Pakistan: ಪಾಕ್ ಸಂಸತ್ ವಿಸರ್ಜನೆ: 90 ದಿನಗಳಲ್ಲಿ ಚುನಾವಣೆ
Team Udayavani, Aug 10, 2023, 10:20 PM IST
ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ಶಿಫಾರಸಿನ ಮೇರೆಗೆ ರಾಷ್ಟ್ರೀಯ ಸಂಸತ್ ಅನ್ನು ಪಾಕ್ ಅಧ್ಯಕ್ಷ ಆರಿಫ್ ಅಲ್ವಿ ಗುರುವಾರ ವಿಸರ್ಜಿಸಿದ್ದಾರೆ. ಮುಂದಿನ 90 ದಿನಗಳಲ್ಲಿ ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಅಲ್ಲಿಯವರೆಗೂ ಮಧ್ಯಂತರ ಸರ್ಕಾರವು ಜವಾಬ್ದಾರಿ ವಹಿಸಲಿದೆ.
ಇನ್ನೊಂದೆಡೆ, ಭ್ರಷ್ಟಾಚಾರ ಪ್ರಕರಣವೊಂದರದಲ್ಲಿ ಪಾಕ್ ಮಾಜಿ ಪ್ರಧಾನಿ, ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್(ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಜೈಲಿನಲ್ಲಿದ್ದಾರೆ. 2022ರ ಏಪ್ರಿಲ್‌ನಲ್ಲಿ ಅವರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಲಾಗಿತ್ತು. ಆಡಳಿತರೂಢ ಪಾಕಿಸ್ತಾನ್ ಮುಸ್ಲಿಂ ಲೀಗ್(ಪಿಎಂಎಲ್)ಗೆ ಪಿಟಿಐ ಪಕ್ಷ ಪ್ರಮುಖ ಎದುರಾಳಿಯಾಗಿದೆ. ಜೈಲಿನಲ್ಲಿರುವ ಇಮ್ರಾನ್ ಖಾನ್‌ಗೆ ಜಾಮೀನು ಸಿಗಲಿದೆಯೇ? ಸರ್ವೋಚ್ಚ ನ್ಯಾಯಾಲಯ ಅವರಿಗೆ ನಿಷೇಧದಿಂದ ವಿನಾಯ್ತಿ ನೀಡಿ, ಸ್ಪರ್ಧಿಸಲು ಅವಕಾಶ ನೀಡಲಿದೆಯಾ ಎಂಬ ಪ್ರಶ್ನೆಗಳು ಮೂಡಿವೆ. ಅಲ್ಲದೇ ಸಾರ್ವತ್ರಿಕ ಚುನಾವಣೆಯಲ್ಲಿ, ಇಮ್ರಾನ್ ಖಾನ್ ನಾಯಕತ್ವದಲ್ಲಿ ಪಿಟಿಐ ಪಕ್ಷ ಮುನ್ನಡೆಯಲಿದೆಯೇ? ಅಥವಾ ತಾತ್ಕಾಲಿಕವಾಗಿ ಮತ್ತೂಬ್ಬ ನಾಯಕನಿಗೆ ಇಮ್ರಾನ್ ಖಾನ್ ಜವಾಬ್ದಾರಿ ವಹಿಸಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ.
90 ದಿನಗಳಲ್ಲಿ ಚುನಾವಣೆ: ಇನ್ನೂ ಮೂರು ದಿನಗಳಲ್ಲಿ ನೂತನ ಮಧ್ಯಂತರ ಸರ್ಕಾರ ನೇಮಿಸುವಂತೆ ಹಾಗೂ ಮುಂದಿನ 90 ದಿನಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಸುವಂತೆ ಪಾಕ್ ಸರ್ಕಾರಕ್ಕೆ ಪಾಕ್ ಅಧ್ಯಕ್ಷ ಆರಿಫ್ ಅಲ್ವಿ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.