“ಪ್ರಕೃತಿಯನ್ನು ಗೌರವಿಸಿ ಉಳಿಸಿ ಬೆಳೆಸೋಣ’
ಪುತ್ತೂರು ವಲಯ ಅರಣ್ಯ ಇಲಾಖೆಯಿಂದ ಸಸಿ ವಿತರಣೆ
Team Udayavani, May 31, 2020, 5:28 AM IST
ಪುತ್ತೂರು: ಪ್ರಕೃತಿಯನ್ನು ಗೌರವಿಸುವ ಜತೆಗೆ ಮುಂದಿನ ಪೀಳಿಗೆಗೆ ಬೆಳೆಸಿ ಕೊಡಲು ಅರಣ್ಯ ಇಲಾಖೆ ಪ್ರೋತ್ಸಾಹ ನೀಡುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಮತ್ತು ಅರಣ್ಯ ಪ್ರದೇಶ ವಿಸ್ತರಣೆಯಾಗಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.
ಪುತ್ತೂರು ವಲಯ ಅರಣ್ಯ ಇಲಾಖೆಯಲ್ಲಿ ಶನಿವಾರ ಸಾರ್ವಜನಿಕ ಸಸಿ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಾಣಿಜ್ಯ ಬೆಳೆಗಳಿಗೆ ಆದ್ಯತೆ ಕೊಟ್ಟಿದ್ದರಿಂದ ಕಾಡನ್ನು ಕಡಿದು ರಬ್ಬರ್, ಅಡಿಕೆ, ಗೇರು ತೋಟ ಮಾಡಲಾಗಿದೆ. ನೈಸರ್ಗಿಕವಾಗಿ ಬೆಳೆಯುವ ಮರಗಳನ್ನು ಕಡಿದು ಕಾಡನ್ನು ನಾಶ ಮಾಡಿದಲ್ಲಿ ಪರಿಸರದ ಸಮತೋಲನ ತಪ್ಪುತ್ತದೆ. ಆದ್ದರಿಂದ ಗಿಡಗಳನ್ನು ನೆಟ್ಟು ಪರಿಸರವನ್ನು ರಕ್ಷಿಸಲು ನಾವೆಲ್ಲರೂ ಮುಂದಾಗ ಬೇಕು ಎಂದು ಶಾಸಕರು ಹೇಳಿದರು.
45 ಸಾವಿರ ಗಿಡಗಳು
ವಲಯ ಅರಣ್ಯಾಧಿಕಾರಿ ಬಿ.ಜಿ. ಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿ, ಪುತ್ತೂರು ವಲಯ ಅರಣ್ಯಾಧಿಕಾರಿಗಳ ಕಚೇರಿಯಿಂದ 45 ಸಾವಿರ ಗಿಡಗಳನ್ನು ಸಾರ್ವಜನಿಕರಿಗೆ ವಿತರಿಸಲಾಗುತ್ತದೆ. ಪುತ್ತೂರು ಅರಣ್ಯ ಇಲಾಖೆ ವ್ಯಾಪ್ತಿಯ ಜಾಲೂÕರು ಪಂಜಿಕಲ್ಲು ಮತ್ತು ಕನಕಮಜಲು ಸಸ್ಯ ಕ್ಷೇತ್ರದಲ್ಲಿ ಸಸಿಗಳು ಸಿದ್ಧಗೊಂಡಿವೆ. ಸಾಗುವಾನಿ, ನೆಲ್ಲಿ, ಬಿಲ್ವಪತ್ರೆ, ಮಹಾಗನಿ, ಜಂಬು ನೇರಳೆ, ರಂಬುಟಾನ್, ಕಹಿಬೇವು, ಬಾಗೆ, ಬಾದಾಮಿ, ಬೇಂಗ, ಸಂಪಿಗೆ, ನೊರೆಕಾಯಿ, ನೇರಳೆ, ಪುನರ್ಪುಳಿ, ಬಸವನ ಪಾದ, ಶಿವಾನಿ, ಶ್ರೀಗಂಧ, ರಕ್ತಚಂದನ, ಹಲಸು ಗಿಡಗಳನ್ನು ಸಾರ್ವಜನಿಕರಿಗೆ ವಿತರಿಸಲಾಗುವುದು ಎಂದು ಹೇಳಿದರು.
ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಹರೀಶ್, ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ನಿರ್ದೇಶಕ ತೀರ್ಥರಾಮ ದುಗ್ಗಳ, ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಜಗದೀಶ್ ಪುಣಚ, ಮೂಡಂಬೈಲು ಜಯರಾಮ ರೈ, ಗುರುವಪ್ಪ ಪೂಜಾರಿ ಮತ್ತು ಟಿಂಬರ್ ಮರ್ಚಂಟ್‌ಗಳಾದ ಇಬ್ರಾಹಿಂ, ಗೋಪಾಲ್, ಸಂಶುದ್ದೀನ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.
ಉಪವಲಯ ಅರಣ್ಯಾಧಿಕಾರಿಗಳಾದ ಶಿವಾನಂದ ಆಚಾರ್ಯ, ಲೋಕೇಶ್, ಅರಣ್ಯ ರಕ್ಷಕ ರಾಜು ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.