ಇಂದು ಮಹಾ,ಗುಜರಾತ್‌ಗೆ ನಿಸರ್ಗ
ಮುಂಬಯಿ ನಗರ,ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್
Team Udayavani, Jun 3, 2020, 6:30 AM IST
ಮುಂಬಯಿ/ಅಹ್ಮದಾಬಾದ್: ಈಗಾಗಲೇ ಕೊರೊನಾದಿಂದ ತತ್ತರಿಸಿರುವ ಮುಂಬಯಿ ಮಹಾನಗರಕ್ಕೆ ಇತ್ತೀಚೆಗಿನ ವರ್ಷಗಳಲ್ಲೇ ಮೊದಲ ಸಲ ಚಂಡ ಮಾರುತ ವೊಂದು ಅಪ್ಪಳಿಸಲಿದ್ದು, ಮತ್ತಷ್ಟು ಸಂಕಷ್ಟ ತಂದೊಡ್ಡಲಿದೆ.
ಅರಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತವು ತೀವ್ರತೆ ಪಡೆದು “ನಿಸರ್ಗ’ ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಮಂಗಳ ವಾರ ರಾತ್ರಿ ಮತ್ತಷ್ಟು ಪ್ರಬಲವಾಗಿದೆ. ಇದು ಬುಧವಾರ ಮಧ್ಯಾಹ್ನದ ವೇಳೆಗೆ ಉತ್ತರ ಮಹಾರಾಷ್ಟ್ರ ಮತ್ತು ದಕ್ಷಿಣ ಗುಜರಾತ್ ಕರಾವಳಿಗೆ ಅಪ್ಪಳಿಸಲಿದೆ. ದಕ್ಷಿಣ ಮುಂಬಯಿಯಿಂದ 94 ಕಿ.ಮೀ. ದೂರದಲ್ಲಿರುವ ರಾಯಗಢ ಜಿಲ್ಲೆಯ ಆಲಿಬಾಗ್‌ಗೆ ಸನಿಹದಲ್ಲಿ ಅದು ಭೂತಾಡನವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ತಿಳಿಸಿದೆ.
ಕೋವಿಡ್-19 ಬಾಧಿತ ಮಹಾರಾಷ್ಟ್ರದಲ್ಲಿ ಈ ಚಂಡ ಮಾರುತವು ಭಾರೀ ಹಾನಿ ಸೃಷ್ಟಿಸಲಿದೆ. ವಾಣಿಜ್ಯ ನಗರಿ ಮುಂಬಯಿ ಮತ್ತು ಉಪ ನಗರಗಳು, ಥಾಣೆ, ರಾಯಗಢ ಜಿಲ್ಲೆಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ಗುಜರಾತ್‌ನಲ್ಲಿ 20 ಸಾವಿರ ಮಂದಿ ಸ್ಥಳಾಂತರ
ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಗುಜರಾತ್ ಕರಾವಳಿ ತೀರ ಸಮೀಪದ ವಲ್ಸಾಡ್ ಮತ್ತು ನವಸಾರಿ ಜಿಲ್ಲೆಗಳ 47 ಗ್ರಾಮಗಳ 20 ಸಾವಿರ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಕೇರಳದಲ್ಲಿ ಭಾರೀ ಮಳೆ
ಕೇರಳಕ್ಕೆ ಸೋಮವಾರ ನೈಋತ್ಯ ಮುಂಗಾರು ಪ್ರವೇಶಿಸಿದ ಬೆನ್ನಲ್ಲೇ ರಾಜ್ಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಕರ್ನಾಟಕದ ಒಳನಾಡು ಮತ್ತು ಕರಾವಳಿಯಲ್ಲೂ ಭಾರೀ ಗಾಳಿ, ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ.
ಎಲ್ಲೆಲ್ಲಿ ಭಾರೀ ಮಳೆ?
ಚಂಡಮಾರುತದ ಪ್ರಭಾವದಿಂದ ಉತ್ತರ ಮಹಾರಾಷ್ಟ್ರ, ದಕ್ಷಿಣ ಗುಜರಾತ್, ಕರ್ನಾಟಕ, ಕೇರಳ, ಕೊಂಕಣ, ಗೋವಾ, ಮಧ್ಯಪ್ರದೇಶಗಳ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.
ಚಂಡಮಾರುತದ ಪ್ರಭಾವದಿಂದ ಭಾರತದ ಪಶ್ಚಿಮ ಕರಾವಳಿ ಪ್ರದೇಶಗಳಲ್ಲಿ ಉಂಟಾಗಬಹುದಾದ ಪರಿಸ್ಥಿತಿಯನ್ನು ಅವಲೋಕಿಸು ತ್ತಿದ್ದೇವೆ. ಎಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿ ಸುವೆ. ಎಲ್ಲರೂ ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷಾ ಕ್ರಮಗಳನ್ನು ಪಾಲಿಸಬೇಕು.
-ನರೇಂದ್ರ ಮೋದಿ, ಪ್ರಧಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.