ಅನುದಾನಿತ ಪ್ರೌಢಶಾಲೆಗೆ ನೇಮಕಾತಿ ಮಾಡಿಕೊಳ್ಳಬೇಡಿ;ಮಾರ್ಗಸೂಚಿ/ಸುತ್ತೋಲೆ ಬಿಡುಗಡೆವರೆಗೆ ತಡೆ
Team Udayavani, Sep 8, 2024, 11:42 PM IST
ಬೆಂಗಳೂರು: ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ 2016ರ ಜನವರಿ ಒಂದರಿಂದ 2020ರ ಡಿಸೆಂಬರ್ 31ರ ವರೆಗಿನ ಅವಧಿಯಲ್ಲಿ ನಿವೃತ್ತಿ, ನಿಧನ ಮತ್ತು ರಾಜೀನಾಮೆಯಿಂದ ತೆರವಾಗಿರುವ ಹುದ್ದೆಗಳನ್ನು ಭರ್ತಿ ಮಾಡಲು ತತ್ಕ್ಷಣ ಕ್ರಮ ಕೈಗೊಳ್ಳದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಆಯುಕ್ತೆ ಬಿ. ಬಿ. ಕಾವೇರಿ ಅವರು ಜಿಲ್ಲಾ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ 2016 -2020ರ ಅವಧಿಯಲ್ಲಿ ಖಾಲಿಯಾಗಿರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿತ್ತು. ಆದರೆ, ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಾರ್ಗಸೂಚಿ ಅಥವಾ ಸುತ್ತೋಲೆ ಹೊರಡಿಸುವ ಮುಂಚಿತವಾಗಿಯೇ ಕೆಲವು ಜಿಲ್ಲೆಗಳ ಉಪನಿರ್ದೇಶಕರು ಹುದ್ದೆ ಭರ್ತಿ ಅನುಮತಿ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ಶಾಲೆಗಳ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಆಯುಕ್ತರು ಈ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾರ್ಗಸೂಚಿ ಅಥವಾ ಸುತ್ತೋಲೆ ಬಿಡುಗಡೆ ಮಾಡುವ ತನಕ ನೇಮಕಾತಿಗೆ ಕ್ರಮ ಕೈಗೊಳ್ಳಬಾರದು. ಒಂದು ವೇಳೆ ಆದೇಶ ಉಲ್ಲಂಘಿಸಿದರೆ ಸಂಬಂಧಿತ ಅಧಿಕಾರಿಯನ್ನೇ ಹೊಣೆ ಮಾಡ ಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.