ಕಂದಾಯ ಇಲಾಖೆಯಲ್ಲಿ 3,900 ಕಡತ ವಿಲೇವಾರಿ- ಕೃಷ್ಣ ಬೈರೇಗೌಡ
Team Udayavani, Aug 2, 2023, 11:23 PM IST
ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಈವರೆಗೆ ಬಾಕಿ ಇದ್ದ 3,900 ಕಡತಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಎರಡು ತಿಂಗಳ ಕಡತ ವಿಲೇವಾರಿ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, ಕಂದಾಯ ಇಲಾಖೆಯಲ್ಲಿ ಕಡತಗಳ ಸಂಖ್ಯೆ ದಿನೇ ದಿನೇ ಏರುತ್ತಲೇ ಇರುತ್ತದೆ. ಇದರಿಂದ ಇಲಾಖೆ ಸಿಬಂದಿಯ ಮೇಲಿನ ಕೆಲಸದ ಒತ್ತಡವೂ ಹೆಚ್ಚು. ಕಂದಾಯ ಇಲಾಖೆಯಲ್ಲಿ ಕಡತಗಳು ಮುಂದೆ ಹೋಗುವುದೇ ಇಲ್ಲ ಎಂಬ ಸಾರ್ವಜನಿಕ ದೂರೂ ಇದೆ. ಹಿಂದಿನ ಈ ಪರಿಪಾಠಗಳಿಗೆ ಪೂರ್ಣ ವಿರಾಮ ಇಡುವ ಸಂಕಲ್ಪದೊಂದಿಗೆ ಪ್ರಸ್ತುತ ಕಂದಾಯ ಇಲಾಖೆ ಕೆಲಸ ನಿರ್ವಹಿಸುತ್ತಿದೆ ಎಂದಿದ್ದಾರೆ.
ಕಂದಾಯ ಇಲಾಖೆಯಲ್ಲಿ ಸಕಾರಾತ್ಮಕ ಬದಲಾವಣೆ ತರಬೇಕೆಂಬ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಸಿಎಂ ಸಿದ್ದರಾಮಯ್ಯನವರು ನನ್ನ ಮೇಲೆ ಭರವಸೆ ಇಟ್ಟು ಕಂದಾಯ ಇಲಾಖೆ ಜವಾಬ್ದಾರಿ ನೀಡಿದರು. ಅಧಿಕಾರ ವಹಿಸಿದ ಕಳೆದ ಎರಡು ತಿಂಗಳಿನಿಂದ ಇಡೀ ಇಲಾಖೆಗೆ ಚುರುಕು ಮುಟ್ಟಿಸಿ ಎಲ್ಲ ಕಡತಗಳನ್ನೂ ತ್ವರಿತವಾಗಿ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಈವರೆಗೆ ಇಲಾಖೆಯಲ್ಲಿ ಬಾಕಿ ಉಳಿದಿದ್ದ ಕಡತಗಳನ್ನು ವಿಲೇವಾರಿ ಮಾಡಲು ಆದ್ಯತೆ ನೀಡಲಾಗಿದೆ. ಶೇ.183ರಷ್ಟು ಕಾರ್ಯಕ್ಷಮತೆಯಿಂದ ಇಲಾಖೆ ಕೆಲಸ ನಿರ್ವಹಿಸುತ್ತಿದೆ. ಹೊಸದಾಗಿ 2,123 ಕಡತಗಳು ಬಂದಿದ್ದು ಈ ಕಡತಗಳನ್ನೂ ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಡತ ವಿಲೇವಾರಿ ವಿಚಾರದಲ್ಲಿ ಎ ವರ್ಗದ ಜತೆಗೆ ಎಲಾ ಇಲಾಖೆಗಳ ಪೈಕಿ ಎರಡನೇ ಸ್ಥಾನದಲ್ಲಿದ್ದೇವೆ ಮತ್ತು ದೊಡ್ಡ ಇಲಾಖೆಗಳ ಪೈಕಿ ಮೊದಲ ಸ್ಥಾನದಲ್ಲಿದ್ದೇವೆ.
ಉತ್ತಮ ಆಡಳಿತ: ನಮ್ಮ ಗುರಿ
ಅಲ್ಲದೆ, ಹಲವು ವರ್ಷಗಳಿಂದ ಬಾಕಿ ಇರುವ ಕಡತಗಳನ್ನು ತ್ವರಿತವಾಗಿ ತೆರವುಗೊಳಿಸುತ್ತೇವೆ. ಕಾಗದರಹಿತ ಡಿಜಿಟಲ್ ಸೇವೆ ಸೇರಿದಂತೆ ಏನೆಲ್ಲ ಸಾಧ್ಯತೆಗಳಿವೆಯೋ ಆ ಎಲ್ಲವನ್ನೂ ಬಳಸಿಕೊಂಡು ಅತ್ಯಂತ ವೇಗವಾಗಿ ಇಲಾಖೆಯ ಕಡತಗಳನ್ನು ವಿಲೇವಾರಿ ಮಾಡುವಲ್ಲಿ ನಾವು ಬದ್ಧರಾಗಿದ್ದೇವೆ. ಉತ್ತಮ ಆಡಳಿತವನ್ನು ತಲುಪಿಸುವುದೊಂದೆ ನಮ್ಮ ಗುರಿ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.