಮಟ್ಟಹಾಕಲು ಪೊಲೀಸರಿಗೆ ಸೂಕ್ತ ತಂತ್ರಜ್ಞಾನದ ತರಬೇತಿ ನೀಡುವ ನಿಟ್ಟಿನಲ್ಲಿ ಬೆಂಗಳೂರು ಸೈಬರ್‌ಸ್ಪೇರ್ ಸೆಂಟರ್ ಫಾರ್ ಎಕ್ಸ್‌ಲೆನ್ಸ್ ಕೇಂದ್ರ ತೆರೆಯಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ಹೇಳಿದರು.
ನಗರದ ಖಾಸಗಿ ಹೊಟೇಲ್‌ನಲ್ಲಿ ಬುಧವಾರ ಐಟಿ-ಬಿಟಿ ಕಂಪೆನಿಗಳ ಮುಖ್ಯಸ್ಥರ ಜತೆ ಹಮ್ಮಿಕೊಂಡಿದ್ದ ಟೆಕ್ ಫ್ಯೂಶನ್ ಸನ್‌ರೈಸ್ ಸಮ್ಮಿಟ್-2023 ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ದೇಶದ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಮುಂದಿದೆ. ಸಾರ್ವಜನಿಕ ಸುರಕ್ಷತೆಯಿಂದ ಪೊಲೀಸ್ ಇಲಾಖೆಯಲ್ಲೂ ಸೈಬರ್ ಸೆಕ್ಯೂರಿಟಿ ಕೌಶಲ ಜ್ಞಾನ ಹೆಚ್ಚಿಸುವ ನಿಟ್ಟಿನಲ್ಲಿ ಸಭೆ ನಡೆಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಎಂಜಿನಿಯರ್, ಎಂಎಸ್ಸಿ ಹಾಗೂ ತಾಂತ್ರಿಕ ಪದವಿ, ಸ್ನಾತಕೋತ್ತರ ಪದವಿ ಪಡೆದವರು ಇದ್ದಾರೆ. ಅಂತಹ ಅಧಿಕಾರಿಯನ್ನು ಗುರುತಿಸಿ ಐಟಿ ಕಂಪೆನಿಗಳ ಸಹಭಾಗಿತ್ವದಲ್ಲಿ ಸೈಬರ್ ಸೆಕ್ಯೂರಿಟಿ ಕುರಿತು ತರಬೇತಿ ನೀಡಲಾಗುತ್ತದೆ. ಅದಕ್ಕಾಗಿ ಸೈಬರ್ ಸ್ಪೇರ್ ಸೆಂಟರ್ ಫಾರ್ ಎಕ್ಸಲೆನ್ಸ್ ಕೇಂದ್ರ ಸ್ಥಾಪಿಸಲಾಗುತ್ತದೆ ಎಂದರು.
ಸಭೆಯಲ್ಲಿ ನಗರದ ಸುಮಾರು 40ಕ್ಕೂ ಹೆಚ್ಚು ಐಟಿ ಕಂಪನಿ ಮುಖ್ಯಸ್ಥರು, ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದು, ಸೈಬರ್ ಸುರಕ್ಷತೆ ಹಾಗೂ ತಂತ್ರಜ್ಞಾನದ ಬಗ್ಗೆ ಕೆಲ ಸಲಹೆಗಳನ್ನು ನೀಡಿದ್ದಾರೆ. ಸಂಚಾರ ದಟ್ಟಣೆ, ಸೈಬರ್ ಕ್ರೈಂ ಸಮಸ್ಯೆ ಪ್ರಮುಖವಾಗಿದೆ. ಈ ಸಮಸ್ಯೆಗಳ ಪರಿಹಾರ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಎಂದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ, ಸಂಚಾರ ವಿಭಾಗದ ಜಂಟಿ ಆಯುಕ್ತ ಎಂ.ಎನ್. ಅನುಚೇತ್, ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್, ರಮಣ ಗುಪ್ತಾ, ನೇಮಕಾತಿ ಡಿಜಿಪಿ ಕಮಲ್ ಪಂತ್, ಎಡಿಜಿಪಿ ಪ್ರತಾಪ್ ರೆಡ್ಡಿ ಸೇರಿ ಇತರೆ ಹಿರಿಯ ಐಪಿಎಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಯೂಆರ್‌ಕೋಡ್ ಸ್ಕ್ಯಾನ್ ದೂರು; ಯಶಸ್ವಿ
ಪೊಲೀಸ್ ಇಲಾಖೆ ನಗರದಲ್ಲಿನ ಐಒಎಸ್ ತಂತ್ರಜ್ಞಾನ ಅಳವಡಿಕೆ, ಕ್ಯೂಆರ್ ಕೋಡ್ ಸ್ಕ್ಯಾನ್ ಮೂಲಕ ದೂರು ಸ್ವೀಕರಿಸುವುದು, ಮೊಬೈಲ್ ಕಳ್ಳತನ ಪ್ರಕರಣವನ್ನು ಸುಲಭವಾಗಿ ದಾಖಲಿಸಲು ಮೊಬೈಲ್ ಆ್ಯಪ್‌ಗ್ಳು ಹಾಗೂ ವೆಬ್‌ಸೈಟ್‌ಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಇವುಗಳ ಬಳಕೆಯಲ್ಲಿ ಯಶಸ್ವಿಯಾಗಿದ್ದೇವೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ನಿರ್ವಹಣೆ, ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳು ಹೇಗೆ ರೂಪಿಸಬೇಕು ಎಂಬ ಬಗ್ಗೆಯೂ ಐಟಿ ಕಂಪೆನಿಗಳಿಂದ ಸಲಹೆ ಪಡೆಯಲಾಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.