ಐಐಟಿ-ಐಐಐಟಿಗೆ ಡಿಸಿ ಭೇಟಿ : ಸಮಯಮಿತಿಯಲ್ಲಿ ನಿರ್ಮಾಣ ಕೆಲಸ ಮುಗಿಸಲು ನಿತೇಶ ಸೂಚನೆ
Team Udayavani, Sep 27, 2020, 2:25 PM IST
ಧಾರವಾಡ: ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಹಾಗೂ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ)ಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಭೇಟಿ ನೀಡಿ ರಸ್ತೆ, ಕಟ್ಟಡ ಸೇರಿದಂತೆ ಮೂಲ ಸೌಕರ್ಯ ಕಾಮಗಾರಿಗಳ ನಿರ್ಮಾಣ ಪ್ರಗತಿ ಪರಿಶೀಲನೆ ನಡೆಸಿದರು.
ಐಐಟಿಯ ನೂತನ ಕ್ಯಾಂಪಸ್ ಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಹಾಗೂ ಡಾಂಬರೀಕರಣ, ನೂತನ ಕಟ್ಟಡ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಲು ಮತ್ತು ಅರಣ್ಯ ಇಲಾಖೆಗೆ ಸಂಬಂ ಧಿಸಿದ ಜಾಗವನ್ನು ಸರ್ವೇ ಮಾಡಿ ಐಐಟಿ ನೂತನ ಕ್ಯಾಂಪಸ್ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಅರಣ್ಯ ಇಲಾಖೆ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಧಾರವಾಡ ತಾಲೂಕಿನಲ್ಲಿ ಐಐಐಟಿಯ ಶಾಶ್ವತ ಶಿಬಿರಕ್ಕೆ ರಸ್ತೆ ಕಾಮಗಾರಿಯು 720 ಲಕ್ಷ ರೂ.ಗೆ ಸರ್ಕಾರದಿಂದ ಅನುಮೋದನೆಯಾಗಿದ್ದು, ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳಲಾಗುತ್ತಿದೆ.
ರಸ್ತೆ ಕಾಮಗಾರಿಯನ್ನು ಪರೀಕ್ಷಿಸಲಾಗಿ ಇಟಿಗಟ್ಟಿ ಗ್ರಾಮದಲ್ಲಿ ಕಾಂಕ್ರೀಟ್ ಗಟಾರ ಕಾಮಗಾರಿ ಹಾಗೂ ಸಿಡಿಗಳ ಕಾಮಗಾರಿ ಪೂರ್ಣಗೊಂಡಿದ್ದು, ಫಾರ್ಮೇಶನ್ ಕಾಮಗಾರಿಯು ಪ್ರಗತಿಯಲ್ಲಿದೆ. ಗುಣ್ಣಮಟ್ಟದ ಕಾಮಗಾರಿಯನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಕಾಮಗಾರಿಗಳ ವೀಕ್ಷಣೆಯ ನಂತರ ಜಿಲ್ಲಾಧಿಕಾರಿಗಳು ಪ್ರಸ್ತುತ ಕಾರ್ಯನಿರ್ವಹಿಸುವ ವಾಲ್ಮೀ ಕಟ್ಟಡದ ಐಐಟಿ ಕೇಂದ್ರಕ್ಕೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಮತ್ತು ಆಡಳಿತ ಮಂಡಳಿ ಸದಸ್ಯರೊಂದಿಗೆ ಕಾಮಗಾರಿಗಳ ಪ್ರಗತಿ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಚರ್ಚಿಸಿದರು.
ಸಭೆಯಲ್ಲಿ ಐಐಟಿ ಧಾರವಾಡದ ನಿರ್ದೇಶಕ ಪ್ರೊ| ಪಿ. ಶೇಷು, ಡೀನ್‌ರಾದ ಪ್ರೊ| ನಾಗೇಶ್ ಆರ್.ಐಯ್ಯರ್, ಪ್ರೊ|ಎಸ್. ಆರ್.ಎಮ್. ಪ್ರಸನ್ನ, ಪ್ರೊ|ಎಸ್.ವಿ. ಪ್ರಭು, ಪ್ರೊ| ಬಿ.ಎಲ್. ತೆಂಬೆ ಮತ್ತು ರಘು ಬಾಬು, ಐಐಐಟಿ ಕುಲಸಚಿವ ಬಸವರಾಜಪ್ಪ ಎಸ್., ಉಪವಿಭಾಗಾಧಿಕಾರಿ ಡಾ| ಗೋಪಾಲಕೃಷ್ಣ ಜಿ., ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಕ ಅಭಿಯಂತ ಎಸ್.ಬಿ.ಚೌಡನ್ನವರ, ತಹಶೀಲ್ದಾರ್ ಸಂತೋಷ ಬಿರಾದಾರ, ತಾಲೂಕಾ ಎಡಿಎಲ್‌ಆರ್ ಕೆ.ಜಿ.ಲಟ್ಟಿ, ಅರಣ್ಯ ಇಲಾಖೆಯ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.