Subramanya; ಕುಕ್ಕೆ ಸುಬ್ರಹ್ಮಣ್ಯಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ
ನಕ್ಸಲ್ ಭೇಟಿ ವಿಚಾರದ ಬಗ್ಗೆ ಅಧಿಕಾರಿಗಳಲ್ಲಿ ಚರ್ಚೆ
Team Udayavani, Mar 26, 2024, 6:31 PM IST
ಸುಬ್ರಹ್ಮಣ್ಯ: ಈ ಭಾಗದ ಪ್ರದೇಶಗಳಿಗೆ ನಕ್ಸಲರು ಭೇಟಿ ನೀಡಿದ್ದಾರೆ ಎಂಬ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು, ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸುತ್ತಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಅವರು ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರ ಜೊತೆ ಮಾನಾಡಿದರು. ನಕ್ಸಲ್ ಭೇಟಿ ವಿಚಾರದ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆಯುವೆ. ಚುನಾವಣೆ ಸಂದರ್ಭದಲ್ಲಿ ಕೋವಿ ಡೆಪಾಸಿಟ್ ಪಡೆಯದೇ ಇರಲು ಕೋವಿ ಮಾಲಕರು ಒತ್ತಾಯಿಸುತ್ತಿದ್ದಾರೆ. ಚುನಾವಣಾ ಆಯೋಗದ ಸೂಚನೆಯಂತೆ ಈ ಹಿಂದಿನಿಂದಲೂ ಈ ಪದ್ಧತಿ ಇದೆ. ಯಾವುದೇ ಹೆಚ್ಚುಕಮ್ಮಿ ಆಗದಂತೆ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಜನರಿಗೆ ಯಾವ ರೀತಿಯ ರಕ್ಷಣೆ ನೀಡಬಹುದು ಎಂಬ ಬಗ್ಗೆ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ. ಅದರೊಂದಿಗೆ ದೇವರ ಆಶೀರ್ವಾದ ಬೇಡಲು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಶೃಂಗೈರಿ, ಗೌರಿಗದ್ದೆ, ಗೋಕರ್ಣ, ಮುಂತಾದ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುವ ಉದ್ದೇಶ ನಮ್ಮದಾಗಿದೆ. ನಮಗೆ ದೇವರಲ್ಲಿ ಸಂಪೂರ್ಣ ನಂಬಿಕೆ ಇದೆ. ಧರ್ಮದ ಬಗ್ಗೆ ನಂಬಿಕೆ ಇದೆ ಎಂದರು. ಈ ಹಿಂದೆ ನಡೆದ ರಾಜ್ಯ ಅಸೆಂಬ್ಲಿ ಚುನಾವಣೆಯಲ್ಲಿ ಕೂಡ ಕೂಡ ದೇವರು ನಮ್ಮನ್ನ ಕೈ ಬಿಟ್ಟಿಲ್ಲ. ಒಳ್ಳೆಯದನ್ನೇ ಮಾಡಿದ್ದಾರೆ. ರಾಜ್ಯದ ಜನತೆಗೆ ಒಳ್ಳೆಯದಾಗಲಿ ಎಂದರು.
ದೇವರ ದರ್ಶನ:
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮ ದೈವದ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿಸಿ ಜಯರಾಮ, ಕಾಂಗ್ರೆಸ್ ಮುಖಂಡರಾದ ಭರತ್ ಮುಂಡೋಡಿ, ಧನಂಜಯ ಅಡ³ಂಗಾಯ, ಮಮತಾ ಗಟ್ಟಿ, ಅಶೋಕ ನೆಕ್ರಾಜೆ, ಪಿ.ಪಿ. ವರ್ಗೀಸ್, ಮಾಧವ ಮಾನಾಡು, ಕೃಷ್ಣಪ್ಪ, ಪ್ರದೀಪ್ ಕಳಿಗೆ, ದಿನೇಶ್ ಮಡ್ತಿಲ್, ಹರೀಶ ಇಂಜಾಡಿ, ರಾಜೀವ್ ರೈ, ವಿಜಯಕುಮಾರ ಸೊರಕೆ, ವಿಮಲ ರಂಗಯ್ಯ, ಸರಸ್ವತಿ ಕಾಮತ್, ಶಿವರಾಮ ರೈ, ಕೃಷ್ಣಮೂರ್ತಿ ಭಟ್, ಸುರೇಶ್ ಭಟ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.