ಆಜಾನ್ ಶಬ್ದ ನಿಯಂತ್ರಣಕ್ಕಾಗಿ ಡಿವೈಸ್ ಅಳವಡಿಕೆ: ಮೌಲಾನ ಡಾ| ರಶಾದಿ
ಎಲ್ಲ ಮಸೀದಿಗಳಲ್ಲಿ ಮೈಕ್‌ಗೆ ಡಿವೈಸ್
Team Udayavani, May 9, 2022, 1:08 AM IST
ಮಲ್ಪೆ: ಸುಪ್ರೀಂ ಕೋರ್ಟ್ ಆದೇಶದಂತೆ ಮಸೀದಿಗಳಲ್ಲಿ ಆಜಾನ್ ಶಬ್ದವನ್ನು ನಿಯಂತ್ರಿಸಲು ಮೈಕ್‌ಗಳಿಗೆ ಅಳವಡಿಸಲು ಡಿವೈಸ್ ಅಭಿವೃದ್ಧಿಪಡಿಸಲಾಗಿದೆ. ಇದರಿಂದ ಶಬ್ದ ನಿಯಂತ್ರಣದಲ್ಲಿ ಇರುತ್ತದೆ ಎಂದು ಬೆಂಗಳೂರು ಸಿಟಿ ಜಾಮಿಯಾ ಮಸೀದಿಯ ಖತೀಬ್ ಮೌಲಾನ ಡಾ| ಮೊಹಮ್ಮದ್ ಮಕ್ಸೂದ್ ಇಮ್ರಾನ್ ಸಹಾಬ್ ರಶಾದಿ ಹೇಳಿದ್ದಾರೆ.
ಯಾರಿಗೂ ತೊಂದರೆ ಕೊಡುವುದು ಸರಿಯಲ್ಲ. ಅದಕ್ಕಾಗಿ ಈ ಡಿವೈಸ್ ಸಿದ್ಧಪಡಿಸಲಾಗಿದೆ. ಪ್ರತೀ ಜಿಲ್ಲೆಗೆ ತೆರಳಿ ಈ ಬಗ್ಗೆ ಅರಿವು ಮೂಡಿಸಿ ಅಳವಡಿಸಿಕೊಳ್ಳುವಂತೆ ಮನವಿ ಮಾಡಲಾಗುವುದು ಎಂದು ರವಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಇದನ್ನು ಆದಷ್ಟು ಬೇಗ ರಾಜ್ಯದ ಎಲ್ಲ ಮಸೀದಿಗಳಲ್ಲೂ ಅಳವಡಿಕೆ ಮಾಡಲಾಗುವುದು. ಇದನ್ನು ದೇವಸ್ಥಾನ, ಚರ್ಚ್, ಗುರುದ್ವಾರಗಳಲ್ಲಿಯೂ ಅಳವಡಿಸಬೇಕಾಗಿದೆ. ಯಾರಿಗೂ ಯಾರೂ ತೊಂದರೆ ಕೊಡಬಾರದು ಎಂದರು.
ವಿರೋಧ ಬೇಡ: ಆಜಾನ್‌ಗೆ ಸಂಬಂಧಿಸಿ ಶ್ರೀರಾಮ ಸೇನೆಯವರು ಮಸೀದಿಯ ಮುಂದೆ ಹನುಮಾನ್ ಚಾಲೀಸಾ ಪಠಿಸಿದರೆ ಯಾರೂ ವಿರೋಧ ಮಾಡಬಾರದು. ಅವರಿಗೆ ನೀರು ಬೇಕಾದರೆ ನೀರು, ಜ್ಯೂಸ್ ಬೇಕಾದರೆ ಜ್ಯೂಸ್ ಕೊಡಿ. ಆ ಮೂಲಕ ನಾವು ಸೌಹಾರ್ದದ ಸಂದೇಶವನ್ನು ನೀಡಬೇಕು ಎಂದರು. ಉಡುಪಿ ಜಿಲ್ಲಾ ವಕ್ಫ್ ಮಂಡಳಿ ಸಲಹಾ ಸಮಿತಿಯ ಮಾಜಿ ಅಧ್ಯಕ್ಷ ಯಾಹ್ಯ ನಕ್ವಾ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.