ಜಿಲ್ಲೆಯಾದ್ಯಂತ ಸರಳ ದಸರಾ: ಜಿಲ್ಲಾಧಿಕಾರಿ ಆದೇಶ
Team Udayavani, Oct 18, 2020, 7:20 AM IST
ಮಂಗಳೂರು: ಕೋವಿಡ್-19 ವೈರಾಣು ಸೋಂಕು ವ್ಯಾಪಕವಾಗುತ್ತಿರುವುದರಿಂದ ಅ. 17ರಿಂದ 26ರ ವರೆಗೆ ಜಿಲ್ಲೆಯಾದ್ಯಂತ ದಸರಾವನ್ನು ಸಾರ್ವಜನಿಕರು ಅತ್ಯಂತ ಸರಳವಾಗಿ, 100ಕ್ಕಿಂತ ಹೆಚ್ಚು ಜನರು ಒಂದೆಡೆ ಸೇರದಂತೆ ಆಚರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ.
ಸಾಮಾಜಿಕ ಅಂತರವಿಲ್ಲದೆ ನಡೆಸಲಾಗುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಕಾರ್ಯಕ್ರಮದ ಆಯೋಜಕರು, ದೇವಸ್ಥಾನದ ಆಡಳಿತಾಧಿಕಾರಿಗಳು ಮುಂಚಿತವಾಗಿ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಅನುಮತಿ ಪಡೆಯಬೇಕು. ಕೋವಿಡ್-19 ಮಾರ್ಗಸೂಚಿಗಳು ಉಲ್ಲಂಘನೆ ಯಾದಲ್ಲಿ ಕಾರ್ಯಕ್ರಮದ ಆಯೋಜಕರು, ದೇವಸ್ಥಾನದ ಆಡಳಿತಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದಿದ್ದಾರೆ ಈ ಮಾರ್ಗಸೂಚಿಗಳು ನವರಾತ್ರಿ ಹಾಗೂ ದುರ್ಗಾ ಪೂಜೆಯ ಆಚರಣೆಗೂ ಅನ್ವಯವಾಗುತ್ತದೆ.
ಹುಲಿ ವೇಷಗಳಿಗೆ ಸೀಮಿತ ಅನುಮತಿ
ದಸರಾ ಸಂದರ್ಭ ದೇವಸ್ಥಾನದ ಆವರಣದೊಳಗೆ ಮಾತ್ರ ಗರಿಷ್ಠ 10 ಹುಲಿ ವೇಷಧಾರಿಗಳಿಗೆ ನಿಗದಿತ ಕಾಲಮಿತಿಯೊಳಗೆ ಹರಕೆ ಅರ್ಪಿಸಲು ಅನುಮತಿ ನೀಡ ಲಾಗಿದೆ; ಹೊರಗಡೆ ಎಲ್ಲೂ ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.