ದಕ್ಷಿಣ ಕನ್ನಡ: 176; ಉಡುಪಿ: 219 ಮಂದಿಗೆ ಕೋವಿಡ್‌ ಪಾಸಿಟಿವ್‌

Team Udayavani, Jan 11, 2022, 7:10 AM IST

Covidದಕ್ಷಿಣ ಕನ್ನಡ: 176; ಉಡುಪಿ: 219 ಮಂದಿಗೆ ಕೋವಿಡ್‌ ಪಾಸಿಟಿವ್‌

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರವೂ ಕೊರೊನಾ ನೂರರ ಗಡಿ ದಾಟಿದೆ. ಜಿಲ್ಲೆಯಲ್ಲಿ 176 ಮಂದಿಗೆ ಕೊರೊನಾ ದೃಢಪಟ್ಟಿದೆ. 60 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, 1,383 ಮಂದಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಸದ್ಯ ಶೇ. 2.03ರಷ್ಟು ಪಾಸಿಟಿವಿಟಿ ದರ ದಾಖಲಾಗಿದೆ.

ಸಂಸದ ನಳಿನ್‌ಗೆ ಕೊರೊನಾ
ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲು ಅವರಿಗೆ ಕೊರೊನಾ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ ಅವರು, “ನನಗೆ ಕೋವಿಡ್‌ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಟ್ವೀಟ್‌ ಮಾಡಿದ್ದಾರೆ. ನಳಿನ್‌ ಅವರಿಗೆ ಈ ಹಿಂದೆಯೂ ಒಂದು ಬಾರಿ ಕೊರೊನಾ ದೃಢಪಟ್ಟಿತ್ತು.

ಉಡುಪಿ: 219 ಮಂದಿಗೆ ಪಾಸಿಟಿವ್‌
ಉಡುಪಿ: ಜಿಲ್ಲೆಯಲ್ಲಿ ಸೋಮವಾರ 219 ಮಂದಿಗೆ ಸೋಂಕು ದೃಢಪಟ್ಟಿದೆ. ಒಟ್ಟು 4,922 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. 193 ಮಂದಿ ಹೋಂ ಐಸೊಲೇಶನ್‌ನಲ್ಲಿ, 7 ಮಂದಿ ಕೋವಿಡ್‌ ಆಸ್ಪತ್ರೆಯಲ್ಲಿ ಹಾಗೂ 19 ಮಂದಿ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 40 ಮಂದಿ ಬಿಡುಗಡೆಯಾಗಿದ್ದಾರೆ. 1,158 ಪ್ರಕರಣಗಳು ಸಕ್ರಿಯವಾಗಿವೆ. ಕೋವಿಡ್‌ 19 ರೋಗಿಗಳ ಆರೈಕೆಗಾಗಿ 61 ಬೆಡ್‌ಗಳನ್ನು ಮೀಸಲಿರಿಸಲಾಗಿದೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ, 4.41 ರಷ್ಟಿದೆ.

ಪಡುಬಿದ್ರಿ: ಐವರು ವಿದ್ಯಾರ್ಥಿಗಳಿಗೆ ಸೋಂಕು
ಪಡುಬಿದ್ರಿ: ಹೆಜಮಾಡಿಯ ಖಾಸಗಿ ಶಾಲೆಯ 4 ಹಾಗೂ ಪಡುಬಿದ್ರಿಯ ಅನುದಾನಿತ ಶಾಲೆಯ ಓರ್ವ ವಿದ್ಯಾರ್ಥಿ ಸೇರಿದಂತೆ ಐವರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್‌ ವರದಿಯಾಗಿದೆ.

ಶಾಲೆಗಳಲ್ಲಿ ಮಕ್ಕಳ ಸ್ವಾéಬ್‌ ಪರೀಕ್ಷೆ ನಡೆಸಲಾಗುತ್ತಿದ್ದು, ಅದರ ವರದಿಯಲ್ಲಿ ಮಕ್ಕಳಿಗೆ ಸೋಂಕು ತಗಲಿರುವುದು ಗೊತ್ತಾಗಿದೆ. ವಿದ್ಯಾರ್ಥಿಗಳಿಗೆ 10 ದಿನ ಹೋಂ ಐಸೊಲೇಶನ್‌, ಶಾಲೆಗಳಲ್ಲಿನ ಪ್ರಾಥಮಿಕ ಸಂಪರ್ಕಿತರ ಹಾಗೂ ಮನೆ ಮಂದಿಯ ಪರೀಕ್ಷೆ ನಡೆಸಲಾಗುವುದು ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಪಾಸಿಟಿವ್‌ ಬಂದ ವಿದ್ಯಾರ್ಥಿಗಳಲ್ಲಿ ಇತರ ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲ.

ಇದನ್ನೂ ಓದಿ:ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳಲ್ಲಿ ಸ್ವಲ್ಪ ಇಳಿಕೆ; ಒಮಿಕ್ರಾನ್ ಏರಿಕೆ

ಕಾಸರಗೋಡು: 116 ಮಂದಿಗೆ ಸೋಂಕು; 2 ಸಾವು
ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 116 ಮಂದಿಗೆ ಸೋಂಕು ದೃಢಪಟ್ಟಿದ್ದು 44 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 796 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಮೃತಪಟ್ಟಿದ್ದು ಒಟ್ಟು ಸಂಖ್ಯೆ 842ಕ್ಕೇರಿದೆ.

ಕೇರಳ 5,797 ಮಂದಿಗೆ ಸೋಂಕು
ರಾಜ್ಯದಲ್ಲಿ ಸೋಮವಾರ 5,797 ಮಂದಿಗೆ ಸೋಂಕು ದೃಢಪಟ್ಟಿದ್ದು 2,796 ಮಂದಿ ಗುಣಮುಖರಾಗಿದ್ದಾರೆ. 19 ಮಂದಿ ಮೃತಪಟ್ಟಿದ್ದು ಒಟ್ಟು ಸಂಖ್ಯೆ 49,757ಕ್ಕೇರಿದೆ. 37,736 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಡಗು: 19 ಮಂದಿಗೆ ಸೋಂಕು
ಮಡಿಕೇರಿ: ಜಿಲ್ಲೆಯಲ್ಲಿ ಸೋಮವಾರ 19 ಮಂದಿಗೆ ಸೋಂಕು ದೃಢಪಟ್ಟಿದ್ದು 12 ಮಂದಿ ಗುಣಮುಖರಾಗಿದ್ದಾರೆ. 270 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 6.31 ಆಗಿದೆ ಎಂದು ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

k

Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-

Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ  

‌Fraud Case: ಸಾಫ್ಟ್ ವೇರ್ ಕಂಪನಿಗೆ 56 ಲಕ್ಷ ರೂಪಾಯಿ ವಂಚನೆ: 6 ಬಂಧನ

‌Fraud Case: ಸಾಫ್ಟ್ ವೇರ್ ಕಂಪನಿಗೆ 56 ಲಕ್ಷ ರೂಪಾಯಿ ವಂಚನೆ: 6 ಬಂಧನ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.