ದ.ಕ. ಜಿಲ್ಲೆ : ಹೊಸ ಪ್ರಕರಣ ಇಲ್ಲ
Team Udayavani, May 17, 2020, 5:35 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಯಾವುದೇ ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ.ಸ್ವೀಕರಿಸಲಾದ 167 ಮಂದಿಯ ಗಂಟಲ ದ್ರವ ಮಾದರಿ ಪೈಕಿ ಎಲ್ಲವೂ ನೆಗೆಟಿವ್ ಬಂದಿವೆ.
ಶನಿವಾರ 77 ಮಂದಿಯ ಗಂಟಲ ದ್ರವ ಮಾದರಿಯನ್ನು ಕಳುಹಿಸಿಕೊಡಲಾಗಿದೆ. ಒಟ್ಟು 65 ವರದಿಗಳು ಬರಲು ಬಾಕಿ ಇವೆ. 4 ಮಂದಿ ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. 106 ಮಂದಿಯನ್ನು ಹೊಸದಾಗಿ ತಪಾಸಣೆಗೊಳಪಡಿಸಲಾಗಿದೆ. 30 ಮಂದಿ ಸುರತ್ಕಲ್ನಲ್ಲಿ ಹಾಗೂ 10 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿದ್ದಾರೆ.
15,919 ಕಾರ್ಮಿಕರು ತವರಿಗೆ
ಜಿಲ್ಲೆಯಿಂದ ಈವರೆಗೆ ಒಟ್ಟು 15,919 ಮಂದಿ ವಲಸೆ ಕಾರ್ಮಿಕರನ್ನು ಉತ್ತರ ಪ್ರದೇಶ, ರಾಜಸ್ಥಾನ, ಬಿಹಾರ, ಝಾರ್ಖಂಡ್ ರಾಜ್ಯಗಳಿಗೆ ಶ್ರಮಿಕ್ ವಿಶೇಷ ರೈಲಿನಲ್ಲಿ ಕಳುಹಿಸಿಕೊಡಲಾಗಿದೆ. ಪುತ್ತೂರಿನಿಂದ ಉತ್ತರ ಪ್ರದೇಶಕ್ಕೆ ಹಾಗೂ ಕಂಕನಾಡಿ ಜಂಕ್ಷನ್ ರೈಲು ನಿಲ್ದಾಣದಿಂದ ಝಾರ್ಖಂಡ್ ರಾಜ್ಯಕ್ಕೆ ಪ್ರತ್ಯೇಕ ರೈಲಿನಲ್ಲಿ ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.