![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jan 8, 2021, 12:10 PM IST
ಧಾರವಾಡ: ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ಪಶು ಚಿಕಿತ್ಸಾ ವಿಭಾಗದ ವೈದ್ಯ ಡಾ|ಅನಿಲಕುಮಾರ ಪಾಟೀಲ ಮತ್ತು ತಂಡವು ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಾಯಿಯೊಂದಕ್ಕೆ ವಿಶೇಷ ಚಿಕಿತ್ಸೆ ಮಾಡಿ ಅದರ ಹೊಟ್ಟೆಯೊಳಗಿನ ಹತ್ತು ಕ್ಯಾನ್ಸರ್ ಗಡ್ಡೆಗಳನ್ನು ಹೊರ ತೆಗೆದಿದ್ದಾರೆ.
ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬರಿಗೆ ಸೇರಿದ ಲಾಬೋಡಾರ್ ಎಂಬ ನಾಯಿಯೇ ಈ ವಿಶೇಷ ಚಿಕಿತ್ಸೆಗೆ ಒಳಗಾಗಿದ್ದು, ಈ ನಾಯಿಗೆ ಅಬ್ದೋಮಿನಲ್ ಟ್ಯೂಮರ್ (ಕ್ಯಾನ್ಸರ್ ಗಡ್ಡೆ) ಕಾಯಿಲೆಗೆ ತುತ್ತಾಗಿತ್ತು. ಇದೇ ನಾಯಿಗೆ ಒಂದೂವರೆ ವರ್ಷ ಇದ್ದಾಗಲೂ ಸಹ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ನಾಯಿ ಹತ್ತು ದಿನಗಳಿಂದ ಯಾವುದೇ ಆಹಾರ ಸೇವಿಸದೇ ಒದ್ದಾಡುತ್ತಿತ್ತು. ಏನೇ ತಿಂದರೂ ವಾಂತಿ
ಮಾಡಿಕೊಳ್ಳುತ್ತಿತ್ತು. ಈ ಹಿನ್ನೆಲೆಯಲ್ಲಿ ನಾಯಿಯನ್ನು ಡಾ|ಅನಿಲಕುಮಾರರ ಬಳಿ ತರಲಾಗಿತ್ತು. ಗುರುವಾರ ಬೆಳಿಗ್ಗೆ ನಾಯಿಯ ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಪಶು ವೈದ್ಯಕೀಯ ಚಿಕಿತ್ಸಾಲಯಕ್ಕೆ ತರಲಾಗಿತ್ತು. ಈ ವೇಳೆ ಸೋನೋಗ್ರಾಫಿ ಮಾಡಿ ನೋಡಿದಾಗ ಹೊಟ್ಟೆಯೊಳಗೆ ಗಂಟುಗಳಿರುವುದು ಪತ್ತೆಯಾಗಿದ್ದವು. ಆಗ ಆಸ್ಪತ್ರೆಯಲ್ಲಿದ್ದ ಉಪಕರಣಗಳಲ್ಲೇ ಡಾ| ಅನೀಲ ಕುಮಾರ್ ಪಾಟೀಲ ನೇತೃತ್ವದ ತಂಡವು ಸತತ ಮೂರು ಗಂಟೆಗಳ ಕಾಲ ತುರ್ತು ಶಸ್ತ್ರಚಿಕಿತ್ಸೆ ಮಾಡಿದೆ. ಕಾರಣ ನಾಯಿಗಳ ಹೊಟ್ಟೆಯಲ್ಲಿ ಈ ರೀತಿ ಗಡ್ಡೆಗಳು ಬೆಳೆಯುವುದು ಸಾಮಾನ್ಯವಾದರೂ 10 ಗಡ್ಡೆಗಳು ಬೆಳೆಯುವುದು ಅಪರೂಪ.
ಇದನ್ನೂ ಓದಿ:ಮೂರು ಕೃಷಿ ಕಾಯ್ದೆ ರದ್ದುಪಡಿಸುವ ಪ್ರಶ್ನೆಯೇ ಇಲ್ಲ: ರೈತರ ಜತೆಗಿನ ಮಾತುಕತೆಗೆ ಮುನ್ನ ಕೇಂದ್ರ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.