![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Feb 7, 2024, 12:12 AM IST
ನವದೆಹಲಿ: ಅಬಕಾರಿ ನೀತಿ ಹಗರಣದ ಬೆನ್ನಲ್ಲೇ ಇದೀಗ ಸಿಎಂ ಅರವಿಂದ್ ಕೇಜ್ರಿ ವಾಲ್ ನೇತೃತ್ವದ ದೆಹಲಿ ಸರ್ಕಾರದ ವಿರುದ್ಧ ಮತ್ತೂಂದು ಹಗರಣದ ಆರೋಪ ಕೇಳಿ ಬಂದಿದೆ. ದೆಹಲಿಯ ಜಲಮಂಡಳಿ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ.
ಅದರಲ್ಲಿ ಆಪ್ 17 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿದೆ ಎಂಬ ಆರೋಪದಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳು ಮಂಗಳವಾರ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಸೇರಿದಂತೆ ಇತರೆ ಆಪ್ತರಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಿ, ಶೋಧ ಕಾರ್ಯ ಕೈಗೊಂಡರು.
ದೆಹಲಿ ಜಲಮಂಡಳಿ ಟೆಂಡರ್‌ನಲ್ಲಿ ಲಂಚ ಪಡೆಯಲಾಗಿದೆ. ನಂತರ ಆಮ್ ಆದ್ಮಿ ಪಕ್ಷದ ಚುನಾವಣಾ ನಿಧಿಗೆ ಆ ಹಣವನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ. ಅಕ್ರಮ ಹಣ ವರ್ಗಾ ವಣೆ ತಡೆ ಕಾಯ್ದೆಯಡಿಯಲ್ಲಿ ಈ ಶೋಧ ಕಾರ್ಯ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಭವ್ ಕುಮಾರ್ ನಿವಾಸ, ದೆಹಲಿ ಜಲಮಂಡಳಿಯ ಮಾಜಿ ಸದಸ್ಯ ಶಲಭ್ ಕುಮಾರ್, ರಾಜ್ಯಸಭಾ ಸದಸ್ಯ ಎನ್.ಡಿ.ಗುಪ್ತ ಸೇರಿದಂತೆ ಪ್ರಮುಖರ ನಿವಾಸಗಳು, ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಲಾಗಿದೆ.
ಮನರೇಗಾ ನಿಧಿ ದುರ್ಬಳಕೆ: ಬಂಗಾಳದಲ್ಲೂ ಇ.ಡಿ.ದಾಳಿ
ಕೊಲ್ಕತ್ತಾ: ಮನರೇಗಾ ನಿಧಿಯನ್ನು ದುರ್ಬಳಕೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ, ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಪಶ್ಚಿಮ ಬಂಗಾಳದ ನಾನಾ ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಅಧಿಕಾರಿಯೊಬ್ಬರ ತಂಗಿಯ ನಿವಾಸದಲ್ಲಿ 4.5 ಕೋಟಿ ರೂ. ನಗದು ಪತ್ತೆಯಾಗಿದೆ. ಇದು ಮನರೇಗಾದಲ್ಲಿ ದುರ್ಬಳಕೆ ಯಾಗಿರುವ ಹಣವಾಗಿರಬಹುದು ಎಂದು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ದಾಳಿ ಖಂಡಿಸಿರುವ ಟಿಎಂಸಿ, ಪ.ಬಂಗಾಳಕ್ಕೆ ನೀಡಬೇಕಾ ಗಿರುವ ತೆರಿಗೆ ಬಾಕಿಯನ್ನು ಪಾವತಿ ಸುವಂತೆ ಒತ್ತಾಯಿಸಿ ನಡೆಯುತ್ತಿ ರುವ ಧರಣಿಯ ಗಮನ ಬೇರೆಡೆಗೆ ಸೆಳೆಯಲು ಕೇಂದ್ರ ಸೇಡಿನ ರಾಜಕೀ ಯ ಮಾಡುತ್ತಿದೆ ಎಂದು ದೂರಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.