ಆನೆ ಮಾವುತರನ್ನು ಖಾಯಂಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ: ಮಂಕಾಳ್.ಎಸ್.ವೈದ್ಯ
ದೇಶಪಾಂಡೆಯವರ ಜೊತೆ ಸೇರಿ ಸರಕಾರಕ್ಕೆ ಮನವಿ
Team Udayavani, Jan 28, 2024, 4:04 PM IST
ದಾಂಡೇಲಿ : ಅರಣ್ಯ ಇಲಾಖೆಯ ಸುಪರ್ದಿಯಲ್ಲಿರುವ ಆನೆ ಮಾವುತರನ್ನು ಖಾಯಂಗೊಳಿಸುವ ಬಗ್ಗೆ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆಯವರ ಜೊತೆ ಸೇರಿ ಸರಕಾರಕ್ಕೆ ಮನವಿ ಮಾಡಲಾಗುವುದು ಮತ್ತು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದೆಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ್.ಎಸ್.ವೈದ್ಯ ಅವರು ಹೇಳಿದರು.
ಅವರು ಭಾನುವಾರ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಮಾತನಾಡುತ್ತಿದ್ದರು. ಅರಣ್ಯ ಇಲಾಖೆಯ ಸುಪರ್ದಿಯಲ್ಲಿರುವ ಆನೆಗಳ ಮಾವುತರು ಸಾಕಷ್ಟು ವರ್ಷಗಳ ಕಾಲ ಜೀವದ ಹಂಗು ತೊರೆದು ಸೇವೆಯನ್ನು ಸಲ್ಲಿಸುತ್ತಿದ್ದರೂ, ಆನೆ ಮಾವುತರ ನೇಮಕಾತಿಯ ಸಂದರ್ಭ ಅವರ ಸೇವೆಯನ್ನು ಪರಿಗಣಿಸದೆ ಕೇವಲ ದಾಖಲಾತಿಗಳನ್ನಷ್ಟೇ ಪರಿಗಣಿಸುತ್ತಿರುವುದರಿಂದ, ಕಳೆದ ಅನೇಕ ವರ್ಷಗಳಿಂದ ಜೀವದ ಹಂಗು ತೊರೆದು ಕೆಲಸ ನಿರ್ವಹಿಸುವ ಮಾವುತರಿಗೆ ಅನ್ಯಾಯವಾಗುತ್ತಿದೆ. ಇದರಿಂದ ಮಾವುತರ ಮತ್ತು ಮಾವುತರನ್ನು ನಂಬಿದ ಅವರ ಕುಟುಂಬಸ್ಥರಿಗೆ ಅಭದ್ರತೆ ಕಾಡತೊಡಗಿದೆ.
ಇದೇ ಸ್ಥಿತಿಯಲ್ಲಿ ಜೋಯಿಡಾ ತಾಲೂಕಿನ ಪಣಸೋಲಿ ಆನೆ ಶಿಬಿರದ ಮಾವುತರು ಉದ್ಯೋಗದ ಅಭದ್ರತೆಯಲ್ಲಿದ್ದು, ಆನೆ ಮಾವುತರನ್ನು ಖಾಯಂ ಮಾಡಲು ಕೂಡಲೇ ಸರಕಾರ ಅಗತ್ಯ ಕ್ರಮವನ್ನು ಕೈಗೊಳ್ಳುವಂತೆ ಮಾಧ್ಯಮದವರ ಮನವಿಗೆ ಉತ್ತರಿಸಿದ ಮಂಕಾಳ್.ಎಸ್.ವೈದ್ಯ ಅವರು ಈ ಬಗ್ಗೆ ಆರ್.ವಿ.ದೇಶಪಾಂಡೆಯವರ ಮಾರ್ಗದರ್ಶನದಲ್ಲಿ ಅವರ ಜೊತೆಗೂಡಿ ಸರಕಾರದ ಗಮನಹರಿಸಿ, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆಯನ್ನು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.