ರಬ್ಬರ್‌ ಬೆಳೆಗಾರರ ರಕ್ಷಣೆಗೆ ಧಾವಿಸುವಂತೆ ಆಗ್ರಹ

ಉದಯವಾಣಿ ವರದಿ ಪ್ರಸ್ತಾವಿಸಿದ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ

Team Udayavani, Feb 21, 2023, 6:25 AM IST

ರಬ್ಬರ್‌ ಬೆಳೆಗಾರರ ರಕ್ಷಣೆಗೆ ಧಾವಿಸುವಂತೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ರಬ್ಬರ್‌ ಬೆಳೆಯ ನಿರ್ವಹಣೆ ಕಷ್ಟಕರವಾಗಿರುವುದರಿಂದ ಸರಕಾರ ಕೂಡಲೇ ರಬ್ಬರ್‌ ಬೆಳೆಗಾರರ ರಕ್ಷಣೆಗೆ ಮುಂದಾಗಬೇಕು ಎಂದು ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್‌ನ ಮಂಜುನಾಥ್‌ ಭಂಡಾರಿ ಆಗ್ರಹಿಸಿದ್ದಾರೆ.

ಕಲಾಪದಲ್ಲಿ ಸೋಮವಾರ ಶೂನ್ಯ ವೇಳೆಯಲ್ಲಿ “ರಬ್ಬರ್‌ ಬೆಳೆಗೆ ನಿರುತ್ತೇಜನದ ಕೊಡಲಿ ಏಟು; ಕೇರಳ ಮಾದರಿ ಪರಿಹಾರಕ್ಕೆ ಆಗ್ರಹ’ ಎಂಬ ಶೀರ್ಷಿಕೆಯಡಿ ಫೆ. 15ರಂದು “ಉದಯವಾಣಿ’ಯಲ್ಲಿ ಪ್ರಕಟವಾದ ಸುದ್ದಿಯನ್ನು ಪ್ರಸ್ತಾವಿಸಿ ಸರಕಾರದ ಗಮನ ಸೆಳೆದರು.

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೈತರು ಅಡಿಕೆಯ ಜತೆಗೆ ಮುಖ್ಯ ವಾಣಿಜ್ಯ ಬೆಳೆಯಾಗಿ ರಬ್ಬರನ್ನು ಆರಂಭಿಸಿದ್ದರೂ ಕಳೆದ 5 ವರ್ಷಗಳಿಂದ ಉತ್ತಮ ಧಾರಣೆ ಕಾಣದಿರುವ ಹಿನ್ನೆಲೆಯಲ್ಲಿ ರಬ್ಬರ್‌ ಮರಗಳ ಬುಡಕ್ಕೆ ಕೊಡಲಿ ಏಟು ಹಾಕಬೇಕಾದ ಅನಿವಾರ್ಯ ಪರಿಸ್ಥಿತಿ ಒದಗಿದೆ.

ರಾಜ್ಯದಲ್ಲಿ 60 ಸಾವಿರ ಹೆಕ್ಟೇರ್‌ಗೂ ಮೇಲ್ಪಟ್ಟು ಪ್ರದೇಶಲ್ಲಿ ರಬ್ಬರ್‌ ಬೆಳೆಯಲಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಯ 5 ಲಕ್ಷಕ್ಕೂ ಹೆಚ್ಚು ಬೆಳೆಗಾರರು ಇದ್ದಾರೆ. 12 ವರ್ಷಗಳ ಹಿಂದೆ ಕೆ.ಜಿ.ಗೆ 250 ರೂ ಇದ್ದ ಧಾರಣೆ ಇಂದು 130-150 ರೂ. ಆಸುಪಾಸಿನಲ್ಲಿದೆ.

ಕೇರಳದ ರಬ್ಬರ್‌ ಬೆಳೆಗಾರರ ರಕ್ಷಣೆಗೆ ರಬ್ಬರು ಉತ್ಪಾದನ ಪ್ರೋತ್ಸಾಹಧನ ಯೋಜನೆ ಜಾರಿಗೊಳಿಸಲಾಗಿದೆ. ಆದರೆ ಕರ್ನಾಟಕದಲ್ಲಿ ರೈತರಿಗೆ ಸರಕಾರದ ಸರಿಯಾದ ಪ್ರೋತ್ಸಾಹ ಸಿಗದ ಕಾರಣ ಬೆಳೆಗಾರರು ಅತಂತ್ರರಾಗಿದ್ದಾರೆ. ಕರ್ನಾಟಕದಲ್ಲಿ ರಬ್ಬರ್‌ ಬೆಳೆಯ ನಿರ್ವಹಣೆ ಕಷ್ಟಕರವಾಗಿರುವುದರಿಂದ ಕೂಡಲೇ ಸರಕಾರ ರಬ್ಬರ್‌ ಬೆಳೆಗಾರರ ರಕ್ಷಣೆಗೆ ಮುಂದಾಗಬೇಕು ಹಾಗೂ ಕೇರಳ ರಾಜ್ಯದಂತೆ ಸೂಕ್ತ ಪರಿಹಾರವನ್ನು ಘೋಷಿಸಬೇಕು ಎಂದು ಮಂಜುನಾಥ್‌ ಭಂಡಾರಿ ಒತ್ತಾಯಿಸಿದರು.

ಇದಕ್ಕೆ ಸರಕಾರದ ಪರವಾಗಿ ಉತ್ತರಿಸಿದ ಸಚಿವ ಅಶ್ವತ್ಥನಾರಾಯಣ, ರಬ್ಬರ್‌ ಬೆಳೆಗಾರರ ರಕ್ಷಣೆಗೆ ಸರಕಾರ ಅಗತ್ಯ ಕ್ರಮಗಳನ್ನು ಸರಕಾರ ಕೈಗೊಳ್ಳಲಿದೆ. ಆದರೆ, ವಿವರವಾದ ಉತ್ತರವನ್ನು ಸಂಬಂಧಪಟ್ಟ ಸಚಿವರಿಂದ ಕೊಡಿಸುವುದಾಗಿ ಹೇಳಿದರು.

ಟಾಪ್ ನ್ಯೂಸ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.