Deep Fake: ರಶ್ಮಿಕಾ ಡೀಪ್‌ಫೇಕ್ ವೀಡಿಯೋ- ನಾಲ್ವರು ಶಂಕಿತರ ವಿಚಾರಣೆ ನಡೆಸಿದ ಪೊಲೀಸರು
Team Udayavani, Dec 21, 2023, 12:27 AM IST
ಹೊಸದಿಲ್ಲಿ: ನಟಿ ರಶ್ಮಿಕಾ ಮಂದಣ್ಣ ಅವರ ಫೋಟೋ ಡೀಪ್‌ಫೇಕ್ ಮಾಡಲಾಗಿದ್ದ ಪ್ರಕರಣ ಸಂಬಂಧ ನಾಲ್ವರು ಶಂಕಿತರನ್ನು ದಿಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಶಂಕಿತರ ಕುರಿತು ಫೇಸ್‌ಬುಕ್ ಮಾತೃಸಂಸ್ಥೆ ಮೆಟಾ ಒದಗಿಸಿದ್ದ ಮಾಹಿತಿಯನ್ನು ಆಧರಿಸಿ ವಿಚಾರಣೆ ನಡೆಸಲಾಗಿದೆ.
ಈ ವೇಳೆ ಶಂಕಿತರು ನಕಲಿ ಖಾತೆಗಳ ಮೂಲಕ ವೀಡಿಯೋ ಅಪ್ಲೋಡ್ ಮಾಡಿದ್ದಾರೆ. ಆದರೆ ಅವರೇ ವೀಡಿಯೋ ತಯಾರಿಸಿ ದವರಲ್ಲ ಎಂಬುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಯ ಬಳಿಕ ಶಂಕಿತರನ್ನು ಬಿಡುಗಡೆಗೊಳಿ ಸಲಾಗಿದ್ದು, ವೀಡಿಯೋ ಡೀಪ್‌ಫೇಕ್ ಮಾಡಿದವರ ಪತ್ತೆಗೆ ಕಾರ್ಯಾಚರಣೆ ಮುಂದುವರಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಅಲ್ಲದೇ ಮುಂದಿನ ಕೆಲವು ದಿನಗಳಲ್ಲಿ ಇನ್ನೂ ಹಲವರನ್ನು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.