Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಯಾವುದೇ ಕಾರಣಕ್ಕೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಗಲ್ಲ: ಮಾಜಿ ಸಚಿವ
Team Udayavani, Nov 25, 2024, 12:00 AM IST
ದಾವಣಗೆರೆ: ವಕ್ಫ್ ವಿರುದ್ಧದ ಹೋರಾಟಕ್ಕೆ ವಿಪಕ್ಷ ನಾಯಕ ಆರ್.ಅಶೋಕ್, ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ ಮೂರು ತಂಡಗಳೇ ಅಧಿಕೃತ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
ರವಿವಾರ ಶಿರಮಗೊಂಡನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಅಶೋಕ್ ಮತ್ತು ಛಲವಾದಿ ನಾರಾಯಣ ಸ್ವಾಮಿ ನೇತೃತ್ವದಲ್ಲಿ ʼನಮ್ಮ ಭೂಮಿ, ನಮ್ಮ ಹಕ್ಕುʼ ಹೆಸರಿನಲ್ಲಿ ಬಿಜೆಪಿ ಮುಖಂಡರು ಪ್ರವಾಸ ಮಾಡುತ್ತಿದ್ದು, ಈ ಮೂರು ತಂಡಗಳ ಪ್ರವಾಸವೇ ಅಧಿಕೃತ. ಇನ್ನು ಯಾರೇ ಪ್ರವಾಸ ಮಾಡಿದರೂ ಅದು ಅಧಿಕೃತ ಅಲ್ಲ. ಬಿಜೆಪಿ ನಿಷ್ಠಾವಂತ ಕಾರ್ಯಕರ್ತರು, ಮುಖಂಡರು ಯಾವುದೇ ಕಾರಣಕ್ಕೂ ಬಸವನಗೌಡ ಪಾಟೀಲ್ ಯತ್ನಾಳ್ ತಂಡಕ್ಕೆ ಬೆಂಬಲ ನೀಡಬಾರದು ಎಂದು ಮನವಿ ಮಾಡಿದರು.
ಯತ್ನಾಳ್ ಮತ್ತು ತಂಡದ ವಿರುದ್ಧ ಶೀಘ್ರವೇ ನಾವು ನಮ್ಮ ಪಕ್ಷದ ವರಿಷ್ಠರ ಭೇಟಿಯಾಗಿ ಶಿಸ್ತು ಕ್ರಮಕ್ಕೆ ಒತ್ತಾಯಿಸುತ್ತೇವೆ. ಯಾವುದೇ ಕಾರಣಕ್ಕೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಗುವುದಿಲ್ಲ. ವಿಧಾನಸಭೆ ಚುನಾವಣೆಯ ವಿಜಯೇಂದ್ರ ನೇತೃತ್ವದಲ್ಲೇ ಎದುರಿಸುತ್ತೇವೆ. ಪಕ್ಷ ಅಧಿಕಾರಕ್ಕೂ ಬರಲಿದೆ ಎಂದು ಪುನರುಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.