87ನೇ ವಸಂತಕ್ಕೆ ಕಾಲಿಟ್ಟ ದೇವೇಗೌಡರಿಗೆ ಗಣ್ಯರ ಶುಭ ಹಾರೈಕೆ
Team Udayavani, May 19, 2019, 3:07 AM IST
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹುಟ್ಟುಹಬ್ಬದ ಪ್ರಯುಕ್ತ ಶನಿವಾರ ಕುಟುಂಬ ಸಮೇತ ತಿರುಪತಿಯಲ್ಲಿ ವೆಂಕಟೇಶ್ವರನ ದರ್ಶನ ಪಡೆದರು.
86 ವರ್ಷ ಪೂರೈಸಿ 87ನೇ ವಸಂತಕ್ಕೆ ಕಾಲಿಡುತ್ತಿರುವ ದೇವೇಗೌಡರಿಗೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.
ತಿರುಪತಿಯಿಂದ ಬೆಂಗಳೂರಿಗೆ ಆಗಮಿಸಿದ ಅವರನ್ನು ವಿಮಾನ ನಿಲ್ದಾಣದಲ್ಲಿ ನೂರಾರು ಕಾರ್ಯಕರ್ತರು, ಅಭಿಮಾನಿಗಳು ಸ್ವಾಗತಿಸಿ, ಅಲ್ಲೇ ಕೇಕ್ ಕಟ್ ಮಾಡಿ, ಹುಟ್ಟಹಬ್ಬದ ಶುಭಾಶಯ ಕೋರಿದರು.
ನಂತರ, ಪದ್ಮನಾಭನಗರ ನಿವಾಸಕ್ಕೆ ತೆರಳಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮೇಯರ್ ಗಂಗಾಂಬಿಕೆ, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಸೇರಿ ಹಲವು ಗಣ್ಯರು ಗೌಡರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಶುಭಾಶಯ ಕೋರಿದ್ದು, ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಮಾಜಿ ಪ್ರಧಾನಿ ದೇವೇಗೌಡರಿಗೆ ಆರೋಗ್ಯ ಹಾಗೂ ಆಯುಷ್ಯವನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು, ರಾಜ್ಯ ಹಾಗೂ ರಾಷ್ಟ್ರ ರಾಜಕಾರಣಕ್ಕೆ ದೇವೇಗೌಡರ ಕೊಡುಗೆ ಮಹತ್ವದ್ದು. ಕೋಮುವಾದಿ ಶಕ್ತಿಗಳ ವಿರುದ್ಧ ಜಾತ್ಯತೀತರನ್ನು ಒಗ್ಗೂಡಿಸುವಲ್ಲಿ ಅವರ ಪಾತ್ರವನ್ನು ದೇಶ ಎಂದೂ ಮರೆಯದು.
ದೇವೇಗೌಡರ ನಡೆ ನನಗೆ ಸದಾ ಮಾರ್ಗದರ್ಶಿ. ಅವರ ಸಾಮಾಜಿಕ ಕಳಕಳಿ ನನಗೆ ಇಂದಿಗೂ ಆದರ್ಶ. ಅವರ ಹುಟ್ಟುಹಬ್ಬದ ದಿನದಂದು ಅವರ ಕೊಡುಗೆಯನ್ನು ಸ್ಮರಿಸುತ್ತೇನೆ. ಇಂದು ನಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜನ್ಮದಿನದ ಸಂದರ್ಭದಲ್ಲಿ ಶುಭ ಕೋರಿದ ಎಲ್ಲರಿಗೂ ಧನ್ಯವಾದಗಳು.
ಇಂದು ಕುಟುಂಬದ ಸದಸ್ಯರೆಲ್ಲರೂ ಜತೆಯಾಗಿ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಅವರ ಆಯುರಾರೋಗ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದೆವು. ಅವರ ಅನುಭವ, ಮಾರ್ಗದರ್ಶನ ಪಕ್ಷಕ್ಕೆ ಹಾಗೂ ನಾಡಿಗೆ ಹೀಗೆ ಲಭ್ಯವಾಗಲಿ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.