ಡಿಕೆಶಿ ಅನುಪಸ್ಥಿತಿ: ಕೈನಲ್ಲಿ ಲಾಭನಷ್ಟದ ಲೆಕ್ಕಾಚಾರ
Team Udayavani, Sep 26, 2019, 3:08 AM IST
ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಎದುರಾಗಿದ್ದು, ಈ ಸಂದರ್ಭದಲ್ಲೇ “ಉಪ ಚುನಾವಣೆ ಸ್ಪೆಷಲಿಸ್ಟ್ ‘ ಡಿ.ಕೆ. ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದು, ಅವರ ಅನುಪಸ್ಥಿತಿ ಬಗ್ಗೆ ಕಾಂಗ್ರೆಸ್‌ನಲ್ಲಿ ಲಾಭ ನಷ್ಟದ ಲೆಕ್ಕಾಚಾರ ನಡೆಯುತ್ತಿದೆ.
ಬಂಡಾಯ ಶಾಸಕರನ್ನು ವಾಪಸ್ ಕರೆತಂದು ಮೈತ್ರಿ ಸರ್ಕಾರ ರಕ್ಷಿಸಲು ಶತಪ್ರಯತ್ನ ಮಾಡಿದ್ದ ಡಿ.ಕೆ.ಶಿವಕುಮಾರ್ ಬಂಡಾಯಗಾರರ ಮನವೊಲಿಕೆಗೆ ಮುಂಬೈ ಬೀದಿಯಲ್ಲಿ ಮಳೆಯಲ್ಲೇ ಇಡೀ ದಿನ ಕಳೆದಿದ್ದರು. ಆದರೂ ಬಂಡಾಯ ಶಾಸಕರು ಸ್ಪಂದಿಸದಿದ್ದಾಗ ವಾಪಸ್ ಬಂದಿದ್ದ ಅವರು, ಬಂಡಾಯ ಶಾಸಕರನ್ನು ರಣರಂಗದಲ್ಲಿ ಎದುರಿಸುವುದಾಗಿ ವಿಧಾನಸಭೆಯಲ್ಲಿ ಸವಾಲು ಹಾಕಿದ್ದರು.
ಆದರೆ, ಡಿಕೆಶಿ ಜೈಲು ಸೇರಿರುವುದರಿಂದ ಕಾಂಗ್ರೆಸ್‌ಗೆ ಸ್ವಲ್ಪ ಮಟ್ಟಿನ ಹಿನ್ನಡೆಯಾಗುತ್ತದೆ ಎಂಬ ಮಾತು ಕೇಳಿ ಬರುತ್ತಿವೆ. ಹೊಸಪೇಟೆ, ಹುಣಸೂರು, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಹೊಸಕೋಟೆ, ಹಿರೇಕೆರೂರು ಕ್ಷೇತ್ರಗಳಲ್ಲಿ ಶಿವಕುಮಾರ್ ಪ್ರಭಾವ ಹೆಚ್ಚಿದೆ ಎನ್ನಲಾಗುತ್ತಿದ್ದು, ಈ ಕ್ಷೇತ್ರಗಳಲ್ಲಿ ಅವರ ಅನುಪಸ್ಥಿತಿ ಕಾಂಗ್ರೆಸ್ ಅಭ್ಯರ್ಥಿಗಳ ಆತಂಕಕ್ಕೆ ಕಾರಣವಾಗಿದೆ.
ಕಾರ್ಯತಂತ್ರ ಕರಗತ: ಡಿ.ಕೆ.ಶಿವಕುಮಾರ್ ಯಾವುದೇ ಕ್ಷೇತ್ರದ ಉಪ ಚುನಾವಣೆಯ ಜವಾಬ್ದಾರಿ ವಹಿಸಿಕೊಂಡ ನಂತರ ಮೊದಲು ಆ ಕ್ಷೇತ್ರದಲ್ಲಿ ತಮ್ಮದೇ ಆದ ಖಾಸಗಿ ಸಮೀಕ್ಷೆ ನಡೆಸಿ, ಪಕ್ಷದ ನಾಯಕರು, ಕಾರ್ಯಕರ್ತರ ಶಕ್ತಿ ಸಾಮರ್ಥ್ಯ ತಿಳಿಯುವುದರ ಜೊತೆಗೆ ವಿರೋಧಿಗಳ ಶಕ್ತಿ ಹಾಗೂ ದೌರ್ಬಲ್ಯವನ್ನು ತಿಳಿಯುವ ಪ್ರಯತ್ನ ಮಾಡುತ್ತಾರೆ. ಆ ನಂತರ ಕ್ಷೇತ್ರದಲ್ಲಿ ಸಕ್ರಿಯವಾಗಿ ಕೆಲಸ ಮಾಡುವ ಯುವಕರ ತಂಡ ರಚಿಸಿ ಜವಾಬ್ದಾರಿಗಳ ಹಂಚಿಕೆ ಮಾಡುತ್ತಾರೆ.
ಆ ತಂಡವನ್ನೇ ಇಡೀ ಚುನಾವಣಾ ಕಾರ್ಯತಂತ್ರದ ಶಕ್ತಿಯಾಗಿ ಬಳಕೆ ಮಾಡಿಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದೆ. ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಯಾರನ್ನೂ ನಿರ್ಲಕ್ಷ್ಯ ಮಾಡದೇ ಮುನಿಸಿ ಕೊಂಡವರು, ಬಂಡಾಯಗಾರರನ್ನು ಕರೆದು ಸಂಧಾನ ಮಾಡುವ ಕೆಲಸ ಕರಗತ ಮಾಡಿಕೊಂ ಡಿರುವುದು ಉಪ ಚುನಾವಣೆಗಳಲ್ಲಿ ಪಕ್ಷಕ್ಕೆ ಆಗುವ ಹಾನಿಯನ್ನು ತಪ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎನ್ನುವ ಅಭಿಪ್ರಾಯವಿದೆ.
ಅಲ್ಲದೇ ವಿರೋಧಿ ಪಾಳಯದಲ್ಲಿರುವವರ ದೌರ್ಬಲ್ಯಗಳನ್ನು ಗುರುತಿಸಿ ಅವರನ್ನು ಪರೋಕ್ಷ ಅಥವಾ ನೇರವಾಗಿಯೇ ಪಕ್ಷದ ಅಭ್ಯರ್ಥಿಗೆ ಬೆಂಬಲ ಪಡೆಯುವಂತೆ ಮಾಡಿಸುವಲ್ಲೂ ಶಿವಕುಮಾರ್ ಚಾಣಾಕ್ಷರು ಎನ್ನಲಾಗುತ್ತದೆ. ಇದೀಗ ಅವರೇ ಜೈಲಿನಲ್ಲಿರುವುದರಿಂದ ಅವರ ಆಪ್ತರು ಉಪ ಚುನಾವಣೆಯ ಚುಟುವಟಿಕೆ ಗಳಿಂದ ಅಂತರ ಕಾಯ್ದುಕೊಳ್ಳುವ ಸಾಧ್ಯತೆ ಇದೆ. ತಮ್ಮ ನಾಯಕ ಇಲ್ಲದೇ ಚುನಾವಣೆ ಕಣಕ್ಕೆ ಹೋಗಿ ಪ್ರಯೋಜನವಿಲ್ಲ ಎನ್ನುವ ಮನಸ್ಥಿತಿ ಹೊಂದಿದ್ದಾರೆ ಎನ್ನಲಾಗುತ್ತಿದೆ.
ಗಂಭೀರವಾಗಿ ಪರಿಗಣಿಸದ ನಾಯಕರು: ಶಿವಕುಮಾರ್ ಇಲ್ಲದೆಯೂ ಉಪ ಚುನಾವಣೆಗಳನ್ನು ಗೆಲ್ಲುವ ಸಾಮರ್ಥ್ಯ ಪಕ್ಷ ಹಾಗೂ ಇತರ ನಾಯಕರಿಗೆ ಇದೆ ಎನ್ನುವ ಭಾವನೆ ಪಕ್ಷದ ಘಟಾನುಘಟಿ ನಾಯಕರಿಗೆ ಇರುವುದರಿಂದ ಡಿಕೆಶಿ ಅನುಪಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬ ಮಾತು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿವೆ. ಆದರೆ, ಶಿವಕುಮಾರ್ ಅನುಪಸ್ಥಿತಿಯಲ್ಲಿ ಉಪ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಿಸಿಕೊಂಡು ಬರುವುದೂ ಕೂಡ ಉಳಿದ ನಾಯಕರ ನಾಯಕತ್ವಕ್ಕೆ ಸವಾಲು ಎಂಬ ಮಾತುಗಳು ಡಿಕೆಶಿ ಆಪ್ತ ವಲಯದಲ್ಲಿ ಕೇಳಿ ಬರುತ್ತಿವೆ.
* ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.