ಶೆರೇವಾಡದಲ್ಲಿ ಜಿಲ್ಲೆಯ ಮೊದಲ ಅಮೃತ ಸರೋವರ

ಟಾಟಾ ಸಿಎಸ್‌ಆರ್‌ ಕಾರ್ಯಚಟುವಟಿಕೆಗಳಡಿ ನಿರ್ಮಾಣ

Team Udayavani, May 9, 2022, 12:19 PM IST

5

ಹುಬ್ಬಳ್ಳಿ: ಸ್ವಾತಂತ್ರ್ಯ ಅಮೃತ ಮಹೋತ್ಸವ ಸವಿನೆನಪಿಗಾಗಿ ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ಕನಿಷ್ಟ 75 ಕೆರೆ ನಿರ್ಮಿಸಲು ಪ್ರಧಾನಿ ಕರೆ ಕೊಟ್ಟಿದ್ದು, ತಾಲೂಕಿನ ಶೆರೇವಾಡ ಗ್ರಾಮದ 3 ಎಕರೆ ಪ್ರದೇಶದಲ್ಲಿ ಜಿಲ್ಲೆಯ ಮೊದಲ ಅಮೃತ ಸರೋವರ ಕೆರೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಶೆರೇವಾಡ ಗ್ರಾಮದಲ್ಲಿ ಜಿಲ್ಲೆಯಲ್ಲಿ ಅಭಿವೃದ್ಧಿ ಪಡಿಸುತ್ತಿರುವ 75 ಅಮೃತ ಸರೋವರಗಳ ಪೈಕಿ ಮೊದಲನೆಯ ಅಮೃತ ಸರೋವರವನ್ನು ಟಾಟಾ ಕಂಪನಿಯವರ ಸಿಎಸ್‌ಆರ್‌ ಕಾರ್ಯ ಚಟುವಟಿಕೆಗಳಡಿ ನೂತನ ಕೆರೆ ನಿರ್ಮಾಣಕ್ಕೆ ರವಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ಮುಂದಿನ 7-8 ತಿಂಗಳ ಅವಧಿಯಲ್ಲಿ 75 ಕೆರೆಗಳನ್ನು ಅಮೃತ ಸರೋವರ ಹೆಸರಿನಲ್ಲಿ ನಿರ್ಮಿಸುವ ಗುರಿ ಹೊಂದಲಾಗಿದೆ. ಜಗತ್ತಿನಲ್ಲಿ 60 ಕೋಟಿ ಜನರು ಶುದ್ಧ ಕುಡಿಯುವ ನೀರು ಸಿಗದೇ ಸಾಯುತ್ತಿದ್ದಾರೆ. ಇಸ್ರೇಲ್‌ ದೇಶದಲ್ಲಿ ನೀರಿನ ಪರಿಸ್ಥಿತಿ ಬಹಳ ಕಷ್ಟವಿದ್ದು, ಪ್ರತಿ ಹನಿ ನೀರಿಗೂ ಮಹತ್ವ ಕೊಡುತ್ತಾರೆ.

ಭಾರತದಲ್ಲೂ ನೀರಿನ ಸದ್ಬಳಕೆಗೆ ಆದ್ಯತೆ ನೀಡಬೇಕಾಗಿದೆ. ಅನೇಕ ಕಡೆಗಳಲ್ಲಿ ಬೋರ್‌ವೆಲ್‌ ಮೂಲಕ ನೀರು ಪೂರೈಸಲಾಗುತ್ತಿದೆ. ಬಹಳಷ್ಟು ಕಡೆ ಅದು ಕುಡಿಯಲು ಯೋಗ್ಯವಿರುವುದಿಲ್ಲ. ಕೊಳವೆಬಾವಿಗಳು ಬೇಸಿಗೆ ಅವಧಿಯಲ್ಲಿ ಬತ್ತಿ ಹೋಗುತ್ತವೆ. ಆದರೆ ಕೆರೆಯ ನೀರನ್ನು ಶುದ್ಧೀಕರಿಸಿ ಕುಡಿಯಬಹುದು. ನೀರನ್ನು ಮಿತವಾಗಿ ಅಗತ್ಯಕ್ಕೆ ಅನುಗುಣವಾಗಿ ಬಳಕೆ ಮಾಡಿಕೊಳ್ಳಬೇಕು ಎಂದರು.

ಓಡುವ ನೀರು ನಡೆಸಬೇಕು. ನಡೆಯುವ ನೀರನ್ನು ನಿಲ್ಲಿಸಬೇಕು. ನಿಲ್ಲುವ ನೀರನ್ನು ಇಂಗಿಸಬೇಕು. ಆಗ ಬೋರ್‌ವೆಲ್‌ಗ‌ಳು ಪುನರ್‌ ಭರ್ತಿ (ರಿಚಾರ್ಜ್‌) ಆಗುತ್ತವೆ. ಮೇಲ್ಮೈ (ಸರ್ಫೇಸ್) ನೀರು ಸಾಮಾನ್ಯವಾಗಿ ಕುಡಿಯಲು ತಕ್ಕವಾಗಿರುತ್ತದೆ. ಅದನ್ನು ಶುದ್ಧೀಕರಿಸಿದರೆ ಇನ್ನಷ್ಟು ಯೋಗ್ಯವಾಗಿರುತ್ತದೆ. ಬೆಂಗಳೂರಿನಲ್ಲಿ ಬಹಳಷ್ಟು ರಾಜಕಾಲುವೆ, ಕೆರೆಗಳನ್ನು ಅತಿಕ್ರಮಣ ಮಾಡಿಕೊಂಡು ಅಲ್ಲಿ ಮನೆಗಳನ್ನು ನಿರ್ಮಿಸಲಾಗಿದೆ. ಇದರಿಂದ ಮುಂದಿನ 10 ವರ್ಷಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತುಂಬಾ ಹೆಚ್ಚಾಗಲಿದೆ ಎಂದು ಹೇಳಿದರು.

ನಿಗಮ-ಮಂಡಳಿ ಅಧ್ಯಕ್ಷರಾದ ಸಿದ್ದನಗೌಡ ಚಿಕ್ಕನಗೌಡ್ರ, ಈರಣ್ಣ ಜಡಿ, ಜಿಪಂ ಸಿಇಒ ಡಾ| ಸುರೇಶ ಇಟ್ನಾಳ, ತಾಪಂ ಇಒ ಗಂಗಾಧರ ಕಂದಕೂರ, ಎಂ.ಆರ್‌. ಪಾಟೀಲ, ಗ್ರಾಪಂ ಉಪಾಧ್ಯಕ್ಷೆ ಮಹಾದೇವಿ ಅಮಟೂರ, ಟಾಟಾ ಕಂಪನಿಯ ಗೋವಿಂದರಾಜ ಕುಲಕರ್ಣಿ, ಪ್ರಶಾಂತ ದೀಕ್ಷಿತ, ಮುಖಂಡರಾದ ಬಸವರಾಜ ಕುಂದಗೋಳಮಠ, ಸಿ.ಎನ್‌. ಪಾಟೀಲ ಸೇರಿದಂತೆ ಅಧಿಕಾರಿಗಳು, ಗ್ರಾಪಂ ಸದಸ್ಯರು, ಗ್ರಾಮಸ್ಥರು ಮೊದಲಾದವರಿದ್ದರು. ಗ್ರಾಪಂ ಅಧ್ಯಕ್ಷ ಶಿವಾನಂದ ಉಳ್ಳಾಗಡ್ಡಿ ವಂದಿಸಿದರು.

ಪ್ರಧಾನಿ ಮೋದಿ ಅವರು ದೂರದೃಷ್ಟಿಯಿಂದ ಅಮೃತ ಸರೋವರ ಯೋಜನೆಯಡಿ ಕೆರೆಗಳ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇದರಿಂದ ದೇಶದಲ್ಲಿ ನೀರಿನ ಬವಣೆ ತಪ್ಪಲಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಕೆಲ ಕಂಪನಿಗಳು, ಕೈಗಾರಿಕೆಗಳಿಗೆ ಕೆರೆ ಅಭಿವೃದ್ಧಿ ಪಡಿಸಲು ಸಿಎಸ್‌ಆರ್‌ ನಿಧಿಯಡಿ ಧನ ಸಹಾಯ ನೀಡುವಂತೆ ಕೋರಲಾಗುವುದು. ಶೆರೇವಾಡದಲ್ಲಿ ನಿರ್ಮಾಣವಾಗುವ ಕೆರೆಯು ಇತರೆ ಕೆರೆಗಳಿಗೆ ಮಾದರಿಯಾಗಬೇಕು. –ಪ್ರಹ್ಲಾದ ಜೋಶಿ, ಕೇಂದ್ರ ಸಚಿವ

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.