ಡಿಕೆಶಿ ಪ್ರಕರಣ: ರಾಜ್ಯ ಸರಕಾರದ ಆದೇಶ ಪ್ರಶ್ನಿಸಲು ಮುಕ್ತ- ಕಪಿಲ್‌ ಸಿಬಲ್‌

  ದಿಲ್ಲಿ ಆ್ಯಕ್ಟ್ ಪ್ರಕಾರ ಸಿಬಿಐ ತನಿಖೆ ಮುಂದುವರಿಯುವಂತಿಲ್ಲ

Team Udayavani, Nov 30, 2023, 12:08 AM IST

kapil sibal

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧ ಆದಾಯ ಮೀರಿದ ಆಸ್ತಿ ಗಳಿಕೆಗೆ ಸಂಬಂಧಿಸಿದ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ಸರಕಾರ ನೀಡಿದ್ದ ಅನುಮತಿ ಹಿಂಪಡೆಯಲಾಗಿದೆ. ಈ ಸಂಬಂಧ ದಿಲ್ಲಿ ಪೊಲೀಸ್‌ ಎಸ್ಟಾಬ್ಲಿಷ್ಮೆಂಟ್‌ ಕಾಯ್ದೆಯ ಸೆಕ್ಷನ್‌ 6 ಸ್ಪಷ್ಟಪಡಿಸಿದ್ದು, ಒಮ್ಮೆ ಅನುಮೋದನೆ ಹಿಂಪಡೆದರೆ ತನಿಖೆ ಮುಂದುವರಿಸಲು ಅವರಿಗೆ ಅವಕಾಶವಿಲ್ಲ ಎಂದು ಸುಪ್ರೀಂ ಕೋರ್ಟ್‌ ವಕೀಲ ಕಪಿಲ್‌ ಸಿಬಲ್‌ ಹೇಳಿದ್ದಾರೆ.

ಹೈಕೋರ್ಟ್‌ನಲ್ಲಿ ಡಿ.ಕೆ. ಶಿವಕುಮಾರ್‌ ಅವರ ವಿಚಾರವಾಗಿ ರಾಜ್ಯ ಸರಕಾರದ ಪರ ವಾದ ಮಂಡಿಸಿದ ಅವರು, ಅರ್ಜಿದಾರರು ಅರ್ಜಿ ವಾಪಸ್‌ ಪಡೆದುಕೊಳ್ಳಲು ಅಥವಾ ಪ್ರಕರಣದಲ್ಲಿ ಮುಂದುವರಿಯಲು ಸ್ವತಂತ್ರರು. ಅದು ಅವರಿಗೆ ಬಿಟ್ಟ ವಿಚಾರ. ಜತೆಗೆ ಯಾರಾದರೂ ಸರಕಾರದ ಆದೇಶ ಪ್ರಶ್ನಿಸಲು ಮುಕ್ತರಾಗಿದ್ದಾರೆ. ಅಂತಹ ಪ್ರಸಂಗ ಬಂದಾಗ ಸರಕಾರ ಅದನ್ನು ಕಾನೂನು ರೀತಿ ಎದುರಿಸಲಿದೆ ಎಂದು ಕಪಿಲ್‌ ಸಿಬಲ್‌ ಹೇಳಿದರು.

ಸಿಬಿಐ ವಾದ

ಅರ್ಜಿ ಮತ್ತು ಮೇಲ್ಮನವಿ ಅರ್ಜಿ ಹಿಂಪಡೆಯುವುದಾಗಿ ಮೇಲ್ಮನವಿದಾರರ ಪರ ವಕೀಲರು ಹೇಳಿ¨ªಾರೆ. ಅರ್ಜಿ ಹಿಂಪಡೆಯುವುದಕ್ಕೆ ನಮ್ಮ ಆಕ್ಷೇಪವಿದೆ. ಆದರೆ, ಮೇಲ್ಮನವಿ ಹಿಂಪಡೆಯುವುದಕ್ಕೆ ಆಕ್ಷೇಪವಿಲ್ಲ. ಎಫ್ಐಆರ್‌ ಅನ್ನು ಸರಕಾರ ಹಿಂಪಡೆಯುವಂತಿಲ್ಲ. ನ್ಯಾಯಾಲಯ ಮಾತ್ರ ಸಿಆರ್‌ಪಿಸಿ ಸೆಕ್ಷನ್‌ 482 ಅಡಿ ಅದನ್ನು ರದ್ದು ಅಥವಾ ವಜಾ ಮಾಡಬಹುದು. ಅಲ್ಲದೆ, 2019ರ ಸೆಪ್ಟೆಂಬರ್‌ 25ರಂದು ಸಿಬಿಐಗೆ ನೀಡಿರುವ ಅನುಮೋದನೆಯ ಭಾಗವಾಗಿ ಎಫ್ಐಆರ್‌ ದಾಖಲಿಸಿ, ಪ್ರಕ್ರಿಯೆ ನಡೆಸಲಾಗುತ್ತಿದೆ. ಭಾಗಶಃ ತನಿಖೆ ನಡೆದಿದೆ. 1994ರಲ್ಲಿ ಸುಪ್ರೀಂ ಕೋರ್ಟ್‌ನಂತೆ ರಾಜ್ಯ ಸರಕಾರ ಅನುಮತಿ ವಾಪಸ್‌ ಪಡೆಯಬಾರದು. ಅದನ್ನು ಒಪ್ಪಲಾಗದು ಮತ್ತು ಅದು ಊರ್ಜಿತವಾಗುವುದಿಲ್ಲ. ಆದ್ದರಿಂದ ನ್ಯಾಯಾಲಯಕ್ಕೆ ಮೇಲ್ಮನವಿ ವಾಪಸ್‌ ಪಡೆದುಕೊಳ್ಳಲು ಅವಕಾಶ ನೀಡಬಾರದು. ಅಷ್ಟಕ್ಕೂ ಈ ಹಂತದಲ್ಲಿ ಕಾನೂನಿನಲ್ಲಿರುವ ಅವಕಾಶಗಳನ್ನು ಆಧರಿಸಿ ಸಿಬಿಐ ಮುಂದುವರಿಯಲಿ ಎಂದು ಸಿಬಿಐ ಪರ ವಿಶೇಷ ಸರಕಾರಿ ಅಭಿಯೋಜಕ ಪಿ. ಪ್ರಸನ್ನ ಕುಮಾರ್‌ ವಾದಿಸಿದರು.

ಯತ್ನಾಳ್‌ ಪರ ವಕೀಲರ ವಾದ

ಸರಕಾರ ತನ್ನ ನಿರ್ಧಾರವನ್ನು ಹಿಂಪಡೆದು ಅಗತ್ಯವಿದ್ದಲ್ಲಿ ಪ್ರಶ್ನಿಸಬಹುದು ಎಂದು ಹೇಳಿದರೆ, ಸಮಾಜಕ್ಕೆ ಯಾವ ಸಂದೇಶ ನೀಡಿದಂತೆ. ಇಡೀ ಸರಕಾರದ ಸಂಪುಟ ಮೇಲ್ಮನವಿದಾರರ (ಡಿ.ಕೆ. ಶಿವಕುಮಾರ್‌) ಬೆಂಬಲಕ್ಕೆ ನಿಂತಿದೆ. ಅಷ್ಟಕ್ಕೂ ಮೇಲ್ಮನವಿದಾರ ಸಾಮಾನ್ಯ ವ್ಯಕ್ತಿಯಲ್ಲ. ಖಾಸಗಿ ವ್ಯಕ್ತಿ ಈ ರೀತಿಯಲ್ಲಿ ಮಾಡಿದರೆ ಒಪ್ಪಬಹುದು, ಸರಕಾರವೇ ಈ ರೀತಿಯ ನಿರ್ಧಾರಕ್ಕೆ ಮುಂದಾದರೆ ಹೇಗೆ? ರಾಜ್ಯ ಸರಕಾರದ ಈ ನಿರ್ಧಾರ ಒಪ್ಪುವಂತದ್ದಲ್ಲ. ಸಂಪುಟ ಅವಸರದಲ್ಲಿ ತೀರ್ಮಾನ ಕೈಗೊಂಡಿದೆ. ಇದಕ್ಕೆ ನಮ್ಮ ಆಕ್ಷೇಪವಿದೆ. ಆದರೆ, ಮೇಲ್ಮನವಿಯಲ್ಲಿ ಪ್ರತಿವಾದಿಯಾಗಿ ಸೇರಲು ಮಧ್ಯಾಂತರ ಅರ್ಜಿದಾರರು ಬಯಸುವುದಿಲ್ಲ ಎಂದು ಯತ್ನಾಳ್‌ ಪರ ವಕೀಲ ವೆಂಕಟೇಶ್‌ ದಳವಾಯಿ ನ್ಯಾಯಪೀಠಕ್ಕೆ ತಿಳಿಸಿದರು.

ಡಿಕೆಶಿ ಪರ ವಕೀಲರ ವಾದ

ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ರಾಜ್ಯ ಸರಕಾರವು ನ. 28ರಂದು ವಾಪಸ್‌ ಪಡೆದು ಆದೇಶ ಹೊರಡಿಸಿದೆ. ಯಾವ ಅನುಮತಿಯನ್ನು ಪ್ರಶ್ನಿಸಿ ಮೊದಲು ಏಕಸದಸ್ಯ ನ್ಯಾಯಪೀಠದಲ್ಲಿ ಅರ್ಜಿ ಸಲ್ಲಿಸಲಾಗಿತ್ತೋ, ಆ ಅರ್ಜಿಯ ಮೇಲೆ ಏಕಸದಸ್ಯ ನ್ಯಾಯಪೀಠದ ಆದೇಶದಿಂದ ಉದ್ಭವಿಸಿದ ಸನ್ನಿವೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತೋ ಈಗ ಇವೆರಡೂ ವಿಚಾರಣ ಮಾನ್ಯತೆ ಕಳೆದುಕೊಂಡಂತಾಗಿದೆ. ಹೀಗಿದ್ದಾಗ ಪ್ರಕರಣ ಮುಂದುವರಿಸುವುದು ನಿರರ್ಥಕ. ಆದ್ದರಿಂದ ಅರ್ಜಿ ಹಾಗೂ ಮೇಲ್ಮನವಿ ವಾಪಸ್‌ ಪಡೆದುಕೊಳ್ಳಲು ಅನುಮತಿಸಬೇಕು ಎಂದು ಅಭಿಷೇಕ್‌ ಮನು ಸಿಂಘ್ವಿ ಹಾಗೂ ಉದಯ ಹೊಳ್ಳ ಮನವಿ ಮಾಡಿದರು.

ನ್ಯಾಯಪೀಠ ಹೇಳಿದ್ದು

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಸರಕಾರದ ನಡೆಯನ್ನು ಪ್ರತಿವಾದಿಗಳು ಕಟುವಾಗಿ ಖಂಡಿಸಿದ್ದಾರೆ ಹಾಗೂ ಸರಕಾರದ ಈ ಕ್ರಮ ಒಪ್ಪುವಂತಹದ್ದಲ್ಲ ಎಂದು ಪ್ರತಿಪಾದಿಸಿದ್ದಾರೆ. ಆದರೆ, ಸರಕಾರದ ನಿರ್ಧಾರವನ್ನು ಯಾರೂ ಪ್ರಶ್ನಿಸದಿರುವಾಗ ಪ್ರತಿವಾದಿಗಳ ವಾದವನ್ನು ಅಂಗೀಕರಿಸಲು ನಮಗೆ ಮಾರ್ಗವಿಲ್ಲ ಎಂದು ಅಭಿಪ್ರಾಯಪಟ್ಟು, ಅರ್ಜಿ ಹಾಗೂ ಮೇಲ್ಮನವಿ ವಾಪಸ್‌ ಪಡೆದುಕೊಳ್ಳುವ ಡಿ.ಕೆ. ಶಿವಕುಮಾರ್‌ ಪರ ವಕೀಲರ ಮನವಿಯನ್ನು ಪುರಸ್ಕರಿಸಿ ಪ್ರಕರಣವನ್ನು ಇತ್ಯರ್ಥಪಡಿಸಿತು. ಇದೇ ವೇಳೆ ಸಿಬಿಐ ದಾಖಲಿಸಿದ ಎಫ್ಐಆರ್‌ ಬಗ್ಗೆ, ಈವರೆಗೆ ನಡೆದ ತನಿಖೆ ಬಗ್ಗೆ ಏನ್ನನ್ನೂ ಹೇಳುವುದಿಲ್ಲ; ಒಂದಕ್ಷರದ ವಿಶ್ಲೇಷಣೆಯನ್ನೂ ಮಾಡುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು.

 ನಾನೇನೂ ತಪ್ಪು ಮಾಡಿಲ್ಲ, ದೇವರಿದ್ದಾನೆ: ಡಿಕೆಶಿ

ಬೆಂಗಳೂರು: ನಾನೇನೂ ತಪ್ಪು ಮಾಡಿಲ್ಲ. ಎಲ್ಲ ಬೆಳವಣಿಗೆಗಳನ್ನು ಜನರು ನೋಡಿ¨ªಾರೆ. ನಾನು ಕೇವಲ ಪಕ್ಷದ ಕೆಲಸ ಮಾತ್ರ ಮಾಡಿದ್ದೇನೆ. ಪಕ್ಷದ ಕೆಲಸ ಮಾಡಿದ ಕಾರಣ ಸಾಕಷ್ಟು ತೊಂದರೆ ಅನುಭವಿಸಿದ್ದೇನೆ. ಮುಂದಕ್ಕೂ ತೊಂದರೆ ಕೊಟ್ಟರೆ ಕಾಪಾಡಲು ಆ ಭಗವಂತನಿ¨ªಾನೆ. ನಾಡಿನ ಜನರಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರು ಟೆಕ್‌ಸಮ್ಮಿಟ್‌ನಲ್ಲಿ ಭಾಗವಹಿಸಿದ್ದ ಅವರು ಹೈಕೋರ್ಟ್‌ನಲ್ಲಿ ಪ್ರಕರಣದ ಬೆಳವಣಿಗೆಗಳ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನನಗೆ ತೊಂದರೆ ಕೊಟ್ಟ ಕಾರಣಕ್ಕೆ ಈ ರಾಜ್ಯದಲ್ಲಿ ಏನಾಯಿತು ಎಂದು ತಿಳಿದಿದೆ. ನನ್ನ ಪರವಾಗಿ ನಿಂತವರು ಹಾಗೂ ಪ್ರಾರ್ಥನೆ ಮಾಡಿದ ಜನರಿಗೆ ಕೋಟಿ ನಮಸ್ಕಾರ ಎಂದರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.