ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ; ಉಪನ್ಯಾಸಕರ ಒಂದು ದಿನದ ವೇತನ
Team Udayavani, Mar 28, 2020, 5:45 AM IST
ಬೆಂಗಳೂರು: ಕೋವಿಡ್ 19 ತಡೆಯುವ ನಿಟ್ಟಿನಲ್ಲಿ ರಾಜ್ಯದ ವಿಶ್ವವಿದ್ಯಾನಿಲಯ ಮತ್ತು ಪದವಿ ಕಾಲೇಜುಗಳ ಉಪನ್ಯಾಸಕರು ತಮ್ಮ ಒಂದು ದಿನದ ವೇತನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದ್ದಾರೆ.
ಕೋವಿಡ್-19 ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರಕ್ಕೆ ಸ್ಪಂದನ ನೀಡಲು ಒಂದು ದಿನದ ವೇತನವನ್ನು ಸಿಎಂ ಪರಿಹಾರ ನಿಧಿಗೆ ನೀಡಲು ರಾಜ್ಯದ ವಿವಿ ಮತ್ತು ಪದವಿ ಕಾಲೇಜಿನ ಉಪನ್ಯಾಸಕರು ನಿರ್ಧರಿಸಿದ್ದಾರೆ. ಅಂದಾಜು 10 ಕೋ. ರೂ. ಸಂಗ್ರಹ ವಾಗಲಿದ್ದು, ಡಿಸಿಎಂ ಡಾ| ಸಿ.ಎನ್. ಅಶ್ವತ್ಥನಾರಾಯಣ ಮೂಲಕ ಇದನ್ನು ಸರಕಾರಕ್ಕೆ ನೀಡಲಾಗುವುದು ಎಂದು ವಿವಿ ಮತ್ತು ಕಾಲೇಜು ಉಪನ್ಯಾಸಕರ ಒಕ್ಕೂಟದ ಅಧ್ಯಕ್ಷ ಡಾ|ಬಿ.ಜಿ.ಭಾಸ್ಕರ್ ತಿಳಿಸಿದ್ದಾರೆ.
ತಲಾ 1 ಲಕ್ಷ ರೂ. ನೀಡಿದ ಕೈ ಶಾಸಕರು
ಬೆಂಗಳೂರು: ಕೋವಿಡ್ 19 ಮಹಾಮಾರಿ ಸೋಂಕು ನಿಯಂತ್ರಣಕ್ಕಾಗಿ ಕಾಂಗ್ರೆಸ್ ಶಾಸಕರು ತಲಾ ಕನಿಷ್ಠ ಒಂದು ಲಕ್ಷ ರೂ. ದೇಣಿಗೆ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಸಮಸ್ಯೆ ಎದುರಿಸಲು ಹಾಗೂ ಅಗತ್ಯ ಜನರಿಗೆ ನೆರವಾಗಲು ಕಾಂಗ್ರೆಸ್ ತೀರ್ಮಾನಿಸಿದೆ. ಇನ್ನು ಜಿಲ್ಲೆ ತಾಲೂಕು ಮಟ್ಟದ ನಾಯಕರು ಮತ್ತು ಕಾರ್ಯಕರ್ತರು ಸ್ವಯಂ ಇಚ್ಛೆಯಿಂದ ದೇಣಿಗೆ ನೀಡಬಹುದು. ಎಲ್ಲ ಶಾಸಕರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಮೂಲಕ ತಮ್ಮ ದೇಣಿಗೆಯನ್ನು ನೀಡಲಿರುವರು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
Congress: ಶಾಸಕರಿಗೆ 100 ಕೋ.ರೂ. ಆಮಿಷಕ್ಕೆ ದಾಖಲೆ ಕೊಡಿ: ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.