ದಕ್ಷಿಣ ಕನ್ನಡದಲ್ಲಿ ಲಾಕ್ ಬಿಗಿ, ಮದುವೆ ರದ್ದು, ಮುಂದಿನ ಒಂದು ವಾರ ನಿರ್ಣಾಯಕ: ಡಿಸಿ
Team Udayavani, Jun 8, 2021, 7:20 AM IST
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಕೊರೊನಾ ಪಾಸಿಟಿವಿಟಿ ದರ ಶೇ. 20 ರಿಂದ 21ರಷ್ಟಿದ್ದು, ಅದನ್ನು ಶೇ. 5ಕ್ಕೆ ಇಳಿಸಲು ಜನರ ಸಹಕಾರ ಅಗತ್ಯ. ಇದಕ್ಕೆ ಮುಂದಿನ ಒಂದು ವಾರ ನಿರ್ಣಾಯಕ. ಜೂ. 14ರವರೆಗೂ ಲಾಕ್ ಡೌನ್ ನಿಯಮಗಳನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ. ಹೇಳಿದ್ದಾರೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 50ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳಿರುವ ಗ್ರಾ.ಪಂ.ಗಳಲ್ಲಿ ಪೂರ್ವ ನಿಗದಿತ ಮದುವೆ ಮತ್ತು ಇತರ ಕಾರ್ಯಕ್ರಮಗಳಿಗೂ ಅನುಮತಿ ಇಲ್ಲ. ಹೊಸ ಕಾರ್ಯಕ್ರಮಗಳಿಗೆ ಅನುಮತಿ ನೀಡುವುದಿಲ್ಲ. ಜಿಲ್ಲೆಯ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ತಿಳಿಸಿದರು.
ಫ್ಲೈಯಿಂಗ್ ಸ್ಕ್ವಾಡ್
ಮಂಗಳೂರು ಮನಪಾ ವ್ಯಾಪ್ತಿಯಲ್ಲಿ ಜನರ ಅನಗತ್ಯ ಸಂಚಾರ ತಡೆಯಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ಅವಧಿ ಮೀರಿ ಅಂಗಡಿ- ಮುಂಗಟ್ಟು ತೆರೆದಿಡುವುದು, ಅನಗತ್ಯ ವಾಹನ ಸಂಚಾರ ಇತ್ಯಾದಿಗಳ ಬಗ್ಗೆ ಗಮನ ಹರಿಸಲು ಪಾಲಿಕೆಯ ಆಯುಕ್ತರ ನೇತೃತ್ವದ 10 ಫ್ಲೈಯಿಂಗ್ ಸ್ಕ್ವಾಡ್‌ಗಳು ಕಾರ್ಯ ನಿರ್ವಹಿಸಲಿವೆ. ತಾಲೂಕು ಮಟ್ಟದಲ್ಲಿ ಸಹಾಯಕ ಆಯುಕ್ತರ ನೇತೃತ್ವದ 2ರಿಂದ 3 ವಿಚಕ್ಷಣ ತಂಡಗಳು ಕಾರ್ಯಾಚರಿಸಲಿವೆ ಎಂದರು.
ಅವಶ್ಯ ವಸ್ತು ಖರೀದಿಗೆ ಮನೆ ಸಮೀಪದ ಅಂಗಡಿಗೆ ನಡೆದೇ ಹೋಗಿ ಬರಬೇಕು. ಹೋಂ ಐಸೊಲೇಶನ್‌ನಲ್ಲಿ ಇರುವವರಿಗೆ ಪ್ರತ್ಯೇಕ ಶೌಚಾಲಯ ಇಲ್ಲದಿರುವುದು, ಬಿಪಿ, ಮಧುಮೇಹದಂತಹ ಅನಾರೋಗ್ಯ ಇದ್ದಲ್ಲಿ ಅಂಥವರನ್ನು ಕಡ್ಡಾಯವಾಗಿ ಕೊರೊನಾ ಕೇರ್‌ಸೆಂಟರ್ ಗೆ ದಾಖಲಿಸಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.