ದ.ಕ.: ಸತತ 11ನೇ ದಿನವೂ ಕೊರೊನಾ ಪ್ರಕರಣವಿಲ್ಲ
Team Udayavani, Apr 16, 2020, 5:12 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿದ್ದು, ಸತತ 11ನೇ ದಿನವೂ ಯಾವುದೇ ಪಾಸಿಟಿವ್ ಪ್ರಕರಣ ದಾಖಲಾಗಲಿಲ್ಲ.
ಬುಧವಾರ ಒಟ್ಟು 42 ಮಂದಿಯ ಗಂಟಲು ದ್ರವ ಮಾದರಿಯ ವರದಿ ಬಂದಿದ್ದು, ಯಾವುದೇ ಪಾಸಿಟಿವ್ ಪ್ರಕರಣ ಕಂಡುಬಂದಿಲ್ಲ. ಬುಧವಾರ 22 ಮಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದು, ಈ ವರೆಗೆ 148 ವರದಿಗಳು ಬಾಕಿ ಇವೆ. ಒಟ್ಟು 1,225 ಮಂದಿ ಗೃಹನಿಗಾದಲ್ಲಿದ್ದು, 25 ಮಂದಿ ಇಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಫಿವರ್ ಕ್ಲಿನಿಕ್‌ನಲ್ಲಿ ಬುಧವಾರ 75 ಮಂದಿಯನ್ನು ಪರೀಕ್ಷಿಸಿದ್ದು, ಈವರೆಗೆ 276 ಮಂದಿ ತಪಾಸಣೆಗೆ ಒಳಗಾಗಿದ್ದಾರೆ. ದ.ಕ. ಜಿಲ್ಲೆಯಲ್ಲಿ ಕೊರೊನಾ ದೃಢಪಟ್ಟು ಚಿಕಿತ್ಸೆಗೆ ಒಳಗಾಗಿದ್ದ 12 ಮಂದಿ ಸೋಂಕಿತರ ಪೈಕಿ 9 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಪ್ಯಾಕೇಜ್‌ನಲ್ಲಿ ಜನಧನ ಮಹಿಳಾ ಖಾತೆದಾರರಿಗೆ ಪ್ರತೀ ತಿಂಗಳು ತಲಾ 500 ರೂ.ಗಳಂತೆ 3 ತಿಂಗಳು ಕೇಂದ್ರ ಸರಕಾರ ಹಣ ಜಮಾ ಮಾಡಲಿದೆ. ಜಮಾ ಆಗಿರುವ ಹಣವು ಖಾತೆಯಲ್ಲೇ ಇರಲಿದ್ದು, ಆ ಹಣವನ್ನು ಡ್ರಾ ಮಾಡಿಕೊಳ್ಳಲು ಯಾವುದೇ ಕಾಲಮಿತಿ ಇರುವುದಿಲ್ಲ. ವದಂತಿಗಳಿಗೆ ಕಿವಿಗೊಡದೆ ಅಗತ್ಯವಿದ್ದಲ್ಲಿ ಮಾತ್ರ ಬ್ಯಾಂಕ್‌ಗೆ ತೆರಳಿ ಹಣ ಪಡೆಯಬಹುದು. ಬ್ಯಾಂಕ್‌ಗಳಿಗೆ ಭೇಟಿ ನೀಡಿದಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಕಾರ್ಮಿಕ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆಯು ವಲಸೆ ಕಾರ್ಮಿಕರಿಗೆ ಸಂಬಂಧಪಟ್ಟ ಮಾಹಿತಿಯನ್ನು ಸಂಗ್ರಹಿಸುತ್ತಿದೆ. ಕೂಳೂರು ಪ್ರದೇಶದಲ್ಲಿ ಬುಧವಾರ ವದಂತಿಯೊಂದರ ಮೇರೆಗೆ ಜನಜಂಗುಳಿ ಸೇರಿದ್ದು ಗಮನಕ್ಕೆ ಬಂದಿದೆ. ಕಾರ್ಮಿಕರು ವದಂತಿಗಳಿಗೆ ಕಿವಿಗೊಡದೆ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಹಿತಿ ನೀಡಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.