“ಮಾರಿಗೋಲ್ಡ್’ನಲ್ಲಿ ದಿಗಂತ್
Team Udayavani, Jun 11, 2020, 4:06 AM IST
ಕನ್ನಡ ಚಿತ್ರರಂಗದಲ್ಲಿ ದೂದ್‌ಪೇಡ ಎಂದೇ ಕರೆಸಿಕೊಳ್ಳುವ ಗುಳಿಕೆನ್ನೆ ಹುಡುಗ ದಿಗಂತ್ ಕೈಯಲ್ಲಿ ಈಗ ಎರಡು ಮತ್ತೂಂದು ಚಿತ್ರಗಳಿವೆ. ಸದ್ಯಕ್ಕೆ ದಿಗಂತ್ ಅಭಿನಯಿಸಿರುವ “ಹುಟ್ಟು ಹಬ್ಬದ ಶುಭಾಶಯಗಳು ‘ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಈ ಚಿತ್ರದ ಮೇಲೆ ದಿಗಂತ್ ಗೆ ನಿರೀಕ್ಷೆಯೂ ಇದೆ. ಯೋಗರಾಜ್ ಭಟ್ ನಿರ್ದೇಶನದ “ಗಾಳಿಪಟ 2′ ಚಿತ್ರವೂ ಇದೆ. ಈ ಸಿನಿಮಾದಲ್ಲಿ ಗಣೇಶ್ ಹಾಗು ಪವನ್‌ಕುಮಾರ್ ದಿಗಂತ್‌ನೊಂದಿಗಿದ್ದಾರೆ.
ಹಿಂದೆ “ಗಾಳಿಪಟ’ದಲ್ಲೂ ಮೋಡಿ ಮಾಡಿದ್ದ ಗಣೇಶ್ ಹಾಗು ದಿಗಂತ್ ಈಗ “ಗಾಳಿಪಟ 2′ ಚಿತ್ರದಲ್ಲಿ ಪ್ರೇಕ್ಷಕರ ಮನ ಗೆಲ್ಲಲು ಸಜ್ಜಾಗುತ್ತಿದ್ದಾರೆ. ಇನ್ನು, ಇದೇ ಮೊದಲ ಬಾರಿಗೆ ಕಾಮಿಡಿ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಮಾರಿಗೋಲ್ಡ್’ ಸಿನಿಮಾದಲ್ಲಿ ದಿಗಂತ್ ನಟಿಸುತ್ತಿದ್ದಾರೆ. ಈ ಚಿತ್ರವನ್ನು ರಾಘವೇಂದ್ರ ಎಂ.ನಾಯಕ್ ನಿರ್ದೇಶನ ಮಾಡುತ್ತಿದ್ದು, ಆರ್.ವಿ.ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ರಘುವರ್ಧನ್ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.
“ಮಾರಿಗೋಲ್ಡ್’ ಅಂದಾಕ್ಷಣ ಎಲ್ಲರಿಗೂ ಬಿಸ್ಕತ್ ನೆನಪಾಗಬಹುದು. ಇಲ್ಲಿ ಹೆಸರು ಮಾತ್ರ ಹಾಗೆ ಇಡಲಾಗಿದೆ. ಚಿತ್ರದೊಳಗಿರುವ ಕಥಾಹಂದರ ಹೊಸತನದೊಂದಿಗೆ ಕೂಡಿದ್ದು, ದಿಗಂತ್‌ಗೆ ಇದೇ ಮೊದಲ ಬಾರಿಗೆ ಒಂದು ವಿಶೇಷ ಪಾತ್ರ ಸೃಷ್ಟಿ ಮಾಡಲಾಗಿದೆ. ದಿಗಂತ್ ಕೂಡ ಕಥೆ, ಪಾತ್ರ ಮೆಚ್ಚಿಕೊಂಡು ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಹೊಸ ಬಗೆಯ ಕಥೆ, ಪಾತ್ರ ಎದುರು ನೋಡುತ್ತಿದ್ದ ದಿಗಂತ್‌ಗೆ “ಮಾರಿಗೋಲ್ಡ್’ ಹೊಸ ರೀತಿಯ ಸಿನಿಮಾ ಆಗಲಿದೆ ಎಂಬುದು ಸಿನಿಮಾ ತಂಡದ ಅಭಿಪ್ರಾಯ. ಅಂದಹಾಗೆ, ಈಗಾಗಲೇ ಮೊದಲ ಹಂತದ ಚಿತ್ರದ ಚಿತ್ರೀಕರಣ ನಡೆದಿದೆ.
ಬೆಂಗಳೂರು, ಚಿತ್ರದುರ್ಗ ಸುತ್ತಮುತ್ತಲ ಸ್ಥಳಗಳಲ್ಲಿ ಚಿತ್ರೀಕರಿಸಿರುವ ತಂಡ, ಎರಡನೇ ಹಂತದ ಚಿತ್ರೀಕರಣಕ್ಕೆ ಹೊರಡಲು ಸಿದ್ಧತೆ ಮಾಡಿಕೊಂಡಿದ್ದು, ಈ ಚಿತ್ರದಲ್ಲಿ ದಿಗಂತ್‌ಗೆ ಜೋಡಿಯಾಗಿ ಸಂಗೀತಾ ಶೃಂಗೇರಿ ನಟಿಸುತ್ತಿದ್ದಾರೆ. ಉಳಿದಂತೆ ಚಿತ್ರದಲ್ಲಿ “ಟಗರು’ ಕಾಕ್ರೋಚ್ ಖ್ಯಾತಿಯ ಸುಧಿ, ಯಶ್‌ಶೆಟ್ಟಿ, ಸಂಪತ್‌ಕುಮಾರ್ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ. ಚಿತ್ರಕ್ಕೆ ವೀರ್ ಸಮರ್ಥ್ ಸಂಗೀತ ನೀಡಿದ್ದು, ಎರಡು ಹಾಡುಗಳಿಗೆ ರಾಗ ಸಂಯೋಜಿಸಿದ್ದಾರೆ. ಕೆ.ಎಸ್.ಚಂದ್ರಶೇಖರ್ ಅವರು ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ. ಕೆ.ಎಂ.ಪ್ರಕಾಶ್ ಅವರ ಸಂಕಲನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.