CM Siddaramaiah ರಾಜೀನಾಮೆಗೆ ಆಗ್ರಹ: ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ
Team Udayavani, Sep 25, 2024, 12:22 AM IST
ಉಡುಪಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಅಭಿ ಯೋಜನೆಗೆ ಆದೇಶಿಸಿದ್ದನ್ನು ಹೈಕೋರ್ಟ್ ಎತ್ತಿ ಹಿಡಿದಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ತತ್ಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಮಾತನಾಡಿ, ಸಿಎಂ ಅವರು ನ್ಯಾಯಾಲಯದ ತೀರ್ಪನ್ನು ಒಪ್ಪಿ ರಾಜೀನಾಮೆ ನೀಡಿ, ತನಿಖೆ ಎದುರಿಸಬೇಕು ಎಂದು ಆಗ್ರಹಿಸಿದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ನ್ಯಾಯಾಲಯದ ಆದೇಶಕ್ಕೆ ಮನ್ನಣೆ ನೀಡಿ ಸಿದ್ದರಾಮಯ್ಯ ಅವರು ತತ್ಕ್ಷಣ ರಾಜೀನಾಮೆ ನೀಡಲಿ ಎಂದರು.
ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಸಿದ್ದರಾಮಯ್ಯ ಯಾವ ಕೋರ್ಟ್ ಮೆಟ್ಟಿಲೇರಿದರೂ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು. ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಪ್ರಮುಖರಾದ ದಿನಕರ ಶೆಟ್ಟಿ ಹೆರ್ಗ, ರೇಶ್ಮಾ ಉದಯ ಶೆಟ್ಟಿ, ಶಿಲ್ಪಾ ಸುವರ್ಣ, ರಾಜೇಶ್ ಕಾವೇರಿ, ಶ್ರೀಶ ನಾಯಕ್ ಪೆರ್ಣಂಕಿಲ, ವಿಜಯ ಕೊಡವೂರು, ಸಂಧ್ಯಾ ರಮೇಶ್, ಶ್ಯಾಮಲಾ ಕುಂದರ್, ನಯನಾ ಗಣೇಶ್, ಶ್ರೀನಿಧಿ ಹೆಗ್ಡೆ, ಶಿವಕುಮಾರ್ ಅಂಬಲಪಾಡಿ ಮುಂತಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.