![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 18, 2023, 8:39 PM IST
ಮಂಗಳೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದ.ಕ. ಜಿಲ್ಲಾ ಶಾಖೆಯ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಚುನಾವಣ ಪ್ರಕ್ರಿಯೆಯು ನಿಯಮಾನುಸಾರ ನಡೆದಿಲ್ಲ ಹಾಗೂ ಸಂಘದ ಬೈಲಾ ಅಡಿ ಮತದಾರರ ಪಟ್ಟಿಯನ್ನು ತಯಾರಿಸಿಲ್ಲ ಎನ್ನುವ ವಿಚಾರಣ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿರುವ ಮೇಲ್ಮನವಿ ನ್ಯಾಯಾಲಯವು ಮರು ಚುನಾವಣೆ ನಡೆಸುವಂತೆ ಚುನಾವಣ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ದ.ಕ. ನೌಕರರ ಸಂಘದ ಪದಾಧಿಕಾರಿಗಳ ಸ್ಥಾನಕ್ಕೆ ನಡೆದ ಚುನಾವಣೆಯ ಪ್ರಕ್ರಿಯೆ ಮುಕ್ತ, ಪಾರದರ್ಶಕ ಹಾಗೂ ನ್ಯಾಯ ಸಮ್ಮತವಾಗಿ ನಡೆದಿಲ್ಲವೆಂದು ಬಂದರು ಇಲಾಖೆಯ ಅಧಿಕಾರಿ ಎಸ್.ನಿರಂಜನ ಮೂರ್ತಿ ಅವರು ಜಿಲ್ಲಾ ಸಂಘ ಹಾಗೂ ಚುನಾವಣ ಅಧಿಕಾರಿಗಳ ವಿರುದ್ಧ ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.
ದಾವೆಯ ವಿಚಾರಣೆಯನ್ನು ನಡೆಸಿ 2022ರ ಆ.24ರಂದು ತೀರ್ಪು ನೀಡಿದ ಪ್ರಧಾನ ನ್ಯಾಯಾಲಯವು ನಿಯಮಾನುಸಾರ ಚುನಾವಣ ಪ್ರಕ್ರಿಯೆ ನಡೆದಿಲ್ಲ ಎಂದು ಘೋಷಿಸಿ ಮತ್ತೆ ಚುನಾವಣೆ ನಡೆಸುವಂತೆ ಚುನಾವಣ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.
ವಿಚಾರಣ ನ್ಯಾಯಾಲಯದ ಈ ತೀರ್ಪನ್ನು ಪ್ರಶ್ನಿಸಿ ಮಂಗಳೂರಿನ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು. ನ.17ರಂದು ಮೇಲ್ಮನವಿ ನ್ಯಾಯಾಲಯವು ತೀರ್ಪು ಪ್ರಕಟಿಸಿದ್ದು, ಚುನಾವಣ ಪ್ರಕ್ರಿಯೆ ಅಸಿಂಧು ಎಂದು ಘೋಷಿಸಿದ ವಿಚಾರಣ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದು ಮರು ಚುನಾವಣೆ ನಡೆಸುವಂತೆ ಚುನಾವಣ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.