ಖುದ್ದು ಹಾಜರಾತಿಗೆ ಶಾಶ್ವತ ವಿನಾಯ್ತಿ ನೀಡಿ; ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಮನವಿ
ಆರ್‌ಎಸ್‌ಎಸ್ ಕಾರ್ಯಕರ್ತ ರಾಜೇಶ್ ದಾಖಲಿಸಿರುವ ಮಾನನಷ್ಟ ಪ್ರಕರಣ
Team Udayavani, May 11, 2022, 8:24 PM IST
ಥಾಣೆ: ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ತನಗೆ ಶಾಶ್ವತವಾಗಿ ಬಿಡುಗಡೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ; ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಮಹಾತ್ಮ ಗಾಂಧಿ ಹತ್ಯೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘವೇ ಕಾರಣ ಎಂದು ರಾಹುಲ್; 2014ರಲ್ಲಿ ಭಿವಂಡಿ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಪಿಸಿದ್ದರು. ಇದನ್ನು ವಿರೋಧಿಸಿದ ಆರ್‌ಎಸ್‌ಎಸ್ ಕಾರ್ಯಕರ್ತ ರಾಜೇಶ್ ಕುಂಟೆ ಮಾನಹಾನಿ ಪ್ರಕರಣ ದಾಖಲಿಸಿದ್ದರು. ಅಂದಿನಿಂದಲೂ ಈ ಪ್ರಕರಣ ನಡೆಯುತ್ತಲೇ ಇದೆ.
2018ರಲ್ಲಿ ನ್ಯಾಯಾಲಯ ರಾಹುಲ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಸೂಚಿಸಿತ್ತು. ಆಗಲೂ ರಾಹುಲ್ ತಾವು ನಿರಪರಾಧಿ ಎಂದೇ ಹೇಳಿಕೊಂಡಿದ್ದರು. ಈ ಪ್ರಕರಣದಲ್ಲಿ ಆಗಾಗ ರಾಹುಲ್ ತಾವೇ ನೇರವಾಗಿ ನ್ಯಾಯಾಲಯಕ್ಕೆ ಆಗಮಿಸಬೇಕಾದ ಪರಿಸ್ಥಿತಿಯಿದೆ.
ಆದರೆ ತಾನು ಸತತವಾಗಿ ಪ್ರವಾಸದಲ್ಲಿರುತ್ತೇನೆ, ಹಾಗಾಗಿ ನ್ಯಾಯಾಲಯಕ್ಕೆ ನೇರವಾಗಿ ಬರಲು ಅಸಾಧ್ಯ. ತನ್ನ ಪರವಾಗಿ ವಕೀಲರು ಬರುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಕೇಳಿಕೊಂಡಿದ್ದಾರೆ. ಈ ಬಗ್ಗೆ ನ್ಯಾಯಾಲಯ ಅರ್ಜಿದಾರ ರಾಜೇಶ್‌ಗೆ ಅಭಿಪ್ರಾಯ ತಿಳಿಸಲು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.