![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, May 19, 2024, 8:49 PM IST
ಗುಂಡ್ಲುಪೇಟೆ(ಚಾಮರಾಜನಗರ): ನಾಯಿಗಳ ದಾಳಿಗೆ ಹತ್ತು ಕುರಿಗಳು ಬಲಿಯಾಗಿರುವ ಘಟನೆ ಪಟ್ಟಣದ ಹೊರವಲಯದ ಡೋಂಗ್ರಿ ಗೆರೆಸಿಯಾ ಕಾಲೋನಿ ಬಳಿ ನಡೆದಿದೆ.
ತಾಲ್ಲೂಕಿನ ಮಾಡ್ರಹಳ್ಳಿ ಗ್ರಾಮದ ನಾಗಮ್ಮ/ಮಾದಪ್ಪ ಎಂಬುವರಿಗೆ ಸೇರಿದ ಕುರಿಗಳು ಇದಾಗಿದೆ. ಡೋಂಗ್ರಿ ಗೆರೆಸಿಯಾ ಕಾಲೋನಿಯ ಪಕ್ಕದಲ್ಲಿರುವ ಜಮೀನಿನಲ್ಲಿ ಮಾಲೀಕರು ಕುರಿ ಮೇಯಿಸುತ್ತಿದ್ದ ವೇಳೆ ನಾಯಿಗಳ ಹಿಂಡು ಏಕಾಏಕಿ ದಾಳಿ ನಡೆಸಿ 10 ಕುರಿಗಳನ್ನು ಕೊಂದು ಹಾಕಿದೆ. ಉಳಿದ ಎರಡು ಕುರಿಗಳಿಗೂ ಕೂಡ ತೀವ್ರತರವಾದ ಗಾಯಗಳಾಗಿದೆ. ಮಾಲೀಕರು ಕಡು ಬಡವರಾಗಿದ್ದು, ಘಟನೆಯಿಂದ ಲಕ್ಷಾಂತರ ರೂ ನಷ್ಟ ಉಂಟಾಗಿದೆ.
ಸೂಕ್ತ ಪರಿಹಾರಕ್ಕೆ ಒತ್ತಾಯ: ಸುಮಾರು ಹತ್ತು ಕುರಿಗಳನ್ನು ನಾಯಿಗಳ ಹಿಂಡು ದಾಳಿ ನಡೆಸಿ ಕೊಂದು ಹಾಕಿರುವ ಪರಿಣಾಮ ಮಾಲೀಕರಿಗೆ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಈ ಹಿನ್ನೆಲೆ ಸೂಕ್ತ ಪರಿಹಾರ ನೀಡುವಂತೆ ಮಾಲೀಕರು ಒತ್ತಾಯಿಸಿದ್ದಾರೆ.
ಈ ಸಂಬಂಧ ಮಾಲೀಕರು ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.