ಮುದಗಲ್ಲ ತಾಲೂಕಿನಲ್ಲಿ ಡಿಎಪಿ ರಸಗೊಬ್ಬರ ಅಭಾವ
Team Udayavani, Nov 10, 2021, 3:48 PM IST
ಮುದಗಲ್ಲ: ತಾಲೂಕಿನಲ್ಲಿ ಕೃಷಿಗೆ ಅಗತ್ಯವಿರುವ ಡಿಎಪಿ ರಸಗೊಬ್ಬರ ಅಭಾವ ತಲೆದೋರಿದ್ದು ಗೊಬ್ಬರ ಸಿಗದೆ ರೈತರು ಪರದಾಡುವಂತಾಗಿದೆ.
ಕಳೆದ ಎರಡ್ಮೂರು ತಿಂಗಳಿಂದ ರೈತರು ಹಿಂಗಾರು ಬಿತ್ತನೆಯಲ್ಲಿ ತೊಡಗಿದ್ದಾರೆ. ಉತ್ತಮ ಮಳೆಯಿಂದ ಸಪ್ಪೆಯಾದ ಹೊಲಗಳಿಗೆ ಮಂಗಳ ಡಿಎಪಿಗೆ ಹೆಚ್ಚಿನ ಬೇಡಿಕೆ ಬಂದಿದೆ.
ಪಟ್ಟಣದ ಕೆಲವು ರಸಗೊಬ್ಬರ ಅಂಗಡಿಗಳಲ್ಲಿ ಮಂಗಳ ಡಿಎಪಿ(ಕಪ್ಪು) ಗೊಬ್ಬರ ಕೇಳಿದರೆ ಐಪಿಎಲ್ ಡಿಎಪಿ(ಬಿಳಿ) ಗೊಬ್ಬರವಿದೆ ಎಂದು ಹೇಳುತ್ತಾರೆ. ಬೇಡಿಕೆ ಇದ್ದಾಗ ಡಿಎಪಿ ಗೊಬ್ಬರ ಸಿಗದೇ ಇರುವುದರಿಂದ ರೈತ ಕಂಗಾಲಾಗಿದ್ದಾನೆ.
ಬೀಜ, ಗೊಬ್ಬರ ನಿಗದಿತ ದರದಲ್ಲಿಯೇ ಮಾರಾಟ ಮಾಡಬೇಕು, ಚೀಲದ ಮೇಲೆ ನಮೂದಿಸಿರುವ ಬೆಲೆಗೆ ಮಾರಾಟ ಮಾಡಿ ರೈತರಿಗೆ ರಸೀದಿ ನೀಡಬೇಕು. ತಪ್ಪಿದರೆ ಶಿಸ್ತುಕ್ರಮ ಜರುಗಿಸುತ್ತೇವೆಂದು ಕೃಷಿ ಅಧಿಕಾರಿಗಳು ಪ್ರತಿ ವರ್ಷ ಮಾಧ್ಯಮಗಳ ಮೂಲಕ ಹೇಳುತ್ತಲೇ ಬಂದಿದ್ದಾರೆ.
ವಾಸ್ತವದಲ್ಲಿ ಈ ಸೂಚನೆ ಪಾಲನೆಯಾಗಿಲ್ಲ, ಯಾವ ವರ್ತಕನಿಗೆ ನೋಟಿಸ್ ನೀಡಿ ದಂಡ ಹಾಕಿದ ಉದಾಹರಣೆಯೇ ಇಲ್ಲ. 50ಕೆ.ಜಿ ಯೂರಿಯಾ ಗೊಬ್ಬರ ಚೀಲಕ್ಕೆ ಸರಕಾರ ನಿಗದಿ ಮಾಡಿದ ದರ 267ರೂ.ಇದೆ, ಹಮಾಲಿ-ಸಾರಿಗೆ ವೆಚ್ಚ ಸೇರಿ 290 ಅಥವಾ 300ಕ್ಕೆ ಮಾರಾಟ ಮಾಡಿದರೆ ಪರವಾಗಿಲ್ಲ. ಆದರೆ ಪಟ್ಟಣದಲ್ಲಿ ಕೆಲ ವರ್ತಕರು 350ರೂ.ಗಳಂತೆ ಮಾರುತ್ತಿದ್ದಾರೆ. ಐಪಿಎಲ್ ಡಿಎಪಿ 1350ರೂ.ಗೆ ಮಾರಲಾಗುತ್ತಿದೆ. ಎಂದು ರೈತರು ದೂರಿದ್ದಾರೆ.
ಇದನ್ನೂ ಓದಿ: ಪ್ರೀತಿಗೆ ವಿರೋಧ;ಪ್ರಿಯತಮೆ ಮನೆಯಲ್ಲೇ ಆಕೆಯ ಹತ್ಯೆಗೆ ಯತ್ನ, ಪ್ರಿಯತಮನೂ ಆಸ್ಪತ್ರೆಗೆ ದಾಖಲು
ಹೆಚ್ಚಿನ ದರಕ್ಕೆ ಗೊಬ್ಬರ ಮಾರಾಟ
ಡಿಎಪಿ ಗೊಬ್ಬರ ಅಭಾವ ಪರಿಸ್ಥಿತಿಯನ್ನು ಮನಗಂಡ ಕೆಲ ಮಾರಾಟಗಾರರು ತಮ್ಮಲ್ಲಿರುವ ಗೊಬ್ಬರವನ್ನು ನಿಗದಿತ ದರಕ್ಕಿಂತ ಹೆಚ್ಚಿನ ಮೊತ್ತಕ್ಕೆ ಮಾರುತ್ತಿದ್ದಾರೆ. ಇನ್ನು ಕೆಲವರು ಬೇರೆಡೆ ದಾಸ್ತಾನು ಮಾಡಿ ಅಭಾವ ಸೃಷ್ಟಿಯಾಗುವಂತೆ ಮಾಡಿದ್ದಾರೆಂಬ ಆರೋಪ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ವ್ಯಾಪಕವಾಗಿ ಕೇಳಿ ಬರುತ್ತಿದೆ.
ಕೆಲವು ಗ್ರಾಮೀಣ ಭಾಗದಲ್ಲಿ ಅಂಗಡಿಗಳನ್ನು ತೆರೆದು ಹೆಚ್ಚಿನ ದರಕ್ಕೆ ಗೊಬ್ಬರ ಮಾರುತ್ತಿದ್ದಾರೆ. ರೈತರಿಗೆ ಜಿಎಸ್‌ಟಿ ರಸೀದಿ ನೀಡುತ್ತಿಲ್ಲ ಎಂದು ರೈತರಾದ ಗ್ಯಾನಪ್ಪ, ಮಲ್ಲಪ್ಪ, ದುರುಗಪ್ಪ, ಭೀಮಪ್ಪ ಆರೋಪಿಸಿದ್ದಾರೆ.
ರೈತರೊಂದಿಗೆ ಒಂದೇ ಒಂದು ಸಭೆಯಿಲ್ಲ
ಒಂದು ಕಾರ್ಯಕ್ರಮ ಮಾಡಬೇಕಾದರೆ ಹತ್ತಾರು ಪೂರ್ವಭಾವಿ ಸಭೆ ಮಾಡಿ ಚರ್ಚಿಸುವ ಅಧಿಕಾರಿಗಳು ಬಹುಸಂಖ್ಯಾತ ರೈತಾಪಿ ವರ್ಗದ ಕೃಷಿ ಚಟುವಟಿಕೆ ಆರಂಭವಾಗುವ ರೈತರೊಂದಿಗೆ ಒಂದೇ ಒಂದು ಸಭೆ ನಡೆಸುವುದಿಲ್ಲ. ಮುಂಜಾಗ್ರತಾ ಕ್ರಮವಾಗಿ ಕೃಷಿ ಪರಿಕರ, ಬೀಜ, ಗೊಬ್ಬರ ವ್ಯವಸ್ಥಿತವಾಗಿ ಸಂಗ್ರಹಿಸಲು ಆಸಕ್ತಿ ವಹಿಸುವುಲ್ಲ. ಗಡ್ಡಕ್ಕೆ ಬೆಂಕಿ ಹತ್ತಿದಾಗ ಬಾವಿ ತೋಡಿದರೆನ್ನುವಂತೆ ಮಳೆ ಬಿದ್ದ ಮೇಲೆಯೇ ಕೃಷಿ ಇಲಾಖೆ ಅಧಿಕಾರಿಗಳು ಕಣ್ಣು ಹಾಯಿಸುತ್ತಿರುವುದು ಸರಿಯಲ್ಲ ಎಂದು ರೈತ ಮುಖಂಡ ಅಮರಣ್ಣ ಗುಡಿಹಾಳರ ಆರೋಪಿಸುತ್ತಾರೆ.
-ದೇವಪ್ಪ ರಾಠೊಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.