![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 29, 2023, 10:51 PM IST
ಹುಬ್ಬಳ್ಳಿ: ರಾಜ್ಯದಲ್ಲಿ ಖಾಸಗಿ ಅನುದಾನಿತ, ಅನುದಾನ ರಹಿತ ಶಾಲಾ-ಕಾಲೇಜುಗಳ ಮಾನ್ಯತೆ ನವೀಕರಣಕ್ಕೆ ಪ್ರತಿ ವರ್ಷ ದಾಖಲೆ ಕೇಳುವುದು ಸರಿಯಲ್ಲ. ಈ ಅವೈಜ್ಞಾನಿಕ ಪದ್ಧತಿಯನ್ನು ಸರಿಪಡಿಸಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ.
ಖಾಸಗಿ ಶಾಲಾ-ಕಾಲೇಜುಗಳ ಮಾನ್ಯತೆ ನವೀಕರಣಕ್ಕೆ ಹಲವಾರು ಷರತ್ತುಗಳನ್ನು ವಿಧಿಸಲಾಗುತ್ತಿದೆ. ಸರಕಾರಿ ಶಾಲೆಗಳಿಗೆ ಇಲ್ಲದ ನಿಯಮಗಳು ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ಮಾತ್ರ ವಿಧಿಸುತ್ತಿರುವುದು ಸರಿಯಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಈ ಹಿಂದೆ ತಾವು ಶಿಕ್ಷಣ ಸಚಿವರಾಗಿದ್ದಾಗ ಪ್ರತಿ 5, 10 ಹಾಗೂ 15 ವರ್ಷಕ್ಕೊಮ್ಮೆ ಮಾನ್ಯತೆ ನವೀಕರಣ, ಅನಂತರ ಶಾಶ್ವತ ಮಾನ್ಯತೆ ನವೀಕರಣ ನೀಡುವ ಕುರಿತಾಗಿ ಆದೇಶಿಸಿದ್ದೆ. ಒಂದೆರಡು ವರ್ಷ ಆ ಆದೇಶ ಪಾಲಿಸಿದ ಶಿಕ್ಷಣ ಇಲಾಖೆ ಅಧಿಕಾರಿಗಳು ಪುನಃ ಪ್ರತಿ ವರ್ಷ ಮಾನ್ಯತೆ ನವೀಕರಣ ಪ್ರಸ್ತಾವನೆ ಸಲ್ಲಿಸಲು ಸೂಚಿಸುತ್ತಿರುವುದು ಯಾವುದಕ್ಕೆ ಎಂಬುದು ಅರ್ಥವಾಗುತ್ತಿಲ್ಲ. 2006-07ನೇ ಸಾಲಿನಲ್ಲಿ ತಾವು ಸಚಿವರಾಗಿದ್ದಾಗ ಜಾರಿಗೊಳಿಸಿದ್ದ ಆದೇಶವನ್ನೇ ಜಾರಿಗೆ ತರಲು ಕ್ರಮ ಕೈಗೊಳ್ಳಬೇಕೆಂದು ಸಭಾಪತಿ ಹೊರಟ್ಟಿ ಆಗ್ರಹಿಸಿದ್ದಾರೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.