ಕುಷ್ಟಗಿಯ ಕ್ರೀಡಾಂಗಣ ನಿರ್ವಹಣೆ ಕುರಿತು ಡಿಸಿಯೊಂದಿಗೆ ಚರ್ಚೆ: ಶಾಸಕ ಅಮರೇಗೌಡ
Team Udayavani, Dec 19, 2021, 2:31 PM IST
ಕುಷ್ಟಗಿ: 1.70 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕುಷ್ಟಗಿ ಪಟ್ಟಣದ ನೂತನ ಒಳಾಂಗಣ ಕ್ರೀಡಾಂಗಣದ ನಿರ್ವಹಣೆಯ ಹೊಣೆಗಾರಿಕೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿದರು.
ಇಲ್ಲಿನ ತಾಲೂಕು ಕ್ರೀಡಾಂಗಣದ ಆವರಣದಲ್ಲಿ ನೂತನ ಒಳಾಂಗಣ ಕ್ರೀಡಾಂಗಣ ಲೋಕಾರ್ಪಣೆಗೊಳಿಸಿ ಮಾತನಾಡಿ, ಈಗಾಗಲೇ ಕುಷ್ಟಗಿಯ ಕ್ರೀಡಾ ಕ್ಲಬ್ ನಿರ್ವಹಿಸಲು ಮುಂದೆ ಬಂದಿದ್ದು, ಜಿಲ್ಲಾಧಿಕಾರಿಗಳು ಯಾರಿಗೆ ವಹಿಸುತ್ತಾರೆ ಎನ್ನುವುದು ಅವರ ವಿವೇಚನೆಗೆ ಬಿಡಲಾಗಿದೆ. ನಿರ್ಮಿಸಿರುವ ಸುಸಜ್ಜಿತ ಕಟ್ಟಡವನ್ನು ಒಂಪ್ಪದದ ಮೇರೆಗೆ ಸುಸ್ಥಿತಿಯಲ್ಲಿ ಕಾಪಾಡಿಕೊಳ್ಳಲು ಮುಂದೆ, ಸಣ್ಣ ಪುಟ್ಟ ತೊಂದರೆ, ಡ್ಯಾಮೇಜ್ ಆದರೆ ವಹಿಸಿಕೊಂಡವರೇ ನಿರ್ವಹಿಸಬೇಕಿದೆ. ಸರಕಾರದಿಂದ ಮಾಡಲು ಸಾದ್ಯವಿಲ್ಲ ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದರು.
ಕುಷ್ಟಗಿಯಲ್ಲಿ ಕ್ರೀಡಾಪಟುಗಳು ಒಳಾಂಗಣ ಕ್ರೀಡಾಂಗಣ ನಿರ್ಮಿಸಲು ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿ ನಿರ್ಮಿಸಿರುವ ಸುಸಜ್ಜಿತ ಒಳಾಂಗಣ ಕ್ರೀಡಾಂಗಣಗಳನ್ನು ನೋಡಿಕೊಂಡು ಬಂದು, ಮಾದರಿಯಾಗಿ ನಿರ್ಮಿಸಲು ಎಸ್ಟಿಮೇಟ್ ತಯಾರಿಸಲು ಸೂಚಿಸಿದ್ದೆ, ಅದರಂತೆ ಕೆ.ಆರ್.ಐ.ಡಿ.ಎಲ್ ದವರು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 1.70 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಒಳಾಂಗಣ ಕ್ರೀಡಾಂಗಣವನ್ನು ಕ್ರೀಡಾಪುಟುಗಳು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು. ಒಳಾಂಗಣದಲ್ಲಿ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಕೇರಂ ಆಟಕ್ಕೆ ವ್ಯವಸ್ಥಿತಗೊಳಿಸಲಾಗಿದೆ. ಬ್ಲಾಡ್ಮಿಂಟನ್ ಗೆ ಕೋರ್ಟ್‍ಗಳನ್ನು ಅತ್ಯಾಧುನಿಕವಾದ ವಿನ್ಯಾಸದಂತೆ ನೇಪಾಳ ಮೂಲದ ಪರಿಣಿತರು ಆಗಮಿಸಿ ಈ ವುಡನ್ ಮ್ಯಾಟ್ ಅಳವಡಿಸಿದ್ದಾರೆ. ಇದರಿಂದ ಆಟಗಾರರು ಆಡಿದಂತೆ ಪಾದಗಳಿಗೆ ಫುಶ್ ಕೊಡುತ್ತದೆ ಎಂದರು.
ಇದನ್ನೂ ಓದಿ:ದೇಶಕ್ಕಾಗಿ ತ್ಯಾಗ ಮಾಡಿದವರನ್ನು ಜಾತಿಗೆ ಸೀಮಿತ ಮಾಡಬೇಡಿ : ಸಿಎಂ
ಈ ವೇಳೆ ಕುರಿ ಮತ್ತು ಉಣ್ಣೆ ನಿಗಮ ಅಭಿವೃಧ್ಧಿ ಮಂಡಳಿ ಅಧ್ಯಕ್ಷ ಶರಣು ತಳ್ಳೀಕೇರಿ, ಪುರಸಭೆ ಅಧ್ಯಕ್ಷ ಗಂಗಾಧರ ಹಿರೇಮಠ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಅಮೃತ ಅಷ್ಟಗಿ, ಹಿರಿಯ ಕ್ರೀಡಾಪಟು ನಾಗರಾಜ ಮೇಲಿನಮನಿ, ಉಮೇಶ ಮಂಗಳೂರು,ಪರಶುರಾಮ ನಾಗರಾಳ, ವಜೀರ ಗೋನಾಳ. ಸುಬಾಸ್ ಕರಿಗಾರ, ಕೆಆರ್ ಡಿಐಎಲ್ ಎಇಇ ಇರ್ಫಾನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.