ಕೆಪಿಎಸ್‌ಸಿಯಿಂದಲೇ ವ್ಯಾಪಾರ ನಡೆಸುವರೇ?

Team Udayavani, Dec 19, 2019, 3:08 AM IST

revanna

ಬೆಂಗಳೂರು: ಲೋಕೋಪಯೋಗಿ ಇಲಾಖೆಯಲ್ಲಿ 870 ಎಂಜಿನಿಯರ್‌ಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಆಯ್ಕೆ ಪ್ರಕ್ರಿಯೆ ಕೈಬಿಟ್ಟು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವೂಲಕ ನೇಮಕಾತಿಗೆ ಸರ್ಕಾರ ಮುಂದಾಗಿರುವುದು ಸರಿಯಲ್ಲ. ಬಿಜೆಪಿ, ಕೆಪಿಎಸ್‌ಸಿ ಅಧ್ಯಕ್ಷರು ಹಾಗೂ ಮೂವರು ಸದಸ್ಯರನ್ನು ನೇಮಿಸಿದ್ದು, ಅಲ್ಲಿಯೇ ವ್ಯಾಪಾರ ಮಾಡುತ್ತಾರೆಯೇ ಎಂದು ಮಾಜಿ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಪ್ರಶ್ನಿಸಿದರು.

ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ/ ಕಿರಿಯ ಎಂಜಿನಿಯರ್‌ ಹುದ್ದೆ ಖಾಲಿಯಿತ್ತು. ಇಲಾಖೆ ವತಿಯಿಂದ ಸಾವಿರಾರು ಕೋಟಿ ರೂ. ಮೊತ್ತದ ಕಾಮಗಾರಿ ಕೈಗೊಳ್ಳಬೇಕಾದ ಕಾರಣ ಕೆಇಎ ಮೂಲಕ ನೇಮಕಕ್ಕೆ ಹಿಂದಿನ ಸರ್ಕಾರದ ಅವಧಿಯಲ್ಲಿ ನಿರ್ಧರಿಸಲಾಗಿತ್ತು. ಈ ಉದ್ದೇಶ ಹೊರತುಪಡಿಸಿ ಬೇರೆ ಕಾರಣವಿಲ್ಲ ಎಂದ‌ರು.

ಅನ್ಯಾಯವಾಗುತ್ತೆ: ಕೆಇಎ ವತಿಯಿಂದ ಲಿಖೀತ ಪರೀಕ್ಷೆ ನಡೆಸಿ ನಂತರ ಆಯ್ಕೆ ಸಮಿತಿ ಸಂದರ್ಶನದ ಮೂಲಕ ಎಂಜಿನಿಯರ್‌ಗಳ ನೇಮಕಾತಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ಶಿಫಾರಸು ಮಾಡಿತ್ತು. ನಂತರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಸಮಿತಿ ಅನುಮೋದನೆ ಮೇರೆಗೆ ಆರ್ಥಿಕ ಇಲಾಖೆ ಸಹಮತ ಪಡೆದ ನಂತರ ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ಅದರಂತೆ 64,000 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, ಫ‌ಲಿತಾಂಶ ಪ್ರಕಟಣೆ ಬಾಕಿ ಇದೆ. ಕೆಇಎ ನೇಮಕ ಪ್ರಕ್ರಿಯೆ ಹಿನ್ನೆಲೆಯಲ್ಲಿ 1.99 ಕೋಟಿ ರೂ. ಹಣವನ್ನು ಲೋಕೋಪಯೋಗಿ ಇಲಾಖೆ ಭರಿಸಬೇಕಿದೆ. ಈ ಹಂತದಲ್ಲಿ ನೇಮಕಾತಿ ಪ್ರಕ್ರಿಯೆ ರದ್ದುಪಡಿಸಿದರೆ ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂದು ಹೇಳಿದರು.

ಅನಗತ್ಯ ಆರೋಪ: ಕೆಇಎ ನೇಮಕಾತಿಯಲ್ಲಿ ನಾವು ಏನು ಮಾಡಲು ಸಾಧ್ಯ? ಬ್ರಹ್ಮನೇ ಬಂದರೂ ಒಬ್ಬರನ್ನೂ ಪಾಸ್‌ ಮಾಡಲು ಆಗಲ್ಲ. ಹಾಗಿದ್ದರೂ ಕೆಪಿಎಸ್‌ಸಿಗೆ ವಹಿಸಲು ಬಿಜೆಪಿ ಸರ್ಕಾರ ನಿರ್ಧರಿಸಿದೆ. ಆದರೆ, ಕೆಪಿಎಸ್‌ಸಿ ಎಷ್ಟು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ. ಮುಖ್ಯಮಂತ್ರಿಗಳೇ ಕೆಪಿಎಸ್‌ಸಿ ಅಧ್ಯಕ್ಷರು, ಮೂವರು ಸದಸ್ಯರನ್ನು ನೇಮಿಸಿದ್ದು, ಅಲ್ಲಿ ಏನು ಬೇಕಾದರೂ ಮಾಡಬಹುದು. ಹೀಗಿರುವಾಗ ನನ್ನ ಮೇಲೆ ಅನಗತ್ಯವಾಗಿ ಆರೋಪ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.

ಗೌರವ ಹಾಳು ಮಾಡಬೇಡಿ: ಕೆಇಎ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದ್ದರೆ ಆ ಬಗ್ಗೆ ಸಿಬಿಐ ತನಿಖೆ ಬೇಕಾದರೆ ನಡೆಸಲಿ. ಅನಗತ್ಯವಾಗಿ ನನ್ನ ಮೇಲೆ ಆರೋಪ ಮಾಡಬಾರದು. ಹಾಗೆಯೇ ಸರ್ಕಾರದ ಸಂಸ್ಥೆಯೇ ಆದ ಕೆಇಎ ಗೌರವವನ್ನು ಹಾಳು ಮಾಡಬಾರದು ಎಂದರು. ಮಾಜಿ ಸಚಿವ ವೆಂಕಟರಾವ್‌ ನಾಡಗೌಡ ಉಪಸ್ಥಿತರಿದ್ದರು.

ರಿಪೇರಿ ಮಾಡುವುದು ಗೊತ್ತಿದೆ!: ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಒಂದು ಗಂಟೆಯಲ್ಲೇ ಕೆಎಂಎಫ್ಗೆ ಸಂಬಂಧಪಟ್ಟಂತೆ ಆದೇಶ ಹೊರಡಿಸಿದ್ದಾರೆ. ದಾಖಲೆ ಹೇಗೆ ತೆಗೆಯಬೇಕು ಎಂಬುದು ನಮಗೂ ಗೊತ್ತಿದೆ ಎಂದು ರೇವಣ್ಣ ಟಾಂಗ್‌ ನೀಡಿದರು. ಸರ್ಕಾರದ 100 ದಿನದ ಆಡಳಿತದಲ್ಲಿ ಏನೆಲ್ಲಾ ನಡೆದಿದೆ ಎಂಬುದನ್ನು ಜನರಿಗೆ ಎಳೆ ಎಳೆಯಾಗಿ ಬಿಡಿಸಿ ಹೇಳುತ್ತೇನೆ. ಹಿಂದೆ ದಾಖಲೆ ಪಡೆಯುವ ಕೀ ಇತ್ತು. ಈಗ ಇಲ್ಲ. ಕೀ ಮಾಡಿಸಬೇಕಿದ್ದು, ಹುಡುಕುತ್ತಿದ್ದೇನೆ. ನಾನು ಐದು ಬಾರಿ ಶಾಸಕನಾದವನು. ಇಂಥದ್ದನ್ನೆಲ್ಲಾ ಎದುರಿಸಿಕೊಂಡೇ ಇಲ್ಲಿವರೆಗೆ ಬಂದಿದ್ದೇನೆ ಎಂದರು.

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.