Deepavali Festival: ಹುಬ್ಬಳ್ಳಿ, ಮೈಸೂರು, ಬೆಂಗಳೂರು ನಡುವೆ 55 ವಿಶೇಷ ರೈಲುಗಳ ಸಂಚಾರ
ಸುವ್ಯವಸ್ಥೆ ಮತ್ತು ಭದ್ರತೆ ಕಾಪಾಡಿಕೊಳ್ಳಲು ರೈಲ್ವೆ ಸುರಕ್ಷತಾ ಬಲ (ಆರ್‌ಪಿಎಫ್) ಹಾಜರಿ ಹೆಚ್ಚಿಸಲಾಗಿದೆ.
Team Udayavani, Oct 29, 2024, 2:53 PM IST
ಹುಬ್ಬಳ್ಳಿ: ದೀಪಾವಳಿ ಮತ್ತು ಛತ್ ಪೂಜಾ ಹಬ್ಬದ ಸಂದರ್ಭದಲ್ಲಿ ಹೆಚ್ಚಿದ ಪ್ರಯಾಣಿಕರ ದಟ್ಟಣೆ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಹುಬ್ಬಳ್ಳಿ, ಮೈಸೂರು ಮತ್ತು ಬೆಂಗಳೂರು ವಿಭಾಗಗಳಾದ್ಯಂತ ಒಟ್ಟು 55 ರೈಲುಗಳನ್ನು ಓಡಿಸುತ್ತಿದೆ.
ವಿಶೇಷ ರೈಲುಗಳೊಂದಿಗೆ ಪ್ರಯಾಣಿಕರ ಆರಾಮ ಮತ್ತು ಸುರಕ್ಷತಾ ಸೇವೆಗೂ ಕ್ರಮ ಕೈಗೊಂಡಿದೆ. ಸಾಮಾನ್ಯ ರೈಲುಗಳ ದಟ್ಟಣೆ
ನಿವಾರಿಸಲು, ವೇಟಿಂಗ್ ಲಿಸ್ಟ್ ಆಧಾರದ ಮೇಲೆ ಹೆಚ್ಚುವರಿ ಬೋಗಿಗಳನ್ನು ಹೆಚ್ಚಿಸಲಾಗಿದೆ.
ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಾಸ್ಕೋ ಡ ಗಾಮಾ, ಗದಗ, ಹೊಸಪೇಟೆ, ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಬೆಂಗಳೂರು, ಯಶವಂತಪುರ, ಮೈಸೂರು, ತುಮಕೂರು, ಬೆಂಗಳೂರು ಕಂಟೋನ್ಮೆಂಟ್, ಮಂಡ್ಯ, ಹಾಸನ, ದಾವಣಗೆರೆ ಮತ್ತು ನೈಋತ್ಯ ರೈಲ್ವೆಯ ಇತರೆ ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಿಸಲು ಅಧಿಕಾರಿಗಳು, ವಾಣಿಜ್ಯ ಸಿಬ್ಬಂದಿ ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಯಂ ಸೇವಕರು ಭದ್ರತಾ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿ ಸುತ್ತಿದ್ದಾರೆ. ಸುವ್ಯವಸ್ಥೆ ಮತ್ತು ಭದ್ರತೆ ಕಾಪಾಡಿಕೊಳ್ಳಲು ರೈಲ್ವೆ ಸುರಕ್ಷತಾ ಬಲ (ಆರ್‌ಪಿಎಫ್) ಹಾಜರಿ ಹೆಚ್ಚಿಸಲಾಗಿದೆ.
ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾಗಳು ಮತ್ತು ಬ್ಯಾಗೇಜ್ ಸ್ಕ್ಯಾನರ್‌ಗಳ ಸ್ಥಾಪನೆಯೊಂದಿಗೆ ಭದ್ರತೆ ಹೆಚ್ಚಿಸಲಾಗಿದೆ. ವಲಯದ ಎಲ್ಲಾ ಪ್ರಮುಖ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ತಾತ್ಕಾಲಿಕ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ನಿರಂತರ ಎಟಿವಿಎಂ
ಟಿಕೆಟಿಂಗ್‌ನ ಅನುಕೂಲಕ್ಕಾಗಿ ಎಲ್ಲಾ ಎಟಿವಿಎಂ ಆಯೋಜಕರಿಗೆ ಹೆಚ್ಚುವರಿ ಸ್ಮಾರ್ಟ್ ಕಾರ್ಡ್‌ಗಳನ್ನು ಮುಂಚಿತವಾಗಿ
ನೀಡಲಾಗಿದೆ.
ಹೆಚ್ಚುವರಿ ಟಿಕೆಟಿಂಗ್ ಕೌಂಟರ್‌ಗಳನ್ನು ಒದಗಿಸಲಾಗಿದೆ. ವಿಶೇಷ ರೈಲುಗಳ ಲಭ್ಯತೆ ಬಗ್ಗೆ ಪ್ರಯಾಣಿಕರಿಗೆ ಮಾರ್ಗದರ್ಶನ ನೀಡಲು ನಿಲ್ದಾಣಗಳಲ್ಲಿ ಹೆಚ್ಚುವರಿ ಟಿಕೆಟ್ ತಪಾಸಣಾ ಸಿಬ್ಬಂದಿ ನಿಯೋಜಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.