Congress: ಡಿಕೆಶಿ ಮುಂದಿನ ಸಿಎಂ- ನೊಣವಿನಕೆರೆ ಶ್ರೀ
Team Udayavani, Dec 9, 2023, 11:04 PM IST
ಮದ್ದೂರು: ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನೊಣವಿನಕೆರೆ ಕಾಡ ಸಿದ್ಧೇಶ್ವರ ಮಠದ ಡಾ| ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕದಲೂರು ಗ್ರಾಮದ ಪಟ್ಟಲದಮ್ಮ ದೇವಿ ಕಾರ್ತಿಕ ದೀಪೋತ್ಸವ ಕಾರ್ಯಕ್ರಮದ ಆಶೀರ್ವಚನದ ವೇಳೆ ಮುಖ್ಯಮಂತ್ರಿ ಬದಲಾವಣೆ ಕುರಿತಾದ ಮತ್ತು ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂಬ ಹೇಳಿಕೆ ಸೇರಿದ್ದ ಭಕ್ತರ ಗಮನ ಸೆಳೆಯಿತು.
ಸರಕಾರ ಪ್ರಕಟಿಸುವ ಮೀಸಲಾತಿ ಉತ್ತಮವೆಂದು ಬಣ್ಣಿಸಿದ ಶ್ರೀಗಳು, ಇದು ಎಲ್ಲರಿಗೂ ಅನುಕೂಲವಾಗಲೆಂಬ ಅಭಿಪ್ರಾಯ ವ್ಯಕ್ತಪಡಿಸಿ ಶ್ರೀಮಠದ ಪರಮ ಭಕ್ತ ಡಿ.ಕೆ.ಶಿವಕುಮಾರ್ ಮುಖ್ಯ
ಮಂತ್ರಿ ಆಗಲೆಂಬ ಆಶೀರ್ವಾದ ತಮ್ಮದೆಂದು ಈ ಕುರಿತು ಭಗವಂತನಲ್ಲಿ ಸಂಕಲ್ಪ ಕೂಡ ಮಾಡಿರುವುದಾಗಿ ಹೇಳಿದರು.
ನೊಣವಿನಕೆರೆ ಸ್ವಾಮೀಜಿ ಡಿಸಿಎಂ ಡಿ.ಕೆ.ಶಿವಕುಮಾರ ಸಿಎಂ ಆಗಲಿ ಎಂದು ಹಾರೈಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಹೈಕಮಾಂಡ್ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಹಿರಿಯ ನಾಯಕರಾದ ಸೋನಿಯಾ ಗಾಂಧಿ , ರಾಹುಲ್ ಗಾಂಧಿ ಇದ್ದಾರೆ. ಅವರೆಲ್ಲ ಪರಿಶೀಲಿಸಿ, ಶಾಸಕರ ಅಭಿಪ್ರಾಯ ಪಡೆದು ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂದು ನಿರ್ಧರಿಸುತ್ತಾರೆ .
-ಎಂ.ಬಿ.ಪಾಟೀಲ್, ಕೈಗಾರಿಕೆ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.