ದಿನೇಶ್‌ ಕಾರ್ತಿಕ್‌ ಆಟ ಶ್ರೇಷ್ಠ: ಆರ್‌ಸಿಬಿ ನಾಯಕ ಫಾ ಡು ಪ್ಲೆಸಿಸ್‌

Team Udayavani, Apr 7, 2022, 4:45 AM IST

ದಿನೇಶ್‌ ಕಾರ್ತಿಕ್‌ ಆಟ ಶ್ರೇಷ್ಠ: ಆರ್‌ಸಿಬಿ ನಾಯಕ ಫಾ ಡು ಪ್ಲೆಸಿಸ್‌

ಮುಂಬಯಿ: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಮಂಗಳವಾರ ನಡೆದ ಪಂದ್ಯದಲ್ಲಿ ದಿನೇಶ್‌ ಕಾರ್ತಿಕ್‌ ಅದ್ಭುತ ಆಟದ ಪ್ರದರ್ಶನ ನೀಡಿದ್ದಾರೆ. ದಿನೇಶ್‌ ಅವರ ಮ್ಯಾಚ್‌ ವಿನ್ನಿಂಗ್‌ ಪ್ರಯತ್ನದಿಂದ ಅವರು ಮತ್ತೆ ಭಾರತೀಯ ತಂಡಕ್ಕೆ ಮರಳುವ ಪ್ರಯತ್ನ ಮಾಡಿದ್ದಾರೆ ಎಂದು ರಾಯಲ್‌ ಚಾಲೆಂಜರ್ ಬೆಂಗಳೂರು (ಆರ್‌ಸಿಬಿ) ತಂಡದ ನಾಯಕ ಫಾ ಡು ಪ್ಲೆಸಿಸ್‌ ಹೇಳಿದ್ದಾರೆ.

ದಿನೇಶ್‌ ಕೇವಲ 23 ಎಸೆತಗಳಿಂದ ಅಜೇಯ 44 ರನ್‌ ಸಿಡಿಸಿದ್ದರಿಂದ ಆರ್‌ಸಿಬಿ ಅಮೋಘ ಗೆಲುವು ಸಾಧಿಸುವಂತಾಯಿತು. ಒಂದು ಹಂತದಲ್ಲಿ ಬ್ಯಾಟಿಂಗ್‌ ಕುಸಿತ ಕಂಡಿದ್ದ ಆರ್‌ಸಿಬಿ ತಂಡವನ್ನು ದಿನೇಶ್‌ ತನ್ನ ಅಮೋಘ ಆಟದಿಂದ ಮೇಲಕ್ಕೆತ್ತಿದ್ದರು. ಅವರಿಗೆ ಶಾಬಾಜ್‌ ಅಹ್ಮದ್‌ ಉತ್ತಮ ಬೆಂಬಲ ನೀಡಿದ್ದರು.

ಡಿಕೆ (ದಿನೇಶ್‌ ಕಾರ್ತಿಕ್‌) ಅವರು ಅತ್ಯುತ್ತಮ ಕ್ರಿಕೆಟ್‌ ಆಡುತ್ತಿದ್ದಾರೆ. ಅವರು ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಬೇಕೆನ್ನುವುದು ನನ್ನ ಅಲೋಚನೆಯಾಗಿದೆ ಎಂದು ಪ್ಲೆಸಿಸ್‌ ತಿಳಿಸಿದರು.

ನಮ್ಮ ಸಾಮರ್ಥ್ಯವನ್ನು ಹೊರಗೆಡಹಲು ಒಳ್ಳೆಯ ನಿರ್ವಹಣೆಯ ಅಗತ್ಯವಿದೆ. ದಿನೇಶ್‌ ಕಾರ್ತಿಕ್‌ ಬಲುದೊಡ್ಡ ಒಳ್ಳೆಯ ನಿರ್ವಹಣೆಯ ವ್ಯಕ್ತಿಯಾಗಿದ್ದಾರೆ ಮತ್ತು ಅವರಿಂದ ಯಾವಾಗಲೂ ಒಳ್ಳೆಯ ನಿರ್ವಹಣೆಯನ್ನು ನಿರೀಕ್ಷಿಸಬಹುದು. ಎಷ್ಟೇ ಒತ್ತಡವಿದ್ದರೂ ಶಾಂತ ರೀತಿಯಲ್ಲಿ ಅವರು ಆಡುವ ಮೂಲಕ ಇತರರನ್ನು ಹುರಿದುಂಬಿಸುತ್ತಿದ್ದಾರೆ ಎಂದು ಪ್ಲೆಸಿಸ್‌ ಹೇಳಿದರು.

ಹಲವು ಬಾರಿ ರಾಷ್ಟ್ರೀಯ ತಂಡಕ್ಕೆ ಮರಳಿರುವ ಕಾರ್ತಿಕ್‌ 2019ರ ವಿಶ್ವಕಪ್‌ನಲ್ಲಿ ಭಾರತ ಪರ ಕೊನೆಯದಾಗಿ ಆಡಿದ್ದರು. ನಂಬಿಗಸ್ಥ ಫಿನಿಶರ್‌ ಆಗಿ ಭಾರತೀಯ ತಂಡಕ್ಕೆ ಮರಳಲು ಅವರು ಬಯಸಿದ್ದಾರೆ.

ಇದನ್ನೂ ಓದಿ:ಐಪಿಎಲ್‌ : ಏಕಪಕ್ಷೀಯವಾಗಿ ಗೆದ್ದ ಕೋಲ್ಕತ್ತ ನೈಟ್ ರೈಡರ್ಸ್

ರಾಜಸ್ಥಾನ್‌-ಬೆಂಗಳೂರು
– ಬೌಂಡರಿ ಹೊಡೆಯದೇ ಜೋಸ್‌ ಬಟ್ಲರ್‌ 70 ರನ್‌ ಗಳಿಸಿರುವುದು ಐಪಿಎಲ್‌ ಇನ್ನಿಂಗ್ಸ್‌ವೊಂದರ ಗರಿಷ್ಠ ಮೊತ್ತವಾಗಿದೆ. 2017ರಲ್ಲಿ ಪಂಜಾಬ್‌ ವಿರುದ್ಧ ನಿತೀಶ್‌ ರಾಣಾ ಅಜೇಯ 62 ರನ್‌ ಗಳಿಸಿದ್ದು ಈ ಹಿಂದಿನ ಗರಿಷ್ಠ ಮೊತ್ತವಾಗಿತ್ತು.
– ಬಟ್ಲರ್‌ ಐಪಿಎಲ್‌ನಲ್ಲಿ 100 ಸಿಕ್ಸರ್‌ ಬಾರಿಸಿದ ಇಂಗ್ಲೆಂಡಿನ ಮೊದಲ ಆಟಗಾರರಾಗಿದ್ದಾರೆ.
– ಐಪಿಎಲ್‌ನಲ್ಲಿ ಅತೀ ವೇಗವಾಗಿ 100 ಸಿಕ್ಸರ್‌ ಬಾರಿಸಿದವರಲ್ಲಿ ಬಟ್ಲರ್‌ ನಾಲ್ಕನೇ ಆಟಗಾರರಾಗಿದ್ದಾರೆ. ಬಟ್ಲರ್‌ 67 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಕ್ರಿಸ್‌ ಗೇಲ್‌, ಆ್ಯಂಡ್ರೆ ರಸೆಲ್‌ ಮತ್ತು ರಿಷಬ್‌ ಪಂತ್‌ ಇನ್ನುಳಿದ ಮೂವರು ಆಟಗಾರರಾಗಿದ್ದು ಅವರೆಲ್ಲ ಬಟ್ಲರ್‌ ಅವರಿಗಿಂತ ಕಡಿಮೆ ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು.
– ಟಿ20 ಕ್ರಿಕೆಟ್‌ನಲ್ಲಿ ಸಂಜು ಸ್ಯಾಮ್ಸನ್‌ ಅವರನ್ನು ವನಿಂದು ಹಸರಂಗ ಅವರು ನಾಲ್ಕನೇ ಬಾರಿ ಕೆಡಹಿದ್ದಾರೆ.
– ಐಪಿಎಲ್‌ ಪಂದ್ಯದ ವೇಳೆ ವಿರಾಟ್‌ ಕೊಹ್ಲಿ ಒಂದಂಕಿ ಮೊತ್ತದಲ್ಲಿ ರನೌಟ್‌ ಔಟಾಗಿರುವುದು ಇದು ಎರಡನೇ ಸಲವಾಗಿದೆ. ಈ ಮೊದಲು 2012ರಲ್ಲಿ ಮುಂಬೈ ವಿರುದ್ಧ ಅವರು ಒಂದಂಕಿ ಮೊತ್ತಕ್ಕೆ ರನೌಟ್‌ ಔಟಾಗಿದ್ದರು.
– ಬಟ್ಲರ್‌ ಕಳೆದ ನಾಲ್ಕು ಐಪಿಎಲ್‌ ಇನ್ನಿಂಗ್ಸ್‌ಗಳಿಂದ 329 ರನ್‌ ಗಳಿಸಿದ್ದಾರೆ. ಸತತ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಇದಕ್ಕಿಂತ ಹೆಚ್ಚಿನ ಮೊತ್ತವನ್ನು ವಿರಾಟ್‌ ಕೊಹ್ಲಿ (351), ಶಿಖರ್‌ ಧವನ್‌ (333) ಮಾತ್ರ ಹೊಡೆದಿದ್ದರು.
– ಐಪಿಎಲ್‌ 2022ರಲ್ಲಿ ಬಟ್ಲರ್‌ 205 ರನ್‌ ಗಳಿಸಿದ್ದಾರೆ. ಈ ಋತುವಿನ ಗರಿಷ್ಠ ರನ್‌ ಸಾಧನೆಯಲ್ಲಿ ಇಶನ್‌ ಕಿಶನ್‌ ಮೊತ್ತವನ್ನು ಹಿಂದಿಕ್ಕಿರುವ ಬಟ್ಲರ್‌ ಆರೆಂಜ್‌ ಕ್ಯಾಪ್‌ ಹೊಂದಿದ್ದಾರೆ.
– ಶಾಬಾಜ್‌ ಮತ್ತು ದಿನೇಶ್‌ ಕಾರ್ತಿಕ್‌ ಅವರ 67 ರನ್‌ ಜತೆಯಾಟ ಐಪಿಎಲ್‌ನಲ್ಲಿ ಆರ್‌ಸಿಬಿ ಆರನೇ ವಿಕೆಟಿಗೆ ಪೇರಿಸಿದ ಎರಡನೇ ಗರಿಷ್ಠ ಮೊತ್ತವಾಗಿದೆ. 2013ರಲ್ಲಿ ಗೇಲ್‌ ಮತ್ತು ಅರುಣ್‌ ಕಾರ್ತಿಕ್‌ ಅಜೇಯ 76 ರನ್‌ ಪೇರಿಸಿದ್ದು ಈ ಹಿಂದಿನ ಗರಿಷ್ಠ ಮೊತ್ತವಾಗಿತ್ತು.

ಟಾಪ್ ನ್ಯೂಸ್

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.