ದಕ್ಷಿಣ ಕನ್ನಡ: ಕೋವಿಡ್ಗೆ ಮತ್ತೆ ಇಬ್ಬರು ಬಲಿ; 34 ಮಂದಿಗೆ ಸೋಂಕು
Team Udayavani, Jul 7, 2020, 3:27 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಕೋವಿಡ್ಗೆ ಮಂಗಳೂರು ತಾಲೂಕಿನ ಇಬ್ಬರು ಬಲಿಯಾಗಿದ್ದಾರೆ. ಒಟ್ಟು 34 ಮಂದಿಗೆ ಕೋವಿಡ್ ದೃಢಪಟ್ಟಿದೆ.
52 ವರ್ಷದ ವ್ಯಕ್ತಿ ಕೋವಿಡ್ ದೃಢಪಟ್ಟು ಜು. 2ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅಧಿಕ ರಕ್ತದೊತ್ತಡ, ಮಧುಮೇಹ, ಹೃದಯರೋಗ, ನ್ಯುಮೋನಿಯಾದಿಂದ ಬಳಲುತ್ತಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟರು.
ಸುಮಾರು 62 ವರ್ಷದ ಇನ್ನೋರ್ವ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಜೂ. 27ರಂದು ದಾಖಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಜು. 6ರಂದು ಮೃತಪಟ್ಟಿದ್ದಾರೆ. ಇವರಿಗೂ ಕೋವಿಡ್ ದೃಢಪಟ್ಟಿದೆ.
34 ಮಂದಿಗೆ ಸೋಂಕು
ಜಿಲ್ಲೆಯಲ್ಲಿ ಹೊಸದಾಗಿ 34 ಮಂದಿಗೆ ಕೋವಿಡ್ ದೃಢಪಟ್ಟಿದೆ. ಈ ಪೈಕಿ 9 ಮಂದಿ ಇನ್ಫ್ಲೂಯೆನಾ ಲೈಕ್ ಇಲ್ನೆಸ್, ಓರ್ವ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು. ಓರ್ವರಿಗೆ ಶಸ್ತ್ರಚಿಕಿತ್ಸೆ ಬಳಿಕ, ಓರ್ವರಿಗೆ ಶಸ್ತ್ರಚಿಕಿತ್ಸೆ ಮೊದಲು ಮಾದರಿ ಪರೀಕ್ಷೆ ವೇಳೆ ಕೋವಿಡ್ ದೃಢಪಟ್ಟಿದೆ. 4 ಮಂದಿಗೆ ಹೆರಿಗೆಗೆ ಮುನ್ನ ಗಂಟಲು ದ್ರವ ಮಾದರಿ ಪರೀಕ್ಷೆ ವೇಳೆ ಕೋವಿಡ್ ಪಾಸಿಟಿವ್ ಬಂದಿದೆ. ಓರ್ವರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. 17 ಮಂದಿಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಕೋವಿಡ್ ದೃಢಪಟ್ಟಿದೆ.
29 ಮಂದಿ ಡಿಸ್ಚಾರ್ಜ್
ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 29 ಮಂದಿ ಕೋವಿಡ್ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 3 ಮಂದಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಆರು ಮಂದಿಯನ್ನು ಐಸಿಯುವಿನಿಂದ ವಾರ್ಡ್ಗೆ ಸ್ಥಳಾಂತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.