ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್
Team Udayavani, Mar 16, 2022, 6:40 AM IST
ಮಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿ ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ನಗರದಲ್ಲಿ ಮಂಗಳವಾರ ಬೆಳಗ್ಗೆ ಪೊಲೀಸರು ಪಥಸಂಚಲನ ನಡೆಸಿದರು. ಸಿಬಂದಿ ಮತ್ತು ಅಧಿಕಾರಿಗಳು ಸೇರಿದಂತೆ ಸುಮಾರು 1,200 ಮಂದಿ ಪೊಲೀಸರು ಬಂದೋಬಸ್ತ್ ನಲ್ಲಿ ತೊಡಗಿಸಿಕೊಂಡಿದ್ದಾರೆ.
ನಿಷೇಧಾಜ್ಞೆ ಮುಂದುವರಿಕೆ
ಅಹಿತಕರ ಘಟನೆಗಳು ನಡೆ ಯದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಮಾ. 19ರ ಸಂಜೆ 6ರ ವರೆಗೆ ಸೆ. 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕಲಿಕೆಯತ್ತ ಗಮನವಿರಲಿ
ವಿದ್ಯಾರ್ಥಿಗಳಲ್ಲಿ ಸಮಾನತೆಯ ಭಾವನೆ ಮೂಡಲು ಸಮವಸ್ತ್ರ ಅಗತ್ಯ. ವಿದ್ಯಾರ್ಥಿಗಳು ಕಲಿಕೆಗೆ ಆದ್ಯತೆ ನೀಡಬೇಕೇ ವಿನಾ ಇತರ ವಿಚಾರಗಳ ಬಗ್ಗೆ ವಿವಾದ, ಹಠಮಾರಿ ಧೋರಣೆ ತಳೆಯುವುದು ತರವಲ್ಲ. ಸಮರ್ಪಕವಾಗಿ ಅಧ್ಯಯನ ನಡೆಸಿ, ಉತ್ತಮ ಜೀವನ ರೂಪಿಸಿಕೊಳ್ಳುವಲ್ಲಿ ಎಲ್ಲ ವಿದ್ಯಾರ್ಥಿಗಳು ಮನಸ್ಸು ಮಾಡಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಇದನ್ನೂ ಓದಿ:ದುಬಾರಿಯಾಯಿತು ಮ್ಯಾಗಿ,ಬ್ರೂ, ನೆಸ್‌ಕೆಫೆ! ಬೆಲೆ ಏರಿಸಿದ ನೆಸ್ಲೆ , ಹಿಂದೂಸ್ತಾನ್ ಯೂನಿಲಿವರ್
ನ್ಯಾಯಾಲಯದ ತೀರ್ಪು ಐತಿಹಾಸಿಕ ಹಾಗೂ ಸ್ವಾಗತಾರ್ಹ. ಕೆಲವು ಶಕ್ತಿಗಳು ವಿದ್ಯಾರ್ಥಿಗಳ ಮನಸ್ಸಿನಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿ ಸಾಮರಸ್ಯವನ್ನು ಹಾಳುಗೆಡವಿದ್ದಾರೆ. ಎಲ್ಲರೂ ನ್ಯಾಯಾಲಯದ ತೀರ್ಪನ್ನು ಗೌರವಿಸಿ ಅನುಸರಿಸಬೇಕು, ಸರಕಾರ ಈಗಾಗಲೇ ಶಾಲೆಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ಆದೇಶ ಹೊರಡಿಸಿತ್ತು. ನ್ಯಾಯಾಲಯ ಅದನ್ನೇ ಎತ್ತಿ ಹಿಡಿದಿದೆ. ವಿದ್ಯಾರ್ಥಿನಿಯರು ಆದೇಶವನ್ನು ಪಾಲಿಸಿ ಉತ್ತಮ ಶಿಕ್ಷಣ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ಪ್ರೇರಣೆಯಾಗಬೇಕು.
– ಎಸ್. ಅಂಗಾರ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.