ಡಿಕೆಶಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Team Udayavani, Oct 11, 2019, 7:44 PM IST
ಬೆಂಗಳೂರು: ಐಟಿ ದಾಳಿ ವೇಳೆ ದೆಹಲಿಯ ನಿವಾಸಗಳಲ್ಲಿ ಸಿಕ್ಕ 8.6 ಕೋಟಿ ರೂ. ದಾಖಲೆ ಇಲ್ಲದ ಹಣ ಪತ್ತೆ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಕೋರಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಮತ್ತವರ ಆಪ್ತರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ.
ಪ್ರಕರಣದ ಆರೋಪದಿಂದ ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ಮತ್ತವರ ಆಪ್ತರಾದ ಆಂಜನೇಯ ಹನುಮಂತಯ್ಯ ಹಾಗೂ ಎನ್. ರಾಜೇಂದ್ರ ಹೈಕೋರ್ಟ್ಗೆ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.
ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿ.ಎ. ಪಾಟೀಲ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರು ಹಾಗೂ ಪ್ರತಿವಾದಿ ಆದಾಯ ತೆರಿಗೆ ಇಲಾಖೆ ಪರ ವಕೀಲರ ವಾದ-ಪ್ರತಿವಾದ ಆಲಿಸಿ, ವಿಚಾರಣೆ ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಿರುವುದಾಗಿ ಹೇಳಿತು.
ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ಈಗಾಗಲೇ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
MUST WATCH
ಹೊಸ ಸೇರ್ಪಡೆ
Retirement: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.