ಯೂಟ್ಯೂಬ್‌ನಲ್ಲಿ ಸದ್ದು ಮಾಡುತ್ತಿದೆ “ದಿಲ್ ಬೇಚಾರ’ ಟ್ರೈಲರ್
ಸುಶಾಂತ್ ಸಿಂಗ್ ರಜಪೂತ್ ನಟನೆಯ ಕೊನೆಯ ಚಿತ್ರ
Team Udayavani, Jul 8, 2020, 8:19 AM IST
ನಟ ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಕೊನೆಯ ಚಿತ್ರ “ದಿಲ್ ಬೇಚಾರʼ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಯೂಟ್ಯೂಬ್‌ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದೆ, ಅಲ್ಲದೇ 4 ಕೋಟಿ 10 ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ನಟ ಸುಶಾಂತ್ಗೆ ಇದು ಕೊನೆಯ ಚಿತ್ರವಾದರೆ, ಚಿತ್ರದ ನಾಯಕಿ ಸಂಜನಾ ಸಾಂಘಿಗೆ ಇದು ಮೊದಲನೇ ಚಿತ್ರ. ಮುಖೇಶ್ ನಿರ್ದೇಶನದ ಈ ಚಿತ್ರದಲ್ಲಿ ನಾಯಕನಾಗಿ ಸುಶಾಂತ್ ಮನ್ನಿಯಾಗಿ ಹಾಗೂ ಸಂಜನಾ ಕಿಜಿ ಎಂಬ ಪಾತ್ರದಲ್ಲಿ ನಟಿಸಿದ್ದಾರೆ.
ಇದು ಸಾಮಾನ್ಯ ಜನರ ಅಸಾಮಾನ್ಯ ಪ್ರೇಮಕತೆ. ಹಲವಾರು ತಿರುವುಗಳಿಂದ ಕೂಡಿದ ಪ್ರೇಮಿಗಳಿಬ್ಬರ ಜೀವನದಲ್ಲಿ ನಡೆಯುವ ದುರಂತ ಪ್ರೇಮಕತೆಯಾಗಿದ್ದು, ಟ್ರೈಲರ್‌ನಲ್ಲಿ ಸುಶಾಂತ್ ಸಿಂಗ್ ರಜಪೂತ್ ಹಾಗೂ ಸಂಜನಾ ಸಾಂಘಿ ಇಬ್ಬರು ಮುಗ್ಧ ಹಾಗೂ ಮನೋಜ್ಞ ಅಭಿನಯದಿಂದ ಗಮನಸೆಳೆಯುತ್ತಾರೆ. ಅಲ್ಲದೇ ಎ.ಆರ್. ರೆಹಮಾನ್ ಸಂಗೀತ ಚಿತ್ರಕ್ಕಿದೆ.
ಇನ್ನು “ದಿಲ್ ಬೇಚಾರʼ ಚಿತ್ರ ಕಥೆ ಮೂಲತಃ ಜಾನ್ ಗ್ರೀನ್ ಅವರ ಹೆಚ್ಚು ಮಾರಾಟವಾದ ಕಾದಂಬರಿ “ದಿ ಫಾಲ್ಟ್ ಇನ್ ಅವರ್ ಸ್ಟಾರ್ಸ್’ ದಿಂದ ಆಧಾರಿತವಾಗಿದೆ. ಚಿತ್ರ ಇದೇ ತಿಂಗಳ ಜುಲೈ 24 ರಂದು ಡಿಸ್ನಿ- ಹಾಟ್ ಸ್ಟಾರ್‌ನಲ್ಲಿ ಬಿಡುಗಡೆಯಾಗಲಿದ್ದು, ಸುಶಾಂತ್ ಸಿಂಗ್ ಅವರಿಗೆ ಗೌರವ ಸೂಚಿಸುವ ಸಲುವಾಗಿ ಸಿನಿಮಾವನ್ನು ಉಚಿತವಾಗಿ ವೀಕ್ಷಿಸುವ ಅವಕಾಶವನ್ನು ಚಿತ್ರತಂಡ ಮಾಡಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.