Dakshina Kannada, ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಪ್ರಶಸ್ತಿ ಪ್ರದಾನ

ಶಿಕ್ಷಕರ ಮಧ್ಯೆ ಸೌಹಾರ್ದ ಇರಲಿ: ಜಯಪ್ರಕಾಶ್‌ ಹೆಗ್ಡೆ

Team Udayavani, Sep 6, 2023, 12:35 AM IST

Dakshina Kannada, ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಪ್ರಶಸ್ತಿ ಪ್ರದಾನ

ಬ್ರಹ್ಮಾವರ: ಅಭಿವೃದ್ಧಿಗೆ ಆರೋಗ್ಯ ಮತ್ತು ಶಿಕ್ಷಣವೇ ಮೂಲ. ಶಾಲೆಗಳಲ್ಲಿ ಶಿಕ್ಷಕರ ನಡುವೆ ಸೌಹಾರ್ದ ವಾತಾವರಣ ನಿರ್ಮಾಣವಾದಾಗ ಮಾತ್ರ ವಿದ್ಯಾರ್ಥಿಗಳು ಮತ್ತು ಭವಿಷ್ಯದ ಸಮಾಜ ಉತ್ತಮ ಫ‌ಲಿತಾಂಶ ಕಂಡುಕೊಳ್ಳಬಹುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ ಹೇಳಿದರು.

ಜಿಲ್ಲಾಡಳಿತ, ಜಿ.ಪಂ., ಶಿಕ್ಷಣ ಇಲಾಖೆ, ಡಾ| ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಸಹಯೋಗದಲ್ಲಿ ಮಂಗಳವಾರ ಬ್ರಹ್ಮಾವರ ಶ್ಯಾಮಿಲಿ ಶನಾಯ ಸಭಾಂ ಗಣದಲ್ಲಿ ಜರಗಿದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಲಿಕೆ ನಿರಂತರ ಪ್ರಕ್ರಿಯೆಯಾಗಿದ್ದು, ಅಂತ್ಯ ಹಾಗೂ ವಯಸ್ಸಿನ ಮಿತಿ ಇಲ್ಲ. ಸಮಾಜದಲ್ಲಿ ಬದಲಾವಣೆ ತರಲು ಶಿಕ್ಷಣದಿಂದ ಮಾತ್ರ ಸಾಧ್ಯ. ಶಿಕ್ಷಕರ ನಡುವೆ ಸೌಹಾರ್ದ ಇರದಿದ್ದರೆ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಭಾವನೆ ಮೂಡಿಸಲು ಶಿಕ್ಷಕರು ಮುಂದಾಗ ಬೇಕು. ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕವಾಗಿ ಶಕ್ತರಾದಾಗ ಸ್ಪರ್ಧಾತ್ಮಕ ಮನೋಭಾವ ಬೆಳೆಯುತ್ತದೆ. ಶಿಕ್ಷಣದ ಗುಣಮಟ್ಟ ಉಳಿಸಿಕೊ ಳ್ಳುವುದರ ಜತೆಗೆ ಶಿಕ್ಷಣದಲ್ಲಿ ಮುಂದೆ ಬರುವಂತೆ ಪೋತ್ಸಾಹ ನೀಡಬೇಕು. ವಿದ್ಯಾರ್ಥಿಗಳಲ್ಲಿ ನಾವೆಲ್ಲರೂ ಒಂದೇ ಎಂಬ ಭಾವನೆ ಶಿಕ್ಷಕರು ಮೂಡಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಮಾತನಾಡಿ, ಎಸೆಸೆಲ್ಸಿ ಫ‌ಲಿತಾಂಶದಲ್ಲಿ ಜಿಲ್ಲೆ ಮತ್ತೆ ಮೊದಲ ಸ್ಥಾನಕ್ಕೇರಲು ಎಲ್ಲ ಶಿಕ್ಷಕರು ತಂಡವಾಗಿ ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಶಿಕ್ಷಕ ವರ್ಗಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದೆ. ಶೇ. 5ರಷ್ಟು ಶಿಕ್ಷಕರು ಜವಾಬ್ದಾರಿ ನಿರ್ವಹಿಸಲು ವಿಫ‌ಲರಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಹೆತ್ತವರ ಮಾತನ್ನು ಮಕ್ಕಳು ಕೇಳುತ್ತಿಲ್ಲ. ಅವರನ್ನು ಉತ್ತಮ ವ್ಯಕ್ತಿಗಳನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರದ್ದಾಗಿದೆ ಎಂದರು.

ಎಸೆಸೆಲ್ಸಿ, ಪಿಯುಸಿ ಫ‌ಲಿತಾಂಶದಲ್ಲಿ ಶಿಕ್ಷಕರ ಪ್ರಯತ್ನದಿಂದ ಮತ್ತೊಮ್ಮೆ ಅಗ್ರಸ್ಥಾನಿಯಾಗಲಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್‌ಪಾಲ್‌ ಸುವರ್ಣ ಆಶಯ ವ್ಯಕ್ತಪಡಿಸಿದರು.

ಮಾಹೆ ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಉಪನ್ಯಾಸ ನೀಡಿದರು. 15 ಮಂದಿ ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನಿಸಲಾ ಯಿತು. ಶಿಕ್ಷಕರ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ ನಡೆಯಿತು.

ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಪ್ರವರ್ತಕ ಡಾ| ಜಿ. ಶಂಕರ್‌, ಜಿ.ಪಂ. ಸಿಇಒ ಪ್ರಸನ್ನ ಎಚ್‌. ಚಾಂತಾರು ಗ್ರಾ.ಪಂ. ಅಧ್ಯಕ್ಷೆ ಪ್ರೇಮಾ ಶೆಟ್ಟಿ, ಡಯಟ್‌ ಪ್ರಾಂಶುಪಾಲ ಗೋವಿಂದ ಮಡಿವಾಳ, ಬ್ರಹ್ಮಾವರ ಬಿಇಒ ರಂಗನಾಥ್‌, ಉಡುಪಿ ಬಿಇಒ ಡಾ| ಅಶೋಕ್‌ ಕಾಮತ್‌ ಉಪಸ್ಥಿತರಿದ್ದರು. ಡಿಡಿಪಿಐ ಗಣಪತಿ ಕೆ. ಸ್ವಾಗತಿಸಿ, ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ, ಸುಭೀಕ್ಷಾ ಶೆಟ್ಟಿ ನಿರ್ವಹಿಸಿ, ಬ್ರಹ್ಮಾವರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಶಾಂತ್‌ ಶೆಟ್ಟಿ ವಂದಿಸಿದರು.

ಸಾಧಕನ ಹಿಂದೆ ಶಿಕ್ಷಕನ ಶ್ರಮ: ಭಾಗೀರಥಿ
ಸುಳ್ಯ: ಭಾರತ ಇಂದು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡುತ್ತಿದೆ. ಯಾವುದೇ ಸಾಧಕನ ಹಿಂದೆ ಒಬ್ಬ ಶಿಕ್ಷಕನ ಮಾರ್ಗದರ್ಶನ, ಶ್ರಮ ಇರುತ್ತದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

ದ.ಕ. ಜಿಲ್ಲಾಡಳಿತ, ಜಿ.ಪಂ., ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಸುಳ್ಯ ತಾಲೂಕು ಶಿಕ್ಷಕರ ದಿನಾಚರಣೆಯ ಸಮಿತಿ ಆಶ್ರಯದಲ್ಲಿ ಸುಳ್ಯದ ಪರಿವಾರಕಾನ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಕ್ಷಣ ನೀತಿಯಲ್ಲಿ ಬದಲಾವಣೆ ಆಗಬೇಕು ಎಂಬ ಚರ್ಚೆಗಳಾಗುತ್ತಿವೆ. ಅದನ್ನು ಮಾಡುವವರು ಯಾರು ಎಂಬುದಕ್ಕೆ ಪರಿಪೂರ್ಣ ಉತ್ತರ ಸಿಕ್ಕಿಲ್ಲ. ಸರಕಾರಿ ಶಾಲೆಯಲ್ಲಿ ಉತ್ತಮ ಸವಲತ್ತು ಇದ್ದರೂ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸರಕಾರಿ ಶಾಲೆಗಳ ಶಿಕ್ಷಕರ ಕೊರತೆ ನೀಗಿಸುವಂತೆ ಜಿಲ್ಲೆಯ ಶಾಸಕರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಿದ್ದೇವೆ ಎಂದರು.

ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಶಿಕ್ಷಣ ನೀತಿಯ ಬಗ್ಗೆ ಸಾರ್ವತ್ರಿಕ ಚರ್ಚೆಗಳು ನಡೆಯಬೇಕಾಗಿತ್ತು, ಆದರೆ ಚರ್ಚೆಗಳು ಕಡಿಮೆಯಾಗಿವೆ. ಶಿಕ್ಷಣ ನೀತಿಯ ಬಗ್ಗೆ ಶಿಕ್ಷಕ ಮೌನ ಮುರಿಯಬೇಕು ಎಂದರು.

ಮಂಗಳೂರು ಸಂತ ಅಲೋಶಿಯಸ್‌ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ| ವಿಶ್ವನಾಥ ಬದಿಕಾನ ಪ್ರಧಾನ ಭಾಷಣ ಮಾಡಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್‌ರಾಂ ಸುಳ್ಳಿ, ಮಂಗಳೂರು ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ಸಿಪ್ರಿಯನ್‌ ಮೊಂತೆರೋ, ಮಂಗಳೂರು ಡಯಟ್‌ ಪ್ರಾಂಶುಪಾಲೆ ರಾಜಲಕ್ಷ್ಮೀ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಭುವನೇಶ್‌, ಸುಳ್ಯ ತಹಶೀಲ್ದಾರ್‌ ಮಂಜುನಾಥ್‌, ಸುಳ್ಯ ತಾ.ಪಂ. ಇಒ ರಾಜಣ್ಣ ವೇದಿಕೆಯಲ್ಲಿದ್ದರು.

ದ.ಕ. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ ಸ್ವಾಗತಿಸಿ, ಬಿಇಒ ರಮೇಶ್‌ ಬಿ.ಈ. ವಂದಿಸಿದರು. ಶಿಕ್ಷಕರಾದ ಆಶಾ, ಮಮತಾ, ಅಚ್ಯುತ ಅಟೂÉರು ನಿರ್ವಹಿಸಿದರು.

ಗೌರವ
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ, ಸುಳ್ಯ ತಾಲೂಕಿನ ನಿವೃತ್ತ ಶಿಕ್ಷಕರು, ಸಿಬಂದಿಗೆ ಸಮ್ಮಾನ, ತಾಲೂಕಿನ ಸ್ಕೌಟ್‌/ಗೈಡ್ಸ್‌ ವಿಭಾಗದ ಉತ್ತಮ ಶಿಕ್ಷಕರಿಗೆ ಅಭಿನಂದನೆ, ಎಸೆಸೆಲ್ಸಿಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ, ಎಸೆಸೆಲ್ಸಿಯಲ್ಲಿ ಶೇ. 100 ಫ‌ಲಿತಾಂಶ ಪಡೆದ ಶಾಲೆಗಳ ಅಭಿನಂದನೆ ನಡೆಯಿತು.

ಟಾಪ್ ನ್ಯೂಸ್

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!

1-qweewqe

TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ

1-ewewqe

Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

de

Malpe ಸೀವಾಕ್‌ ಸಮುದ್ರತೀರದಲ್ಲಿ ಮೃತದೇಹ ಪತ್ತೆ

sand

Bramavara: ಬೆಣ್ಣೆಕುದ್ರು; ಮರಳು ಅಕ್ರಮ ಸಾಗಾಟ

crime

Brahmavara: ಯಡ್ತಾಡಿ; ಬೈಕ್‌ ಅಪಘಾತ

byndoor

Udupi: ಬೈಕಿಗೆ ಕಾರು ಢಿಕ್ಕಿ; ಸವಾರನಿಗೆ ಗಾಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

POlice

Kasaragod: ರೈಲುಗಾಡಿಗೆ ಕಲ್ಲು ತೂರಾಟ; ಪ್ರಯಾಣಿಕನಿಗೆ ಗಾಯ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

de

Malpe ಸೀವಾಕ್‌ ಸಮುದ್ರತೀರದಲ್ಲಿ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.