Dairy: ಹೈನುಗಾರಿಕೆ ಲಾಭದಾಯಕವಾಗಿಲ್ಲ: ರಾಜಣ್ಣ

ಕೆಎಂಎಫ್ ಮೇವನ್ನು ಉಚಿತವಾಗಿ ನೀಡಲಿ

Team Udayavani, Nov 19, 2023, 11:15 PM IST

rajanna

ಬೆಂಗಳೂರು: ಹೈನುಗಾರಿಕೆ ಈಗ ರೈತರಿಗೆ ಲಾಭದಾಯಕವಾಗಿ ಉಳಿದಿಲ್ಲ. ಆ ಹಿನ್ನೆಲೆಯಲ್ಲಿ ಕೆಎಂಎಫ್ ರೈತರಿಗೆ ಮೇವನ್ನು ಉಚಿತವಾಗಿ ನೀಡುವ ಕೆಲಸ ಮಾಡಬೇಕೆಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಹೇಳಿದ್ದಾರೆ.

ಕೆಎಂಎಫ್ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ರವಿವಾರ ಬೆಂಗಳೂರಿನ ಸೆಂಟ್ರಲ್‌ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 70ನೇ ಅಖೀಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೈನುಗಾರಿಕೆಯನ್ನೇ ನಂಬಿ ಜೀವನ ಸಾಗಿಸುವ ರೈತರಿಗೂ ತೃಪ್ತಿಕರವಾದ ವರಮಾನ ಬರುತ್ತಿಲ್ಲ. ಹಾಲಿನ ಬೆಲೆಯನ್ನು 5 ರೂ. ಹೆಚ್ಚಿಸುವಂತೆ ಈ ಹಿಂದೆ ಸರಕಾರಕ್ಕೆ ಮನವಿ ಮಾಡಲಾಗಿತ್ತು. ಒಕ್ಕೂಟದ ಮನವಿಯನ್ನು ಒಪ್ಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 3 ರೂ. ಹೆಚ್ಚಿಸಿ ಇದನ್ನು ನೇರವಾಗಿ ರೈತರಿಗೆ ನೀಡಬೇಕೆಂದು ತಾಕೀತು ಮಾಡಿದ್ದರು. ಆದರೆ ಸರಕಾರ ಹೆಚ್ಚಿಸಿರುವ ಹಣವನ್ನು ಕೆಲವು ಹಾಲು ಉತ್ಪಾದಕ ಸಂಸ್ಥೆಗಳು ರೈತರಿಗೆ ತಲುಪಿಸುತ್ತಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿದೆ. ಕೆಲವು ಸಂಸ್ಥೆಗಳು ನಷ್ಟದಲ್ಲಿರುವುದು ಇದಕ್ಕೆ ಕಾರಣವಾಗಿದ್ದು, ಆದ್ದರಿಂದ ಸುಮ್ಮನಿದ್ದೇನೆ ಎಂದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಮತ್ತು ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಸಹಕಾರ ರಂಗದಲ್ಲಿ ಮಹಿಳೆಯರು ಮತ್ತು ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಕೊಳ್ಳಬೇಕು. ದೇಶದ ಆರ್ಥಿಕ ಅಭಿವೃದ್ಧಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಗುಡಿ ಕೈಗಾರಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದರು.

ಕೆಎಂಎಫ್ನ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್‌, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್‌.ನವೀನ್‌, ದಕ್ಷಿಣ ಕನ್ನಡ ಹಾಲು ಒಕ್ಕೂಟದ ಕಾಪು ದಿವಾಕರ ಶೆಟ್ಟಿ, ಕರ್ನಾಟಕ ರಾಜ್ಯ ಸಹಕಾರ ಕುಕ್ಕಟ ಮಹಾಮಂಡಲದ ಅಧ್ಯಕ್ಷ ಡಿ.ಕೆ.ಕಾಂತರಾಜು, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್‌.ಟಿ.ನಾಗೇಶ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

BJP-Member

Congress Government: ರಾಜ್ಯ ಸರಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ 

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-Member

Congress Government: ರಾಜ್ಯ ಸರಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ 

VIjayendra

CM Siddaramaiah ರಾಜೀನಾಮೆ ನೀಡಲಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Congress-Symbol

By Election: ಸಚಿವ ಜಾರಕಿಹೊಳಿ ಮುಂದೆಯೇ ಶಿಗ್ಗಾವಿ ಟಿಕೆಟ್‌ ಕಿತ್ತಾಟ

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

BK-hariprasad

RSSನಿಂದ ತುರ್ತು ಪರಿಸ್ಥಿತಿಗೆ ಬೆಂಬಲ: ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.