D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Team Udayavani, May 19, 2024, 2:20 AM IST
ಮಂಗಳೂರು/ಉಡುಪಿ: ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಬಿರುಸು ಪಡೆದುಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ, ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಶನಿವಾರ ಗುಡುಗು ಸಹಿತ ಉತ್ತಮ ಪ್ರಮಾಣದಲ್ಲಿ ಮಳೆ ಸುರಿದಿದೆ.
ಬೆಳ್ತಂಗಡಿ, ಮುಂಡಾಜೆ, ಚಾರ್ಮಾಡಿ, ಗುರುವಾಯನಕೆರೆ, ಕೊಯ್ಯೂರು, ಮಡಂತ್ಯಾರು, ಧರ್ಮಸ್ಥಳ ಸಹಿತ ಜಿಲ್ಲೆಯ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.
ಉಡುಪಿ, ಮಣಿಪಾಲ, ಕುಂದಾಪುರ, ತೆಕ್ಕಟ್ಟೆ, ಬಸ್ರೂರು, ಕಾರ್ಕಳದ ಹಲವು ಕಡೆಗಳಲ್ಲಿ ಮಳೆಯಾಗಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಮಂಗಳೂರು ನಗರದಲ್ಲಿಯೂ ರಾತ್ರಿ ಮಳೆಯಾಗಿದೆ.
ಎಲ್ಲೋ ಅಲರ್ಟ್; ಮಳೆ ಸಾಧ್ಯತೆ
ಕರಾವಳಿ ಭಾಗದಲ್ಲಿ ಮಳೆ ಮುಂದು ವರಿಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯ ಪ್ರಕಾರ ಮೇ 19ರಿಂದ 22ರ ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆ, ಗುಡುಗು, ಮಿಂಚು ಇರುವ ಸಾಧ್ಯತೆ ಇದೆ. ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ.
ಮದ್ದಡ್ಕ: ಅಂಗಡಿಗಳಿಗೆ ನುಗ್ಗಿದ ನೀರು
ಬೆಳ್ತಂಗಡಿ: ತಾಲೂಕಿನ ಬಹುತೇಕ ಭಾಗಗಳಲ್ಲಿ ಶನಿವಾರ ಗುಡುಗು, ಮಿಂಚು ಸಹಿತ ಒಂದು ತಾಸಿಗೂ ಅಧಿಕ ಕಾಲ ಭಾರಿ ಮಳೆಯಾಗಿದೆ. ಸಂಜೆ 4ರ ಸುಮಾರಿಗೆ ಆರಂಭವಾದ ಮಳೆ ಬಿರುಸಾಗಿ ಸುರಿದು, ಬಳಿಕ ತಡರಾತ್ರಿವರೆಗೂ ಮುಂದುವರಿಯಿತು. ಮದ್ದಡ್ಕ ಪೇಟೆಯಲ್ಲಿ ಅಂಗಡಿಗೆ ನೀರು ನುಗ್ಗಿದೆ. ಉಜಿರೆ ಪ್ರದೇಶದಲ್ಲಿ ಚರಂಡಿಗಳು ಬ್ಲಾಕ್ ಆಗಿದ್ದು ಮಳೆ ನೀರು ರಸ್ತೆ ಮೇಲೆ ಹರಿಯಿತು. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುವ ಕಡೆ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಮಳೆಯೊಂದಿಗೆ ಸಿಡಿಲು, ಗುಡುಗು ಆರ್ಭಟದಿಂದ ವಿದ್ಯುತ್ ಸಲಕರಣೆಗಳಿಗೆ ಹಾನಿಯಾಗಿ ವಿದ್ಯುತ್ ವ್ಯತ್ಯಯವಾಯಿತು.
ಮೀನುಗಾರರಿಗೆ ಎಚ್ಚರಿಕೆ
ಭಾರತೀಯ ಹವಾಮಾನ ಇಲಾಖೆ ನೀಡಿದ ಹವಾಮಾನ ಮುನ್ಸೂಚನೆಯ ಪ್ರಕಾರ ಮೇ 18 ರಿಂದ 22ರವರೆಗೆ ಬಂಗಾಲಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಸಾಧ್ಯತೆ ಹೆಚ್ಚಿದೆ. ಮುಂಜಾಗ್ರತಾ ಕ್ರಮವಾಗಿ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.